Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಶಾಸಕರ ರಾಜೀನಾಮೆ'ಯ ಚರ್ಚೆಗೆ ಬಲಿಯಾಯಿತು...

'ಶಾಸಕರ ರಾಜೀನಾಮೆ'ಯ ಚರ್ಚೆಗೆ ಬಲಿಯಾಯಿತು ಬಿಬಿಎಂಪಿ ಸಭೆ

ಗದ್ದಲ, ಗಲಾಟೆಯ ನಡುವೆ ಸಭೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ9 July 2019 7:47 PM IST
share
ಶಾಸಕರ ರಾಜೀನಾಮೆಯ ಚರ್ಚೆಗೆ ಬಲಿಯಾಯಿತು ಬಿಬಿಎಂಪಿ ಸಭೆ

ಬೆಂಗಳೂರು, ಜು. 9: ಜನರ ಸಮಸ್ಯೆಗಳ ಚರ್ಚೆಗೆ ಕರೆದಿದ್ದ ಬಿಬಿಎಂಪಿ ಕೌನ್ಸಿಲ್ ಸಭೆಯನ್ನು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರ ಗದ್ದಲ, ಗಲಾಟೆಯ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮುಂದೂಡಲಾಯಿತು.

ಎರಡು ಗಂಟೆಗಳ ತಡವಾಗಿ ಆರಂಭವಾದ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ, ಶಾಸಕರ ರಾಜೀನಾಮೆ ವಿಚಾರ ಪ್ರಸ್ತಾಪಗೊಂಡಿದ್ದರಿಂದ ಪರಸ್ಪರ ವಾದ-ವಿವಾದ ನಡೆಯಿತು. ಕಾಂಗ್ರೆಸ್ ಸದಸ್ಯ ವೇಲುನಾಯಕ್ ನಮ್ಮ ಕ್ಷೇತ್ರದ ಶಾಸಕರು ಎಲ್ಲಿದ್ದಾರೋ ತಿಳಿಯುತ್ತಿಲ್ಲ, ಅವರನ್ನು ಕರೆ ತರಬೇಕೆಂದರು. ಇದೇ ವೇಳೆ ಬಿಜೆಪಿ ಸದಸ್ಯ ಉಮೇಶ್ ಶೆಟ್ಟಿ, ಕುರುಕ್ಷೇತ್ರ ಆರಂಭವಾಗಿದೆ, ಶಾಸಕರ ಬಗ್ಗೆ ಚಿಂತಿಸಬೇಡಿ ಎಂದರು.

ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಬಿಜೆಪಿ ಪಕ್ಷದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಅಲ್ಲದೆ, ಬಿಜೆಪಿ ನಾಯಕರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು. ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಿ, ಹಿಂಬಾಗಿಲಿನಿಂದ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ನಾಯಕರು ಆಪರೇಷನ್ ಕಮಲ ಮಾಡುತ್ತಿದ್ದಾರೆಂದು ಮಾಜಿ ಮೇಯರ್ ಜಿ.ಪದ್ಮಾವತಿ ಆಕ್ಷೇಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರಾದ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಕಾಂಗ್ರೆಸ್ ಸದಸ್ಯರಾದ ಎಂ. ಶಿವರಾಜ್, ಆರ್.ಎಸ್. ಸತ್ಯನಾರಾಯಣ, ಪಾರ್ಥಿಬನ್ ಸೇರಿದಂತೆ ಎಲ್ಲರೂ ಬಿಜೆಪಿ ಡೌನ್ ಡೌನ್, ಬಿಜೆಪಿಗೆ ಧಿಕ್ಕಾರ ಎಂದು ಮೇಯರ್ ಪೀಠದ ಎದುರು ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಕೆರಳಿದ ಪಾಲಿಕೆ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಹಾಗೂ ಬಿಜೆಪಿ ಸದಸ್ಯರು ಕೂಡ ಕಾಂಗ್ರೆಸ್ ಸದಸ್ಯರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶೇಮ್ ಶೇಮ್ ಎಂದು ತರಾಟೆಗೆ ತೆಗೆದುಕೊಂಡು, ಆಡಳಿತ ಪಕ್ಷದ ಸದಸ್ಯರೇ ಧರಣಿ ನಡೆಸುತ್ತಾರೆ ಎಂದರೆ, ಅದಕ್ಕಿಂತ ಹೆಚ್ಚಿನ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸದಸ್ಯರು, ಕಾಂಗ್ರೆಸ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದಂತೆ, ಕಾಂಗ್ರೆಸ್ ಸದಸ್ಯರು ಪ್ರತಿಯಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಗಳನ್ನು ಕೂಗಲಾರಂಭಿಸಿದರು. ಈ ನಡುವೆ ಮಾತಿನ ಚಕಮಕಿ ನಡೆದಿದ್ದರಿಂದ ಗೊಂದಲದ ಗೂಡಾಯಿತು. ಜನರ ಸಮಸ್ಯೆಗಳನ್ನು ಚರ್ಚಿಸಲು ಅವಕಾಶ ನೀಡುವಂತೆ ಧ್ವನಿವರ್ದಕದ ಮೂಲಕ ಮೇಯರ್ ಮನವಿ ಮಾಡಿದರೂ ಯಾರೂ ಸ್ಪಂದಿಸಲಿಲ್ಲ. ಹೀಗಾಗಿ, ಸಭೆಯನ್ನು ಅವರು ಮುಂದೂಡಲಾಗಿದೆ ಎಂದು ಹೇಳಿ ನಿರ್ಗಮಿಸಿದರು.

