ಶಾಸಕ ಅಶ್ವಿನ್ ಕುಮಾರ್ ಕರೆದಿದ್ದ ಪತ್ರಿಕಾಗೋಷ್ಠಿ ದಿಢೀರ್ ರದ್ದು

ಮೈಸೂರು,ಜು.4: ಟಿ.ನರಸೀಪುರ ಕ್ಷೇತ್ರದ ಶಾಸಕ ಅಶ್ವಿನ್ ಕುಮಾರ್ ಇಂದು ಕರೆದಿದ್ದ ಪತ್ರಿಕಾಗೋಷ್ಠಿಯನ್ನು ದಿಢೀರ್ ರದ್ದು ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲದಂತಹ ಕ್ಷಿಪ್ರ ಬೆಳವಣಿಗೆಯಲ್ಲಿ ಶಾಸಕ ಅಶ್ವಿನ್ ಕುಮಾರ್ ಹೆಸರು ಕೇಳಿಬಂದುದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ದೃಶ್ಯ ಮಾಧ್ಯಮ ಮತ್ತು ಮುದ್ರಣ ಮಾಧ್ಯಮದವರು ತುಂಬಾ ಹೊತ್ತು ಕಾದ ಬಳಿಕ ಪತ್ರಿಕಾಗೋಷ್ಠಿ ರದ್ದಾಗಿದೆ ಎಂದು ತಿಳಿಸಲಾಯಿತು.
ನಿನ್ನೆಯಷ್ಟೆ ಟಿ.ನರಸೀಪುರದಲ್ಲಿ ಶಾಸಕ ಅಶ್ವಿನ್ ಕುಮಾರ್ 'ನಾನು ಜೆಡಿಎಸ್ ತೊರೆಯುವುದಿಲ್ಲ, ಎಚ್.ಡಿ.ಕುಮಾರಸ್ವಾಮಿ ಅವರ ನೆರಳಿನಲ್ಲೇ ರಾಜಕಾರಣ ಮಾಡುವುದಾಗಿ' ಹೇಳಿಕೆ ನೀಡಿದ್ದರು.
Next Story





