Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೆನ್ನೈತ್ತೋಡಿ: ಒಂದೇ ಗ್ರಾಮದಲ್ಲಿ ಎರಡು...

ಚೆನ್ನೈತ್ತೋಡಿ: ಒಂದೇ ಗ್ರಾಮದಲ್ಲಿ ಎರಡು ಸುಸಜ್ಜಿತ ಹಾಸ್ಟೆಲ್‌ಗಳು!

6.73 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

ಅಬ್ದುಲ್ ರಹಿಮಾನ್ ತಲಪಾಡಿಅಬ್ದುಲ್ ರಹಿಮಾನ್ ತಲಪಾಡಿ1 July 2019 11:33 AM IST
share
ಚೆನ್ನೈತ್ತೋಡಿ: ಒಂದೇ ಗ್ರಾಮದಲ್ಲಿ ಎರಡು ಸುಸಜ್ಜಿತ ಹಾಸ್ಟೆಲ್‌ಗಳು!

► ಬಿಸಿಎಂ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ 2 ಹಾಸ್ಟೆಲ್‌ಗಳು

ಬಂಟ್ವಾಳ, ಜು.1: ಗ್ರಾಮೀಣ ಪ್ರದೇಶದಕ್ಕೆ ಹಾಸ್ಟೆಲ್‌ವೊಂದು ಮಂಜೂರು ಮಾಡಿಸಿಕೊಳ್ಳುವುದು ಸುಲಭದ ಮಾತಲ್ಲ. ಅಂತದರಲ್ಲಿ ಒಂದೇ ಗ್ರಾಮದಲ್ಲಿ, ಒಂದೇ ವಿನ್ಯಾಸದ ಎರಡು ಸುಸಜ್ಜಿತ ವಿದ್ಯಾರ್ಥಿ ನಿಲಯಗಳು ನಿರ್ಮಾಣಗೊಳ್ಳುತ್ತಿರುವುದು ಪ್ರಮುಖ ವಿಷಯವೆನಿಸಿದೆ. ಬಂಟ್ವಾಳ ತಾಲೂಕಿನ ಗ್ರಾಮೀಣ ಪ್ರದೇಶವಾದ ವಾಮದಪದವಿನಲ್ಲಿ ಬಿಸಿಎಂ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಎರಡು ವಿದ್ಯಾರ್ಥಿ ನಿಲಯಗಳು ನಿರ್ಮಾಣಗೊಳ್ಳುತ್ತಿದ್ದು, ಸೆಪ್ಟಂಬರ್‌ನಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆಯಿದೆ.

ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಹಾಸ್ಟೆಲ್‌ನ ಸ್ವಂತ ಕಟ್ಟಡ ಬೇಕೆನ್ನುವ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಅಧಿಕಾರವಧಿಯಲ್ಲಿ ಎರಡು ಕಟ್ಟಡಗಳು ವಾಮದಪದವಿಗೆ ಮಂಜೂರುಗೊಂಡಿವೆ. ಶಾಶ್ವತ ಯೋಜನೆಗಳ ಪೈಕಿ ಹಲವಾರು ಯೋಜನೆಗಳ ಕಾಮಗಾರಿಗಳು ನಿರ್ಮಾಣ ಹಂತದಲ್ಲಿದ್ದು, ಬಾಲಕಿಯರ ವಿದ್ಯಾರ್ಥಿನಿಲಯವೂ ಒಂದು. ಬಂಟ್ವಾಳ ತಾಲೂಕು ಕೇಂದ್ರದಿಂದ ಸುಮಾರು 12 ಕಿ.ಮೀ. ದೂರದಲ್ಲಿರುವ ವಾಮದಪದವು ಅಭಿವೃದ್ಧಿಯ ಪಥದ ಲ್ಲಿರುವ ಗ್ರಾಮವಾಗಿದ್ದು, ಹಿಂದೆ ಈ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಗರ ಅಥವಾ ದೂರದ ಪ್ರದೇಶಗಳಿಗೆ ಹೋಗಬೇಕಿತ್ತು. ಆದರೆ, ಇಲ್ಲಿ ಒಂದೇ ಪರಿಸರದಲ್ಲಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ವಿದ್ಯಾಭ್ಯಾಸದ ಜೊತೆಗೆ ಸ್ನಾತಕೋತ್ತರ ಪದವಿ ಪಡೆಯುವ ಸೌಲಭ್ಯ ಒದಗಿದ ಬಳಿಕ ಸ್ಥಳೀಯ ವಿದ್ಯಾರ್ಥಿ ಗಳು ಮಾತ್ರವಲ್ಲದೆ ಹೊರ ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ವಾಮದಪದವಿಗೆ ಬರಲಾರಂಭಿಸಿದ್ದಾರೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ಸೌಲಭ್ಯ ಕೂಡ ಶಾಲೆ, ಕಾಲೇಜಿನ ಪಕ್ಕದಲ್ಲೇ ಇರುವುದರಿಂದ ವಾಮದಪದವು ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಬಿಸಿಎಂ ಇಲಾಖೆಯ 4 ಹಾಸ್ಟೆಲ್‌ಗಳು ವಾಮದಪದವಿನಲ್ಲಿದ್ದು, ತಲಾ ಒಂದು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ಗಳಾದರೆ, ಎರಡು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಾಗಿವೆ. ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡವಿದ್ದರೆ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರತೀ ವರ್ಷವೂ ವಿದ್ಯಾರ್ಥಿನಿಯರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ವಿಶಾಲ ಹಾಗೂ ಸುಸಜ್ಜಿತ ವಿದ್ಯಾರ್ಥಿನಿ ನಿಲಯದ ಅವಶ್ಯಕತೆ ಮನಗಂಡು ಒಂದೇ ಗ್ರಾಮದಲ್ಲಿ ಎರಡು ಬಾಲಕಿಯರ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಕಟ್ಟಡದಲ್ಲಿರುವ ವಿದ್ಯಾರ್ಥಿನಿ ನಿಲಯ ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

