Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಚಿಕ್ಕಮಗಳೂರು ಜಿಲ್ಲೆಯಲ್ಲಿ 12 ಅನಧಿಕೃತ...

"ಚಿಕ್ಕಮಗಳೂರು ಜಿಲ್ಲೆಯಲ್ಲಿ 12 ಅನಧಿಕೃತ ಶಾಲೆಗಳು"

ವಾರ್ತಾಭಾರತಿವಾರ್ತಾಭಾರತಿ3 July 2019 8:28 PM IST
share

ಚಿಕ್ಕಮಗಳೂರು, ಜು.3: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಬಾರದು. ದಾಖಲಿಸಿದಲ್ಲಿ ಆಗುವ ತೊಂದರೆಗಳಿಗೆ ಪೋಷಕರೇ ನೇರ ಹೊಣೆಯಾಗುತ್ತಾರೆಯೇ ಹೊರತು ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಂಜಯ್ಯ ಜಿಲ್ಲಾ ಶಿಕ್ಷಣ ಇಲಾಖೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 12 ಶಾಲೆಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲಿಸುವಾಗ ಸದರಿ ಶಾಲೆಯು ಇಲಾಖೆಯ ಅನುಮತಿ ಪಡೆದಿದೆಯೆ ಎಂಬುದನ್ನು ಖಚಿತಪಡಿಸಿಕೊಂಡು ತಮ್ಮ ಮಕ್ಕಳನ್ನು ದಾಖಲಾತಿ ಮಾಡಬೇಕು ಎಂದು ತಿಳಿಸಿರುವ ಅವರು, 2019-20ನೇ ಸಾಲಿಗೆ ಶಾಶ್ವತ ಅನುದಾನ ರಹಿತವಾಗಿ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಆನ್‍ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಜಿಲ್ಲಾ ತ್ರಿ ಸದಸ್ಯ ಸಮಿತಿಯವರ ಶಿಫಾರಸಿನಂತೆ ಕ್ರಮ ವಹಿಸಲಾಗಿತ್ತು. ಅಲ್ಲದೇ ಈ ಪೂರ್ವದಲ್ಲಿ ಅರ್ಜಿ ಸಲ್ಲಿಸಿದ ಸಂಸ್ಥೆಗಳು ಇಲಾಖಾ ಅನುಮತಿ ಸಿಗುತ್ತದೆ ಎಂಬ ನಿರೀಕ್ಷೆಯ ಮೇರೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಂಡು ತರಗತಿಗಳನ್ನು ನಡೆಸಿರುವುದು ನಿಯಮ ಬಾಹಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಿಯಮ ಬಾಹಿರವಾಗಿ ನಡೆಸುವ ಖಾಸಗಿ ಶಾಲೆಗಳಾದ ಬೀರೂರಿನ ಶ್ರೀ ಮಾರುತಿ ವಿದ್ಯಾ ಸಂಸ್ಥೆ(ರಿ)ಯ ಮಾರುತಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಮಗಳೂರಿನ ವಾಸವಿ ಏಜುಕೇಷನ್ ಸೊಸೈಟಿಯ ನರ್ಚರ್ ಇಂಟರ್ ನ್ಯಾಷನಲ್ ಪ್ರೌಢಶಾಲೆ, ಆರ್.ಎಸ್.ಏಜುಕೇಷನ್ ಸೊಸೈಟಿಯ ಆರ್.ಎಸ್ ಪ್ರೌಢಶಾಲೆ, ಗುಲ್ಲನ್‍ಪೇಟೆ ಶ್ರೀ ರಂಗನಾಥ ವಿದ್ಯಾಸಂಸ್ಥೆಯ ನವೋದಯ ಪ್ರೌಢಶಾಲೆ, ನವೋದಯ ವಿದ್ಯಾ ಸಂಸ್ಥೆಯ ನವೋದಯ ಪ್ರೌಢಶಾಲೆ ಲಕ್ಯಾ, ಗುರುದೇವ ಏಜುಕೇಷನ್ ಟ್ರಸ್ಟ್ ನ ಜ್ಞಾನಭಾರತಿ ಪ್ರೌಢಶಾಲೆ, ಕನಸು ಕಿಡ್ಸ್ ಏಜುಕೇಷನ್ ಟ್ರಸ್ಟ್ ಪ್ರಾಥಮಿಕ ಶಾಲೆ ವಿಜಯನಗರ, ಡಬ್ಲ್ಯೂಡಿ ಎಜ್ಯುಕೇಷನ್ ಸೊಸೈಟಿಯ ಸೆಕ್ರೆಡ್ ಹಾರ್ಟ್ ಸ್ಕೂಲ್, ಕಲ್ಯಾಣ ನಗರ, ಹೋಲಿ ಫ್ಯಾಮಿಲಿ ಸೇವಾ ಸಂಸ್ಥೆ ಸೆಂಟ್ ಜೇವಿಯರ್ ಹಿರಿಯ ಪ್ರಾಥಮಿಕ ಶಾಲೆ. ಕಡೂರು ತಾಲೂಕಿನ ಸುರತ್ನ ಎಜ್ಯುಕೇಷನ್ ಟ್ರಸ್ಟ್ ನ ಸಾಂಸ್ಕೃತಿಕ ವಿದ್ಯಾಶಾಲೆ ಹರುವನಹಳ್ಳಿ, ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ವಿದ್ಯಾಸಂಸ್ಥೆ, ಸೋಮೇಶ್ವರ ಪ್ರಾಥಮಿಕ ಶಾಲೆ ಅಂತರಘಟ್ಟ, ತರೀಕೆರೆಯ ಶ್ರೀ ವಿದ್ಯಾ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀ ಪಬ್ಲಿಕ್ ಶಾಲೆ ಅಜ್ಜಂಪುರ.

ಈ ಶಾಲೆಗಳ ಅನುಮತಿ ಅರ್ಜಿಗಳು ತಿರಸ್ಕೃತಗೊಂಡಿವೆ. ಅಲ್ಲದೆ ಇಂತಹ ಶಾಲೆಗಳನ್ನು ಅನಧಿಕೃತ ಶಾಲೆಗಳೆಂದು ಪರಿಗಣಿಸಿ ಶಿಕ್ಷಣ ಕಾಯ್ದೆ 1980ರ ನಿಯಮದಡಿ ಕ್ರಮವಹಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಂಜಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X