Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘ ಪರಿವಾರದ ಕಾರ್ಯಕರ್ತರು ಏನು ಮಾಡಿದರೂ...

ಸಂಘ ಪರಿವಾರದ ಕಾರ್ಯಕರ್ತರು ಏನು ಮಾಡಿದರೂ ನಡೆಯುತ್ತದೆ ಎಂಬ ದುರಹಂಕಾರ ಮುರಿಯಬೇಕಿದೆ: ಸಂತೋಷ್ ಬಜಾಲ್

ವಾರ್ತಾಭಾರತಿವಾರ್ತಾಭಾರತಿ4 July 2019 10:39 PM IST
share
ಸಂಘ ಪರಿವಾರದ ಕಾರ್ಯಕರ್ತರು ಏನು ಮಾಡಿದರೂ ನಡೆಯುತ್ತದೆ ಎಂಬ ದುರಹಂಕಾರ ಮುರಿಯಬೇಕಿದೆ: ಸಂತೋಷ್ ಬಜಾಲ್

ಉಳ್ಳಾಲ : ಸಂಘಪರಿವಾರದ ಕಾರ್ಯಕರ್ತರು ಜಿಲ್ಲೆಯಲ್ಲಿ ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ದುರಹಂಕಾರದಿಂದ ವರ್ತಿಸುತ್ತಿದ್ದು ಇದರ ಪರಿಣಾಮವೇ ಪುತ್ತೂರಿನಲ್ಲಿ ದಲಿತ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡುವ ಪ್ರಕ್ರಿಯೆ ನಡೆದಿದ್ದು ಇವರ ದುರಹಂಕಾರ ಮತ್ತು ಸೊಕ್ಕನ್ನು ಮುರಿಯಲು ಜಿಲ್ಕೆಯ ಜನತೆ ಮುಂದಾಗಬೇಕಿದೆ ಎಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಹೇಳಿದರು. 

ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಖಂಡಿಸಿ , ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಮಾದಕ ದ್ರವ್ಯ ಮಾರಾಟ ಜಾಲವನ್ನು ಮಟ್ಟ ಹಾಕುವಂತೆ ಒತ್ತಾಯಿಸಿ ಉಳ್ಳಾಲ ಡಿವೈಎಫ್ಐ ಸಮಿತಿ ದೇರಳಕಟ್ಟೆಯ ಜಂಕ್ಷನ್ ನಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಡ್ರಗ್ಸ್ ಮಾಫಿಯಾದ ಪ್ರಮುಖ ಮಾರಾಟ ಕೇಂದ್ರವಾಗಿ ಮಾರ್ಪಟ್ಟಿದ್ದು ವಿದ್ಯಾರ್ಥಿ ಮತ್ತು ಯುವಜನರಿಗೆ ಬಹಳ ಸುಲಭವಾಗಿ ಡ್ರಗ್ಸ್ ದೊರಕುತ್ತಿದೆ. ಈ ಬಗ್ಗೆ ಗಮನ ಹರಿಸಬೇಕಿದ್ದ ಇಲ್ಲಿನ ಶಾಸಕರು ಮತ್ತು ಸಂಸದರು ಜನಗಳ ಸಮಸ್ಯೆಗಿಂತ  ಹೆಚ್ಚಾಗಿ ದನಗಳ ಸಮಸ್ಯೆಗೆ ಆದ್ಯತೆ ನೀಡುತ್ತಿದ್ದು ಜಿಲ್ಲಾಡಳಿತ ಸ್ವಯಂ ಪ್ರೇರಿತವಾಗಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಮುಂದಾಗಬೇಕೆಂದು ಒತ್ತಾಯಿಸಿದರು.

ವರ್ಷದ ಹಿಂದೆ ಉಳ್ಳಾಲದಲ್ಲಿ ಮೀಸೆ ಮೂಡದ ಹುಡುಗರು ನಡೆಸಿದ ಜುಬೈರ್ ಎಂಬುವವರ ಕೊಲೆ ಪ್ರಕರಣ , ಮೊನ್ನೆ ದೇರಳಕಟ್ಟೆ ಸಮೀಪ ಸುಶಾಂತ್ ಎಂಬ ಯುವಕ ವಿದ್ಯಾರ್ಥಿನಿಗೆ ಸಾರ್ವಜನಿಕವಾಗಿ ಚೂರಿ ಇರಿದ ಪ್ರಕರಣ ಹಾಗೂ ಇನ್ನಿತರ ಹಲವು ಕ್ರಿಮಿನಲ್ ಕೃತ್ಯಗಳ ಹಿಂದೆ ಡ್ರಗ್ಸ್ ಪ್ರಭಾವವಿದ್ದು ಪೊಲೀಸ್ ಇಲಾಖೆ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕದೇ ಪ್ರದೇಶದಲ್ಲಿ ಕ್ರೈಂ ಮಟ್ಟ ಹಾಕುವುದು ಅಸಾಧ್ಯ ಎಂದರು. 

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಮುಖಂಡರಾದ ಅಶ್ರಫ್ ಕೆಸಿ ರೋಡ್ , ನಿತಿನ್ ಕುತ್ತಾರ್  ಮಾತನಾಡಿದರು. ಸಭೆಯಲ್ಲಿ ಸಿಪಿಐಎಂ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್ , ಡಿವೈಎಫ್ಐ ಮುಖಂಡರಾದ ರಫೀಕ್ ಹರೇಕಳ , ಸುನಿಲ್ ತೇವುಲ , ಸಂತೋಷ್ ಪಿಲಾರ್ , ಗ್ರಾಮ ಪಂಚಾಯತಿ ಸದಸ್ಯ ಅಶ್ರಫ್ ಹರೇಕಳ , ರಜಾಕ್ ಮುಡಿಪು , ಇಬ್ರಾಹಿಂ ಮದಕ, ಜಯಂತ್ ನಾಯ್ಕ್ ಉಪಸ್ಥಿತರಿದ್ದರು. ರಝಾಕ್ ಮೊಂಟೆಪದವು ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X