Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಆರ್ಥಿಕತೆ ಮೇಲೆ ದೊಡ್ಡ ಹೊಡೆತ:...

ರಾಜ್ಯದ ಆರ್ಥಿಕತೆ ಮೇಲೆ ದೊಡ್ಡ ಹೊಡೆತ: ಮುಖ್ಯಮಂತ್ರಿ ಕುಮಾರಸ್ವಾಮಿ

ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ5 July 2019 9:13 PM IST
share
ರಾಜ್ಯದ ಆರ್ಥಿಕತೆ ಮೇಲೆ ದೊಡ್ಡ ಹೊಡೆತ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜು.5: ಜಿಎಸ್ಟಿ ತೆರಿಗೆಯಲ್ಲಿ ರಾಜ್ಯದ ಪಾಲಿನ ಮೊತ್ತ ಕಡಿಮೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಪಾಲಿನಲ್ಲಿ ಸುಮಾರು 1600 ಕೋಟಿ ರೂ.ಗಳಷ್ಟು ಕೊರತೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರಿಂದ ರಾಜ್ಯಗಳ ಆರ್ಥಿಕತೆಯ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಪೆಟ್ರೋಲ್, ಡೀಸೆಲ್ಗಳ ಮೇಲೆ ಸೆಸ್ ಏರಿಕೆ ಮಾಡಿರುವುದರಿಂದ ರಾಜ್ಯವು ಇಂಧನ ಮೇಲೆ ಸೆಸ್ ವಿಧಿಸಲು ಅವಕಾಶ ಕಡಿಮೆ ಮಾಡಿದಂತಾಗಿದೆ. ಅಲ್ಲದೆ, ಇಂಧನ ಬೆಲೆ ಏರಿಕೆಯಿಂದ ಪ್ರತಿಯೊಬ್ಬರಿಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊರೆಯಾಗಲಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದ ರೈಲ್ವೆ ಯೋಜನೆಗಳಿಗೆ ಅದರಲ್ಲೂ ಸಬರ್ಬನ್ ರೈಲ್ವೆ(ಉಪನಗರ ರೈಲು) ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡುವರೆಂದು ನಿರೀಕ್ಷಿಸಿದ್ದೆ. ಈ ನಿಟ್ಟಿನಲ್ಲಿ ಯಾವುದೇ ಘೋಷಣೆ ಮಾಡದಿರುವುದು ನಿರಾಶೆ ತಂದಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾರತದಲ್ಲಿ ಆಯವ್ಯಯ ಕೇವಲ ಸರಕಾರದ ಆಶಯ ತಿಳಿಸುವ ದಾಖಲೆಯಲ್ಲ. ಆಯವ್ಯಯ ಭಾಷಣ, ಜನರಿಗೆ ಮಾಹಿತಿ ಒದಗಿಸುವ ಪ್ರಮುಖ ಮಾಧ್ಯಮ. ಈ ಆಯವ್ಯಯದಲ್ಲಿ ಕೆಲವು ಉದ್ದೇಶಗಳನ್ನು ಉಲ್ಲೇಖಿಸಲಾಗಿದೆ. ಅದರಾಚೆಗೆ ಯಾವ ಮಾಹಿತಿಯೂ ಇಲ್ಲ. ಅದರಲ್ಲಿಯೂ ವಿಶೇಷವಾಗಿ ರೈಲ್ವೆ ಯೋಜನೆಗಳ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಆಕ್ಷೇಪಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಮಂಡಿಸಿದ ಚೊಚ್ಚಲ ಬಜೆಟ್ ಕುರಿತು ಇಟ್ಟುಕೊಂಡಿದ್ದ ನಿರೀಕ್ಷೆಗಳು ಹುಸಿಯಾಗಿವೆ. ರೈತ ಉತ್ಪಾದಕ ಸಂಘಗಳ ಸ್ಥಾಪನೆಗೆ ಒತ್ತು, ಎಪಿಎಂಸಿಗಳಲ್ಲಿ ಆನ್‌ಲೈನ್ ಮಾರುಕಟ್ಟೆ ಬಲಪಡಿಸುವ ಕಾರ್ಯಕ್ರಮ ಹಾಗೂ ಗ್ರಾಮೀಣ ಸಾಂಪ್ರದಾಯಿಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆಗಳು ಸ್ವಾಗತಾರ್ಹ. ಆದರೆ ರೈತರ ಆತ್ಮಸ್ಥೈರ್ಯ ಹೆಚ್ಚಿಸಲು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದರೆ ಚೆನ್ನಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X