Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಕರ್ನಾಟಕ...

ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ: ಮುಖ್ಯಮಂತ್ರಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ2 July 2019 10:44 PM IST
share
ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಅಮೆರಿಕಾ, ಜು.2: ಕೈಗಾರಿಕಾ ವಲಯದಲ್ಲಿ ಭಾರತದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ಭಾರತೀಯ ಹಾಗೂ ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣವಾಗಿ ರೂಪುಗೊಂಡಿದ್ದು, ಸತತ ಮೂರನೇ ವರ್ಷ ಬಂಡವಾಳ ಆಕರ್ಷಿಸುವಲ್ಲಿ ಮೊದಲ ರಾಜ್ಯವೆಂದು ಮನ್ನಣೆ ಪಡೆದಿದೆ ಎಂದು ಮುಖ್ಯಮಂತ್ರಿ  ಕುಮಾರಸ್ವಾಮಿ ಹೇಳಿದರು.

ಅಮೆರಿಕಾದ ವಾಷಿಂಗ್ಟನ್ ಡಿಸಿ ಬಳಿ ಇಂದು ಏರ್ಪಡಿಸಲಾಗಿದ್ದ ಹೂಡಿಕೆದಾರರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಅಮೆರಿಕಾದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಆಗಮಿಸಿದ್ದರೂ, ಈ ಅವಕಾಶ ಬಳಸಿಕೊಂಡು ಹೂಡಿಕೆದಾರರನ್ನು ಭೇಟಿಯಾಗಿ ಕರ್ನಾಟಕದಲ್ಲಿನ ಹೂಡಿಕೆಯ ಅವಕಾಶಗಳ ಕುರಿತು ಬೆಳಕು ಚೆಲ್ಲುವ ಉದ್ದೇಶದಿಂದ ಈ ಸಭೆಯನ್ನು ಏರ್ಪಡಿಸಲಾಗಿದೆ. 

ರಾಜ್ಯದ ರಾಜಧಾನಿ ಬೆಂಗಳೂರನ್ನು ಇತ್ತೀಚೆಗೆ ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರವೆಂದು ಗುರುತಿಸಲಾಗಿದೆ. ಇಲ್ಲಿನ ಕ್ರಿಯಾಶೀಲ, ಉದ್ಯಮ ಸ್ನೇಹಿ ನೀತಿಗಳು, ಅತ್ಯುತ್ತಮ ಮೂಲಸೌಕರ್ಯಗಳು, ಪರಿಣತ ಮಾನವ ಸಂಪನ್ಮೂಲ ಹಾಗೂ ನೂತನ ಆವಿಷ್ಕಾರ ಮತ್ತು ಅಭಿವೃದ್ಧಿಗೆ ಪೂರಕ ವಾತಾವರಣ, ಕರ್ನಾಟಕದ ಕೈಗಾರಿಕಾ ಬೆಳವಣಿಗೆಗೆ ಕಾರಣವಾಗಿದೆ. ಈ ಕಾರಣಕ್ಕಾಗಿಯೇ ದೇಶದ ಜಿಡಿಪಿ 7.2 ರಷ್ಟಿದ್ದರೆ, ರಾಜ್ಯದ ಜಿಡಿಪಿ ಶೇ. 10 ರಷ್ಟಿದೆ. ಭಾರತದ ಮಷೀನ್ ಟೂಲ್ ಉತ್ಪಾದನೆಯ ಶೇ. 50 ರಷ್ಟು, ಐಟಿ ರಫ್ತಿನ ಶೇ. 39 ರಷ್ಟು, ರಕ್ಷಣಾ ವಲಯಕ್ಕೆ ಶೇ. 67 ರಷ್ಟು ವಿಮಾನಗಳು, ಹೆಲಿಕಾಪ್ಟರ್ ಗಳ ಪೂರೈಕೆ ಹಾಗೂ ಜೈವಿಕ ತಂತ್ರಜ್ಞಾನ ರಫ್ತಿನ ಶೇ. 33 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ ಎಂದರು.

