Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತುಳಿತಕ್ಕೊಳಗಾದ ಎಲ್ಲರಿಗೂ ಸಾಮಾಜಿಕ...

ತುಳಿತಕ್ಕೊಳಗಾದ ಎಲ್ಲರಿಗೂ ಸಾಮಾಜಿಕ ಸಮಾನತೆ ಸಿಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 July 2019 8:02 PM IST
share
ತುಳಿತಕ್ಕೊಳಗಾದ ಎಲ್ಲರಿಗೂ ಸಾಮಾಜಿಕ ಸಮಾನತೆ ಸಿಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.2: ತುಳಿತಕ್ಕೊಳಗಾದ ಎಲ್ಲರಿಗೂ ಸಾಮಾಜಿಕ ಸಮಾನತೆ ಸಿಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಜಿಸಿದ್ದ ಮಿಲ್ಲರ್ ಕಮೀಷನ್ ವರದಿ ಶತಮಾನೋತ್ಸವ 29 ಜೂನ್ 2017ರ ಐತಿಹಾಸಿಕ ದಿನಾಚರಣೆಯ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಎಂಬುದು ಅತಿದೊಡ್ಡ ಪಿಡುಗು ಆಗಿದೆ. ಇದರಿಂದಾಗಿ ಅಸ್ಪೃಶ್ಯತೆ, ಅಸಮಾನತೆ ಹೆಚ್ಚುತ್ತಲೇ ಇದೆ. ಇದನ್ನು ನಿರ್ಮೂಲನೆ ಮಾಡಲು ಬುದ್ಧ, ಬಸವಣ್ಣರ ಕಾಲದಿಂದಲೂ ಪ್ರಯತ್ನಗಳು ನಡೆಯುತ್ತಲೇ ಇವೆ. ಅಂಬೇಡ್ಕರ್‌ರಂತಹ ದಾರ್ಶನಿಕರೂ ಕೆಲಸ ಮಾಡಿದ್ದಾರೆ. ಆದರೆ, ಜಾತಿ ವ್ಯವಸ್ಥೆ ತೊಲಗಲು ಎಲ್ಲರಿಗೂ ಸಮಾನವಾದ ಸಮಾನತೆ ಬೇಕಾಗಿದೆ. ಶೋಷಿತರು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಯಾಗಬೇಕು ಎಂದರು.

ಸಾಹು ಮಹಾರಾಜ್ ಮೊದಲ ಬಾರಿಗೆ 1902 ರಲ್ಲಿ ಮೀಸಲಾತಿ ವ್ಯವಸ್ಥೆ ಜಾರಿಗೆ ತಂದರು. ಅನಂತರ 1918 ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಮಿಲ್ಲರ್ ಆಯೋಗ ರಚನೆ ಮಾಡಿ, 1919 ರಲ್ಲಿ ವರದಿ ಪಡೆದು, 1921 ರಲ್ಲಿ ಜಾರಿಗೆ ತಂದರು. ಅದರಲ್ಲಿ ಬ್ರಾಹ್ಮಣೇತರರಿಗೆ ಶೇ.75 ರಷ್ಟು ಮೀಸಲಾತಿ ನೀಡುವ ಮೂಲಕ ಸಾಮಾಜಿಕ ಸಮಾನತೆ ಕಲ್ಪಿಸಲು ಮುಂದಾಗಿದ್ದರು ಎಂದು ನುಡಿದರು.

ಮಿಲ್ಲರ್ ವರದಿ ಜಾರಿಯಾಗುವ ಮೊದಲು ಎಲ್ಲ ಸೌಲಭ್ಯಗಳನ್ನು ಒಂದು ವರ್ಗ ಪಡೆದುಕೊಳ್ಳುತ್ತಿದ್ದವು. ಇದರಿಂದ ಸಮಾಜದಲ್ಲಿ ತಳ ಸಮುದಾಯಗಳು, ಶೋಷಿತ ವರ್ಗ ಮತ್ತಷ್ಟು ಕೆಳಕ್ಕೆ ಹೋಗುತ್ತಿದ್ದವು. ಶಿಕ್ಷಣ, ಉದ್ಯೋಗ ಸೇರಿದಂತೆ ಮುಖ್ಯವಾಹಿನಿಯಲ್ಲಿ ತಳ ಸಮುದಾಯಗಳಿಗೂ ಅವಕಾಶ ಸಿಗಬೇಕು ಎಂದು ಅಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅಭಿಮತವಾಗಿತ್ತು ಎಂದು ಅವರು ತಿಳಿಸಿದರು.

