Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರ ಅಸ್ಥಿರಕ್ಕೆ ಪ್ರಯತ್ನ ಆರೋಪ:...

ಸರ್ಕಾರ ಅಸ್ಥಿರಕ್ಕೆ ಪ್ರಯತ್ನ ಆರೋಪ: ಬಿಜೆಪಿ ವಿರುದ್ಧ ಕೊಡಗು ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 July 2019 6:26 PM IST
share
ಸರ್ಕಾರ ಅಸ್ಥಿರಕ್ಕೆ ಪ್ರಯತ್ನ ಆರೋಪ: ಬಿಜೆಪಿ ವಿರುದ್ಧ ಕೊಡಗು ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ, ಜು.9: ರಾಜ್ಯದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಅಧಿಕಾರ ಹಿಡಿಯಬೇಕೆನ್ನುವ ದುರಾಸೆಯಿಂದ ಬಿಜೆಪಿ ‘ಕುದುರೆ ವ್ಯಾಪಾರ’ಕ್ಕೆ ಇಳಿದಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಗಾಂಧಿ ಮಂಟಪದ ಎದುರು ಧರಣಿ ನಡೆಸಿತು.

ಜ.ತಿಮ್ಮಯ್ಯ ವೃತ್ತದಲ್ಲಿ ‘ಮಾನವ ಸರಪಳಿ’ ರಚಿಸಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಅಧಿಕಾರವನ್ನು ಹಿಡಿಯುವ ಹಟದಲ್ಲಿ ಬಿಜೆಪಿ ವಾಮಮಾರ್ಗವನ್ನು ಅನುಸರಿಸುತ್ತಿದೆ. ಇದನ್ನು ರಾಜ್ಯದ ಜನತೆ ಸಹಿಸುವುದಿಲ್ಲವೆಂದ ಪಕ್ಷದ ಪ್ರಮುಖರು ಈ ರೀತಿಯ ರಾಜಕಾರಣಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ಸಿಗರು ಅಲ್ಲಿ ‘ಮಾನವ ಸರಪಳಿ’ ರಚಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ,  ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಬಿಜೆಪಿ ಕುದುರೆ ವ್ಯಾಪಾರ ಮಾಡುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಿ ತಾವು ಅಧಿಕಾರಕ್ಕೇರಬೇಕೆಂದು ಬಿಜೆಪಿ ವಾಮಮಾರ್ಗಕ್ಕೆ ಇಳಿದಿರುವುದು ಖಂಡನೀಯ ಎಂದರು. 

ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸಿ, ಅಧಿಕಾರ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ, ಮೈತ್ರಿ ಸರ್ಕಾರ ಬಲಿಷ್ಟವಾಗಿದ್ದು, ಉರುಳುವ ಸಾಧ್ಯತೆಯೇ ಇಲ್ಲ. ಇನ್ನಾದರೂ ಬಿಜೆಪಿ ತನ್ನ ಕೆಟ್ಟ ಚಾಳಿಯನ್ನು ಬಿಟ್ಟು, ಮೈತ್ರಿ ಸರ್ಕಾರದ ಆಡಳಿತಕ್ಕೆ ತೊಡಕನ್ನುಂಟು ಮಾಡದಿರಲಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರಸಭೆ ಮಾಜಿ ಸದಸ್ಯ ಚುಮ್ಮಿ ದೇವಯ್ಯ, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರಯ್ಯ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನೀರ ಮೈನಾ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎ.ಕೆ.ಹ್ಯಾರಿಸ್, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಹನೀಫ್ ಸಂಪಾಜೆ, ಪವನ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X