6.73 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

3.37 ಕೋಟಿ ರೂ. ಹಾಗೂ 3.36 ಕೋಟಿ ರೂ. ಎರಡು ಪ್ರತ್ಯೇಕ ವಿದ್ಯಾರ್ಥಿನಿ ನಿಲಯಗಳು ಚೆನ್ನೈತ್ತೋಡಿ ಗ್ರಾಪಂ ವ್ಯಾಪ್ತಿಯ ಅಜ್ಜಿಬೆಟ್ಟು ಗ್ರಾಮದ ಪಾಲೆದಡಿ ಹಾಗೂ ಪಚ್ಚೇರು ಪಲ್ಕೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಏಕ ರೂಪದ ವಿನ್ಯಾಸ ಹೊಂದಿದೆ. ಬೆಂಗಳೂರಿನ ಎಂ.ಕೆ.ಕೆ.ವಿ. ಕನ್‌ಸ್ಟ್ರಕ್ಷನ್ ಸಂಸ್ಥೆ ನಿರ್ಮಾಣದ ಗುತ್ತಿಗೆಯನ್ನು ವಹಿಸಿಕೊಂಡಿದ್ದು, ಎರಡೂ ಕಟ್ಟಡಗಳ ಕಾಮಗಾರಿ ಒಟ್ಟಿಗೆ ಪೂರ್ಣಗೊಳ್ಳಲಿದೆ.

ಏನೇನಿದೆ?: ಎರಡು ಅಂತಸ್ತಿನ ಕಟ್ಟಡದಲ್ಲಿ 16 ವಿದ್ಯಾರ್ಥಿ ಕೊಠಡಿಗಳು, 1 ಅಡುಗೆಕೋಣೆ, 1 ಡೈನಿಂಗ್ ಹಾಲ್, 1 ಸ್ಟೋರ್ ರೂಂ, ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿಗಳು ಇದರಲ್ಲಿವೆ. 2017ರಲ್ಲಿ ಮಂಜೂರುಗೊಂಡಿದ್ದು, 2018ರ ಎಪ್ರಿಲ್ ತಿಂಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಮುಂದಿನ ಸೆಷ್ಟಂಬರ್ ತಿಂಗಳಿನಲ್ಲಿ ಕೆಲಸ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ವಾಮದಪದವಿನಲ್ಲಿ ಮೂಲಭೂತ ಸೌಕರ್ಯ ಗಳೊಂದಿಗೆ ಸರಕಾರಿ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ಈ ಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಕಾಲೇಜಿಗೆ ಅನುಕೂಲವಾಗುವಂತೆ 3 ಹಾಸ್ಟೆಲ್‌ಗಳು ಮಂಜೂರಾಗಿವೆ. ಈ ಪೈಕಿ ಬಾಲಕರ ಹಾಸ್ಟೆಲ್ ಈಗಾಗಲೇ ನಿರ್ಮಾಣಗೊಂಡಿದ್ದು, ಉಳಿದಂತೆ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಎರಡು ಮಹಿಳಾ ಹಾಸ್ಟೆಲ್‌ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಪೂರ್ಣಗೊಳ್ಳಲಿದೆ.

ಬಿ.ರಮನಾಥ ರೈ (ಮಾಜಿ ಸಚಿವರು)

ವಾಮದಪದವಿನಲ್ಲಿ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ವಿದ್ಯಾಭ್ಯಾಸ ಪಡೆಯುವ ಅವಕಾಶವಿದ್ದು, ಹಾಸ್ಟೆಲ್‌ಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿವೆ. ಇಲ್ಲಿರುವ 4 ಹಾಸ್ಟೆಲ್‌ಗಳ ಪೈಕಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ವಂತ ಕಟ್ಟಡ ನಿರ್ಮಾಣ ಹಂತದಲ್ಲಿದೆ.

ಶಿವಣ್ಣ ವಿಸ್ತರಣಾಧಿಕಾರಿ, (ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆ, ಬಂಟ್ವಾಳ)

share
ಅಬ್ದುಲ್ ರಹಿಮಾನ್ ತಲಪಾಡಿ
ಅಬ್ದುಲ್ ರಹಿಮಾನ್ ತಲಪಾಡಿ
Next Story
X