Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಜುಮನ್ : ಅ.17ರಿಂದ ಶೈಕ್ಷಣಿಕ ವಿಚಾರ...

ಅಂಜುಮನ್ : ಅ.17ರಿಂದ ಶೈಕ್ಷಣಿಕ ವಿಚಾರ ಸಂಕೀರ್ಣ

ವಾರ್ತಾಭಾರತಿವಾರ್ತಾಭಾರತಿ9 July 2019 6:38 PM IST
share
ಅಂಜುಮನ್ : ಅ.17ರಿಂದ ಶೈಕ್ಷಣಿಕ ವಿಚಾರ ಸಂಕೀರ್ಣ

ಭಟ್ಕಳ: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಮಾರಂಭದ ಅಂಗವಾಗಿ ಅ.17,18 ರಂದು ‘ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಪರಿಹಾರ’ ಎಂಬ ವಿಷಯದಲ್ಲಿ  ಎರಡು ದಿನಗಳ ಶೈಕ್ಷಣಿಕ ವಿಚಾರ ಸಂಕೀರ್ಣ ಆಯೋಜಿಸುವುದಾಗಿ ಅಂಜುಮನ್ ಸಂಸ್ಥೆಯ ಜುಕಾಕೋ ಶಮ್ಸುದ್ದೀನ್ ಮೆಮೊರಿಯಲ್ ಸಭಾಂಗಣದಲ್ಲಿ ಜರಗಿದ ಕರಾವಳಿ ಜಿಲ್ಲೆಗಳ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಅಂಜುಮನ್ ಸಂಸ್ಥೆಯ ಶತಮಾನ ಪೂರೈಸಿದ್ದು ಇದರ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರಗುತ್ತಿದ್ದು ಎರಡು ದಿನಗಳ ಶೈಕ್ಷಣಿಕ ಸಮ್ಮೇಳನವೂ ಸೇರಿದೆ.

ಈ ಕುರಿತಂತೆ ಜು. 7ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ವಿಚಾರ ಸಂಕೀರ್ಣದ ಕುರಿತ ರೂಪುರೇಶೆಗಳನ್ನು ಸಿದ್ಧಪಡಿಸಿದ್ದು ರಾಜ್ಯದ ಮಂತ್ರಿಗಳು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಮುಖ್ಯಸ್ಥರು ಸೇರಿ ತಮ್ಮ ತಮ್ಮ ಸಂಸ್ಥೆಗಳ ವಿವಿಧ ಸಮಸ್ಯೆಗಳನ್ನು ಚರ್ಚಿಸಿದ್ದು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂಬರುವ ಶೈಕ್ಷಣಿಕ ಸಮ್ಮೇಳನ ಸಹಕಾರಿಯಾಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಶಾಬಂದ್ರಿ, ಅಂಜುಮನ್ ಶತಮಾನೋತ್ಸವ ಸಮಾರಂಭ ಸಮಿತಿಯ ಸಂಚಾಲಕ ಅಬ್ದುಲ್ ರಖೀಬ್ ಎಂ.ಜೆ, ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಮುಷ್ತಾಖ್ ಆಹ್ಮದ್ ಭಾವಿಕಟ್ಟಿ, ಮತ್ತಿತರರು ಮಾತನಾಡಿದರು. 

ಸಭೆಯಲ್ಲಿ, ಅಧಿಕಾರಿಗಳು ಮತ್ತು ಅಂಜುಮಾನ್ ಹಮಿ ಇ ಮುಸ್ಲೀಮೀನ್ ಮತ್ತು ಮೌಲಾನಾ ಉಬೈದುಲ್ಲಾ ಕಂಡ್ಲೂರಿ ನದ್ವಿ, ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹ್ತಿಶಮ್, ಉಪಾಧ್ಯಕ್ಷ ಖಾಜಿ ನಜೀರ್ ಅಹ್ಮದ್, ಮೌಲಾನಾ ತಲ್ಹಾ ರುಕ್ನುದ್ದೀನ್ ನದ್ವಿ, ಮೌಲಾನಾ ಆಹ್ಮದ್ ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು. ಕುಮಟಾ ಮತ್ತು ಸಿರ್ಸಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಪಾಲ್ಗೊಂಡು ಮುಂಬರುವ ಶೈಕ್ಷಣಿಕ ಸೆಮಿನಾರಿಗೆ ಶುಭ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X