ಇದಲ್ಲದೆ ಬ್ಲಾಕ್ ಚೇನ್, ಅಡಿಟಿವ್ ಮ್ಯಾನ್ಯುಫಾಕ್ಚರಿಂಗ್, 3ಡಿ ಪ್ರಿಂಟಿಂಗ್, ರೊಬೊಟಿಕ್ಸ್, ನಾನೊ-ಟೆಕ್ನಾಲಜಿ, ಮೆಡಿಕಲ್ ಟೆಕ್ನಾಲಜಿ ಮತ್ತು ಜೆನೆಟಿಕ್ ಎಂಜಿನಿಯರಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನದಲ್ಲಿಯೂ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಉದ್ಯಮ ಸುಧಾರಣಾ ಕ್ರಿಯಾ ಯೋಜನೆಯ ಶೇ. 98.6 ರಷ್ಟು ಗುರಿ ಸಾಧನೆ ಮಾಡಿದೆ. ಕಾಲಮಿತಿಯಲ್ಲಿ ಯೋಜನೆಗಳ ಅನುಮೋದನೆ ಹಾಗೂ ವಿವಿಧ ಪ್ರಾಧಿಕಾರಗಳ ಅನುಮತಿ ಹಾಗೂ ಪರವಾನಗಿ ಒದಗಿಸಲು ಸಮಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಹೊಸ ಕೈಗಾರಿಕೆಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ 20 ಕ್ಕೂ ಹೆಚ್ಚು ನೀತಿಗಳನ್ನು ಜಾರಿಗೆ ತರಲಾಗಿದೆ. ಇತ್ತೀಚೆಗೆ ನಾವು ವಿದ್ಯುತ್‍ಚಾಲಿತ ವಾಹನಗಳು ಹಾಗೂ ಇಂಧನ ಸಂಗ್ರಹ ನೀತಿ 2017ನ್ನು ಜಾರಿಗೆ ತಂದಿದ್ದು, ಈ ನೀತಿ ಜಾರಿಗೆ ತಂದ ಮೊದಲ ರಾಜ್ಯ ನಮ್ಮದಾಗಿದೆ. ಸರ್ಕಾರವು ನೂತನ ಕೈಗಾರಿಕಾ ನೀತಿ 2019-24ನ್ನು ರೂಪಿಸುತ್ತಿದ್ದು, ಅದರಲ್ಲಿ ಜಾಗತಿಕ ಮಾನದಂಡಗಳನ್ವಯ ಕೈಗಾರಿಕೆಗಳಿಗೆ ಮೂಲಸೌಕರ್ಯ, ನೀತಿಗಳು ಮತ್ತು ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದ ತಯಾರಿಕೆ ಮತ್ತು ಸೇವಾ ವಲಯವಾಗಿ ರೂಪಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದರು. 

ರಾಜ್ಯದ ಎರಡನೇ ಮತ್ತು ಮೂರನೇ ಸ್ತರದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವಲ್ಲಿ 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಸ್ಥಾಪಿಸಲಾಗುತ್ತಿದೆ. ದೇಶದಲ್ಲಿಯೇ ಮೊದಲ ಬಾರಿ ಜಾರಿಗೊಳ್ಳುತ್ತಿರುವ ಈ ಯೋಜನೆಯಡಿ ಉತ್ಪಾದನಾ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಸಾಕಷ್ಟು ಸಂಖ್ಯೆಯಲ್ಲಿದ್ದು, ಅವುಗಳಿಗೆ ಉತ್ತೇಜನ ನೀಡುವ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಕರ್ನಾಟಕವು ಮುಂಚೂಣಿಯ ರಾಜ್ಯವಾಗಿ ಹೊಮ್ಮಬೇಕೆನ್ನುವುದು ನಮ್ಮ ದೃಢ ಸಂಕಲ್ಪ. ಈ ನಿಟ್ಟಿನಲ್ಲಿ ಉತ್ಪಾದನೆಯನ್ನು ಡಿಜಿಟಲೀಕರಣಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ ಮಾಡಲು ನಮ್ಮ ಸರ್ಕಾರ ಉತ್ಸುಕವಾಗಿದೆ. ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ವಿಶ್ವದಲ್ಲಿಯೇ ಮೊದಲ ಐದು ತಾಣಗಳಲ್ಲಿ ಒಂದಾಗಿದೆ. ಸ್ಟಾರ್ಟ್‍ಅಪ್‍ಗಳ ವಿಷಯದಲ್ಲಿ 2ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.  

ಇನ್ನಷ್ಟು ಹೂಡಿಕೆ ಆಕರ್ಷಿಸಿ, ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯವು 2020ರ ಜನವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಸಮಾವೇಶವನ್ನು ಯಶಸ್ವಿಗೊಳಿಸಲು ಹಾಗೂ ಕರ್ನಾಟಕದಲ್ಲಿ ಲಭ್ಯವಿರುವ ವಿನೂತನ ಹಾಗೂ ವಿಶಿಷ್ಟ ಉದ್ಯಮಗಳ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಭೆಯನ್ನು ಆಯೋಜಿಸಿದ್ದ ಅಮೆರಿಕಾದ ಕನ್ನಡಿಗರಾದ ಕೀರ್ತಿ ಸ್ವಾಮಿ, ಎಲಿಷಾ ಪುಲವರ್ತಿ, ಪವನ್ ಬೆಜವಾಡ, ಸುರೇಶ್ ರಾಮಚಂದ್ರ, ಆನಂದ್ ಪೂಜಾರಿ, ಶಾಂತಾ ರಾಜ್, ಮಾದೇಶ ಬಸವರಾಜ್ ಮತ್ತು ಬೆನ್ ಚಿಕ್ಕಸ್ವಾಮಿ ಹಾಗೂ ಅವರ ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ವಿವಿಧ ಉದ್ಯಮಿಗಳ ಸಂಘಟನೆಗಳ ಪ್ರತಿನಿಧಿಗಳು, ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು, ಅಮೆರಿಕಾದ ಉದ್ಯಮಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X