ಹಿರಿಯಡ್ಕ: ಯುವ ಸ್ಪಂದನ ಕಾರ್ಯಕ್ರಮ
ಉಡುಪಿ, ಜು.2: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ಎನ್ನೆಸೆಸ್ಸ್ ಘಟಕಗಳು ಹಾಗೂ ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಯುವಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಯುವ ಪರಿವರ್ತಕರಾದ ಗಣೇಶ್ ಹಾಗೂ ರಂಜಿನಿ ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳು ಮತ್ತು ಪರಿಹಾರ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಯುವ ಪರಿವರ್ತಕರಾದ ಗಣೇಶ್ ಹಾಗೂ ರಂಜಿನಿ ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳು ಮತ್ತು ಪರಿಹಾರ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ನಿಕೇತನ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಆಪ್ತರಲ್ಲಿ ಹಂಚಿಕೊಂಡಲ್ಲಿ ಪರಿಹಾರ ಕಂಡುಕೊಳ್ಳಬಹುದೆಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಂಚಾಲಕಿ ಸುಜಯಾ ಕೆ.ಎಸ್. ಉಪಸ್ಥಿತರಿದ್ದರು.ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರವೀಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸುಬಾಷ್ ಹೆಚ್.ಕೆ. ವಂದಿಸಿದರು.





