Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಳೆ ಕಸ್ಟಮ್ಸ್ ಕಚೇರಿ ವಸ್ತು...

ಹಳೆ ಕಸ್ಟಮ್ಸ್ ಕಚೇರಿ ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ : ಎ.ಕೆ. ಜ್ಯೋತಿಷಿ

ವಾರ್ತಾಭಾರತಿವಾರ್ತಾಭಾರತಿ9 July 2019 5:41 PM IST
share
ಹಳೆ ಕಸ್ಟಮ್ಸ್ ಕಚೇರಿ ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ : ಎ.ಕೆ. ಜ್ಯೋತಿಷಿ

ಮಂಗಳೂರು, ಜು. 9: ನಗರದ ಹಳೆ ಬಂದರು ಪ್ರದೇಶದಲ್ಲಿ ನವೀಕರಣಗೊಂಡಿರುವ 133 ವರ್ಷಗಳಷ್ಟು ಹಳೆಯ ಕಸ್ಟಮ್ಸ್ ಕಚೇರಿ ಕಟ್ಟಡವನ್ನು ಕರಾವಳಿ ಮತ್ತು ಕರ್ನಾಟಕದ ವಸ್ತು ಸಂಗ್ರಹಾಲಯವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಕಸ್ಟಮ್ಸ್ ಬೆಂಗಳೂರು ವಲಯದ ಮುಖ್ಯ ಆಯುಕ್ತ ಎ.ಕೆ.ಜ್ಯೋತಿಷಿ ತಿಳಿಸಿದರು.

ಮಂಗಳವಾರ ನಡೆದ ಹಳೆಯ ಕಸ್ಟಮ್ಸ್ ಕಚೇರಿಯ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕರಾವಳಿ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಪಾರಂಪರಿಕ ಹಾಗೂ ಐತಿಹಾಸಿಕ ಮಹತ್ವವುಳ್ಳ ವಸ್ತುಗಳು, ಛಾಯಾಚಿತ್ರಗಳು, ಪ್ರಾಚೀನ ವಸ್ತುಗಳನ್ನು ಇಲ್ಲಿ ಪ್ರದರ್ಶಿಸಲಾಗುವುದು ಎಂದರು.

ಕರಾವಳಿಯ ಜನರು ತಮ್ಮ ಮನೆಗಳಲ್ಲಿ ಲಭ್ಯವಿರುವ ಐತಿಹಾಸಿಕ ಮಹತ್ವದ ವಸ್ತುಗಳನ್ನು ತಂದು ಒಪ್ಪಿಸಿದರೆ ಅವುಗಳನ್ನು ಸಂಗ್ರಹಾಲಯ ದಲ್ಲಿ ಪ್ರದರ್ಶಿಸಲಾಗುವುದು. ಅವುಗಳನ್ನು ನೀಡಿದವರ ಹೆಸರನ್ನೂ ಉಲ್ಲೇಖಿಸಲಾಗುವುದು. ಕಟ್ಟಡದ ಎದುರು ಕ್ಯೂಆರ್ ಕೋಡ್ ಒಂದನ್ನು ಪ್ರದರ್ಶಿಸಲಾಗುವುದು. ಅದರ ಮೂಲಕ ಈ ಕಟ್ಟಡದ ಇತಿಹಾಸವನ್ನು ಅರಿಯಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಕಟ್ಟಡದ ಇತಿಹಾಸವನ್ನು ಜನರ ಮುಂದಿಡುವುದು ಕಸ್ಟಮ್ಸ್ ಗುರಿಯಾಗಿದೆ. ಇದನ್ನು ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಸೇರಿಸಬೇಕೆಂಬುದು ತಮ್ಮ ಬಯಕೆ. 133 ವರ್ಷಗಳ ಹಳೆಯ ಕಟ್ಟಡದ ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ನವೀಕರಣ ಮಾಡಲಾಗಿದೆ ಎಂದರು.

ಮಂಗಳೂರು ಕಸ್ಟಮ್ಸ್ ಆಯುಕ್ತರಾಗಿದ್ದ ವೇಳೆ ಕಟ್ಟಡದ ನವೀಕರಣಕ್ಕೆ ನಾಂದಿ ಹಾಡಿದ್ದ ಬೆಂಗಳೂರು ಜಿಎಸ್‌ಟಿ ಲೆಕ್ಕಪರಿಶೋಧನಾ ವಿಭಾಗದ ಆಯುಕ್ತ ಡಾ.ಎಂ.ಸುಬ್ರಮಣ್ಯಂ ಮಾತನಾಡಿ, ನಗರ ಹೇಗೆ ಆರ್ಥಿಕ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಯಾಯಿತು ಹಾಗೂ ಈ ಕಟ್ಟಡದ ಜೊತೆ ನಂಟು ಹೊಂದಿರುವ ಐತಿಹಾಸಿಕ ಸಂಗತಿಗಳಿಗೆ ಸಂಬಂಧಿಸಿದ ಮಾಹಿತಿ, ವಸ್ತುಗಳನ್ನು ಇಲ್ಲಿ ಪ್ರದರ್ಶಿಸಬೇಕಿದೆ. ಅದರ ನೆನಪಿನಲ್ಲಿ ವಿಶೇಷ ಲಕೋಟೆಯೊಂದನ್ನು ಬಿಡುಗಡೆ ಮಾಡುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಕೇಂದ್ರೀಯ ಲೋಕೋಪಯೋಗಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರ್ ಶಂಭುನಾಥ್ ರೈ, ಮಂಗಳೂರು ಕಸ್ಟಮ್ಸ್ ಕಮಿಷನರೇಟ್‌ನ ಕಸ್ಟಮ್ಸ್ ಆಯುಕ್ತ ಪರಾಗ್ ಸಿ.ಬೋರ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X