ಕಾವಳಮೂಡೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಬಂಟ್ವಾಳ, ಜು. 3: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವಳಮೂಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ.
ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಕೋಡಿಹಳ್ಳಿಯ ನಿವಾಸಿ ಸುಮಂತ್ ರಾವ್ (39) ಹತ್ಯೆ ಮಾಡಿಕೊಂಡ ವ್ಯಕ್ತಿ. ಸುಮಂತ್ ಅವರು ಅಲಂಗಾರುನಲ್ಲಿ ತಿಂಡಿ ತಯಾರಕ ಘಟಕಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ತಿಂಡಿ ತಯಾರಿಕಾ ಘಟಕದ ಪಕ್ಕದಲ್ಲಿಯೇ ರೂಂನಲ್ಲಿಯೇ ವಾಸವಾಗಿದ್ದು, ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story





