Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲದಲ್ಲಿ ಸುಸ್ಥಿರ ಸಂಚಾರ...

ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆಗೆ ಜು.10ರೊಳಗೆ ಮಾಹಿತಿ ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 July 2019 9:49 PM IST
share
ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆಗೆ ಜು.10ರೊಳಗೆ ಮಾಹಿತಿ ನೀಡಲು ಸೂಚನೆ

ಉಡುಪಿ, ಜು.2: ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಕೆಎಂಎಫ್ ಡೈರಿಕ್ರಾಸ್‌ವರೆಗಿನ ರಸ್ತೆಯಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ ರೂಪಿಸಲು ನಿರ್ಧರಿಸಲಾಗಿದ್ದು, ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ, ನಗರಸಭೆ, ಮೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಗಳು ತಮ್ಮ ಅಗತ್ಯತೆಗಳ ಕುರಿತು ಜು.10ರೊಳಗೆ ಜಿಲ್ಲಾ ನಗರಾಭಿವೃದ್ದಿ ಕೋಶಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಸ್ಥಿರ ಸಂಚಾರ ವ್ಯವಸ್ಥೆಗೆ ಯೋಜನೆ ರೂಪಿಸುವ ಮುನ್ನ, ಈ ಪ್ರದೇಶವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿ, ಯಾವ ಪ್ರದೇಶದಲ್ಲಿ ಏನು ಅಗತ್ಯತೆ ಇದೆ ಎನ್ನುವುದನ್ನು ತಿಳಿದುಕೊಳ್ಳಬೇಕು. ಇಂಟರ್‌ಲಾಕ್ ಅಳವಡಿಸಿ ಪಾದಚಾರಿಗಳಿಗೆ ಪುಟ್‌ಪಾತ್ ನಿರ್ಮಾಣ ಮಾಡಬೇಕು, ಎಂಐಟಿ ಬಳಿ ಬಸ್‌ನಿಲ್ದಾಣದ ಬದಲು ಬಸ್‌ಬೇ ವ್ಯವಸ್ಥೆ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಪುಟ್ ಪಾತ್‌ನಲ್ಲಿ ವಾಹನಗಳ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ರೇಲಿಂಗ್ ನಿರ್ಮಾಣ ಮಾಡುವಂತೆ ಹಾಗೂ ಎಲ್ಲಾ ಇಲಾಖೆಗಳು ಸಲ್ಲಿಸುವ ಮಾಹಿತಿಯನ್ನು ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕಾರಿಗಳು ಪರಿಶೀಲಿಸುವಂತೆ ತಿಳಿಸಿದರು.

ಈ ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ಹೊಸ ತಂತ್ರಜ್ಞಾನದೊಂದಿಗೆ ಮುಂದಿನ ಭವಿಷ್ಯದ ದೃಷ್ಠಿಯಿಂದ ದೀರ್ಘಕಾಲೀನ ಮಾದರಿ ಯೋಜನೆಯನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಮಾಹೆಯ ಆರ್ಕಿಟೆಕ್ಟ್ ವಿಭಾಗಕ್ಕೆ ನೀಡಿ ಶೀಘ್ರದಲ್ಲಿ ನೀಲನಕ್ಷೆ ಸಿದ್ದಪಡಿಸುವಂತೆ ಹೆಪ್ಸಿಬಾ ರಾಣಿ ಸೂಚಿಸಿದರು.

ಉಡುಪಿ ನಗರಸಭೆಯಿಂದ ಈ ಕಾರ್ಯಕ್ಕೆ ಸಂಬಂಧಪಟ್ಟಂತೆ ಅಗತ್ಯ ಅನುಮತಿಗಳನ್ನು ಹಾಗೂ ಸೂಕ್ತ ಸಹಕಾರವನ್ನು ಸಂಬಂದಪಟ್ಟ ಅಧಿಕಾರಿಗಳಿಗೆ ನೀಡುವಂತೆ ಹಾಗೂ ರಸ್ತೆ ಅಗಲೀಕರಣದಿಂದ ಸ್ಥಳಾಂತರ ಮಾಡುವ ವಿದ್ಯುತ್ ಕಂಬಗಳನ್ನು ಪ್ರಸ್ತುತ ಇರುವ ಗುತ್ತಿಗೆದಾರ ರಿಂದಲೇ ಮರು ನಿರ್ಮಾಣ ಮಾಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಮಣಿಪಾಲ ಆರ್ಕಿಟೆಕ್ಟ್ ವಿಬಾಗದ ಮುಖ್ಯಸ್ಥೆ ದೀಪಿಕಾ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X