Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆದ್ದಾರಿ ಬಿರುಕಿಗೆ ತಾತ್ಕಾಲಿಕ ತೇಪೆ:...

ಹೆದ್ದಾರಿ ಬಿರುಕಿಗೆ ತಾತ್ಕಾಲಿಕ ತೇಪೆ: ಅವೈಜ್ಞಾನಿಕ ಕ್ರಮಕ್ಕೆ ಶಾಸಕರ ಅಸಮಾಧಾನ

ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮ

ವಾರ್ತಾಭಾರತಿವಾರ್ತಾಭಾರತಿ5 July 2019 5:35 PM IST
share
ಹೆದ್ದಾರಿ ಬಿರುಕಿಗೆ ತಾತ್ಕಾಲಿಕ ತೇಪೆ: ಅವೈಜ್ಞಾನಿಕ ಕ್ರಮಕ್ಕೆ ಶಾಸಕರ ಅಸಮಾಧಾನ

ಮಡಿಕೇರಿ, ಜು.5: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಟಕೇರಿ ಬಳಿ ಕಾಣಿಸಿಕೊಂಡಿರುವ ರಸ್ತೆ ಬಿರುಕನ್ನು ಕಾಂಕ್ರಿಟ್‍ನಿಂದ ಮುಚ್ಚುವ ಮೂಲಕ ಮಳೆನೀರು ಒಳಹರಿದು ಸಂಭವಿಸಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸುವ ಪ್ರಯತ್ನ ಮಾಡಲಾಗಿದೆ.

ರಸ್ತೆಯ ಮೇಲೆ ನೀರು ಹರಿಯದಂತೆ ಸ್ಯಾಂಡ್ ಬಂಡ್‍ಗಳನ್ನು ಅಳವಡಿಸಿ ರಸ್ತೆ ಕುಸಿಯದಂತೆ ಕ್ರಮಕೈಗೊಳ್ಳಲಾಗಿದೆ. ಭಾರೀ ವಾಹನಗಳ ಸಂಚಾರದ ಮಾರ್ಗವನ್ನು ಈಗಾಗಲೇ ಬದಲಾಯಿಸಲಾಗಿದ್ದು, ರಸ್ತೆಯ ಅರ್ಧಭಾಗದ ಮೂಲಕ ಇತರ ವಾಹನಗಳು ಸಂಚರಿಸುತ್ತಿವೆ. ಮುಂಜಾಗೃತಾ ಕ್ರಮವಾಗಿ ಬ್ಯಾರಿಕೇಡ್‍ಗಳನ್ನು ಅಳವಡಿಸಿ ಪೊಲೀಸರು ನಿಗಾ ವಹಿಸಿದ್ದಾರೆ. ಹೆದ್ದಾರಿಯ ಎರಡೂ ಬದಿಗಳಲ್ಲಿ ಜೆ.ಸಿ.ಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಘಟಕದ ಅಭಿಯಂತರರೊಂದಿಗೆ ಸಮಾಲೋಚಿಸಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಶಾಸಕರ ಭೇಟಿ
ಶಾಸಕದ್ವಯರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹೆದ್ದಾರಿ ಬಿರುಕು ಬಿಟ್ಟ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆಯ ಮೇಲೆ ನೀರು ಹರಿದ ಹಿನ್ನೆಲೆಯಲ್ಲಿ ಬಿರುಕು ಮೂಡಿದ್ದು, ಚರಂಡಿ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಸ್ತೆ ದುರಸ್ತಿ ಸಂದರ್ಭ ಅಳವಡಿಸಿಕೊಳ್ಳಲಾದ ತಂತ್ರಜ್ಞಾನದ ಬಗ್ಗೆ ಶಾಸಕರು ಮಾಹಿತಿ ಪಡೆದರು. ಕುಸಿದಿರುವ ಸ್ಥಳದಲ್ಲಿ ಕಾಂಕ್ರೀಟ್ ತಡೆಗೋಡೆ ಮತ್ತು ಕಾಂಕ್ರೀಟ್ ಒಳಚರಂಡಿ ವ್ಯವಸ್ಥೆ ಮಾಡಬೇಕೆಂದರು. ಯಾವುದೇ ಕಾರಣಕ್ಕೂ ವಾಹನಗಳ ಸಂಚಾರಕ್ಕೆ ತಡೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸೂಚಸಿದರು.

ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಕಳೆದ ಬಾರಿ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಮಳೆ ಸುರಿದು ಮೈಸೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗಿತ್ತು. ಬಳಿಕ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ. ಆದರೆ ಶಾಶ್ವತ ಯೋಜನೆ ರೂಪಿಸಲು ಹೆಚ್ಚುವರಿ 45 ಕೋಟಿ ರೂ.ಗಳ ಅನುದಾನ ಅಗತ್ಯವಿದ್ದು, ಚುನಾವಣಾ ನೀತಿ ಸಂಹಿತೆ ಮತ್ತಿತರ ಕಾರಣಗಳಿಂದ ಈ ಹಣ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರ ಗಮನ ಸೆಳೆದಿದ್ದು, ಪ್ರಸ್ತುತ ಈ ಮನವಿ ಕೇಂದ್ರ ಸರಕಾರದ ಬಳಿ ಇದೆ. ಈ ಅನುದಾನ ಬಿಡುಗಡೆಯಾದ ಬಳಿಕ ಶಾಶ್ವತ ಕಾಮಗಾರಿಗಳು ಆರಂಭವಾಗುತ್ತದೆ ಎಂದು ತಿಳಿಸಿದರು. 

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಸ್ಯಾಂಡ್ ಬಂಡ್ ಮತ್ತು ಕಾಂಕ್ರೀಟ್ ಬಳಸಿ ಹೆಚ್ಚಿನ ಅನಾಹುತವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಕುಸಿಯದಂತೆ ಹೆದ್ದಾರಿ ಬದಿಯಲ್ಲಿ ಕಾಂಕ್ರಿಟ್ ವಾಲ್ ನಿರ್ಮಿಸಿದರೆ ಶಾಶ್ವತ ಪರಿಹರ ದೊರೆಯಲಿದೆ ಎಂದರು. ಕಳೆದ ಬಾರಿ ಮರಳಿನ ತಡೆಗೋಡೆ ನಿರ್ಮಿಸುವ ಸಂದರ್ಭ ನಾನು ಆಕ್ಷೇಪ ವ್ಯಕ್ತಪಡಿಸಿ ಕೊಡಗಿನ ವಾತಾವರಣಕ್ಕೆ ಇದು ಸೂಕ್ತವಲ್ಲವೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದೆ. ಆದರೆ ಅಧಿಕಾರಿಗಳು ತಮ್ಮದೇ ಆದ ಕಾರಣಗಳನ್ನು ನೀಡಿ ಮರಳಿನ ಮೂಟೆಗಳನ್ನು ಇಟ್ಟರು. ಇದೀಗ ಮತ್ತೆ ರಸ್ತೆ ಬಿರುಕು ಕಾಣಿಸಿಕೊಂಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಕಾಟಕೇರಿ ಗ್ರಾಮಸ್ಥರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X