ಬ್ರಿಟಿಷರು 1937 ರಲ್ಲಿ ಕಾನೂನು ರೂಪಿಸಿ ಶಿಕ್ಷಣ ನೀಡಲು ಮುಂದಾದರು. 1957 ರಲ್ಲಿ ಅಂಬೇಡ್ಕರ್ ಅವರ ಸಂವಿಧಾನ ಜಾರಿಗೆ ಬಂದ ಬಳಿಕ ಎಲ್ಲರಿಗೂ ಶಿಕ್ಷಣ ಕಡ್ಡಾಯಗೊಂಡಿದೆ ಎಂದ ಅವರು, ಅಂಬೇಡ್ಕರ್ ಅಲ್ಲದೆ ಬೇರೆ ಯಾರಾದರೂ ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿದ್ದರೆ ಸಮ ಸಮಾಜದ ಆಶಯವನ್ನು ಅಳವಡಿಸುತ್ತಿರಲಿಲ್ಲ. ಮೋದಿ ಪ್ರಧಾನಿಯೂ ಆಗಿರುತ್ತಿರಲಿಲ್ಲ, ನಾನು ಹಿಂದೆ ಮುಖ್ಯಮಂತ್ರಿಯೂ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಹೇಳಿದರು.

ಸಮಾನತೆ, ಸಹಬಾಳ್ವೆ, ಸೌರ್ಹಾದತೆ ಸೇರಿದಂತೆ ಪ್ರಜಾತಂತ್ರವನ್ನು ಕಟ್ಟಿಕೊಟ್ಟಿರುವ ಸಂವಿಧಾನವನ್ನು ಬದಲಾವಣೆ ಮಾಡಲು ಕೆಲವರು ಮುಂದಾಗಿದ್ದಾರೆ. ಬದಲಾವಣೆ ಮಾಡುವವರಿಗೆ ಸುಧಾರಣೆ ಬೇಕಾಗಿಲ್ಲ. ಹೀಗಾಗಿ, ಸಂವಿಧಾನ ಎಲ್ಲರದ್ದೂ ಆಗಿದೆ. ಈ ನಿಟ್ಟಿನಲ್ಲಿ ಸಂವಿಧಾನ ಉಳಿವಿಗಾಗಿ ಬದ್ಧರಾಗಿರೋಣ, ಜಂಟಿ ಹೋರಾಟ ಮಾಡೋಣ ಎಂದು ತಿಳಿಸಿದರು.

ಹಿಂದಿನ ಸರಕಾರದ ಅವಧಿಯಲ್ಲಿ ಎಸ್ಸಿ-ಎಸ್ಟಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧವಾಗಿ ಭಡ್ತಿ ಮೀಸಲಾತಿ ಪರವಾಗಿ ಸುಗ್ರೀವಾಜ್ಞೆ ತಂದು, ರಾಷ್ಟ್ರಪತಿಯೂ ಅದಕ್ಕೆ ಅನುಮತಿ ನೀಡಿದ್ದರು. ನಮ್ಮ ಸರಕಾರ ಎಲ್ಲರ ಪರವಾಗಿ ಕೆಲಸ ಮಾಡಿದೆ ಎಂದ ಅವರು, ಸಮ್ಮಿಶ್ರ ಸರಕಾರದಲ್ಲಿ ಮೀಸಲಾತಿ ಕಾಯ್ದೆ ಜಾರಿ ಮಾಡುವ ಸಂಬಂಧ ನಾನು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯ, ಮಾಜಿ ಸಂಸದ ಧ್ರುವನಾರಾಯಣ್, ಆರ್.ಚಂದ್ರಪ್ಪ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು, ಸಂಘದ ಅಧ್ಯಕ್ಷ ಎನ್.ಮಹದೇವಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X