ಕ್ಷಮೆಯಾಚನೆಗೆ ಆಗ್ರಹ: ಅನಗತ್ಯವಾಗಿ ಪಾಲಿಕೆ ಸಭೆಯನ್ನು ಮುಂದೂಡಿ, ಸಾರ್ವಜನಿಕರ ತೆರಿಗೆ ಹಣವನ್ನು ಹಾಳುಮಾಡಿರುವ ಮೇಯರ್ ಗಂಗಾಂಬಿಕೆ ನಗರದ ಜನತೆಯ ಕ್ಷಮೆಯಾಚಿಸುವಂತೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಆಗ್ರಹಿಸಿದರು.

ಪ್ರತಿಪಕ್ಷಗಳು ಪ್ರತಿಭಟನೆ, ಧರಣಿ ನಡೆಸುವುದು ಸಹಜ. ಆದರೆ, ಆಡಳಿತ ಪಕ್ಷದವರೇ ಸಭೆಯಲ್ಲಿ ಗಲಾಟೆ ನಡೆಸಿರುವುದು ಅಸಂಭದ್ದ. ಹೀಗಾಗಿ, ಸಭೆಯಲ್ಲಿ ಗದ್ದಲ ನಡೆಸಿದ, ಸಭೆ ನಡೆಸಲು ಅವಕಾಶ ನೀಡದ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಮೇಯರ್ ಅಮಾನತು ಮಾಡಬೇಕು ಎಂದರು.

ಪಾಲಿಕೆಯ ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಷ್ಟೇ ಇರುವುದಿಲ್ಲ ಹಾಗೂ ನಾನು ಕಾಂಗ್ರೆಸ್ ಪಕ್ಷವನ್ನಷ್ಟೇ ಪ್ರತಿನಿಧಿಸುವುದಿಲ್ಲ. ಇಲ್ಲಿರುವ 198 ಸದಸ್ಯರನ್ನು ಪ್ರತಿನಿಧಿಸುತ್ತೇನೆ. ಕೌನ್ಸಿಲ್ ಸಭೆ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್-ಬಿಜೆಪಿ ಪಕ್ಷದವರ ನಡುವೆ ಮಾತಿನ ಚಕಮಕಿ, ವಾದ-ವಿವಾದ ನಡೆಯಿತು. ಎಷ್ಟೇ ಸಮಾಧಾನ ಮಾಡಿದರೂ ಸದಸ್ಯರು ಈ ಕಡೆ ಗಮನ ಹರಿಸದ ಹಿನ್ನೆಲೆಯಲ್ಲಿ ಸಭೆಯನ್ನು ಅನಿವಾರ್ಯವಾಗಿ ಮುಂದೂಡಲಾಯಿತು.

-ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್

ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಶಾಸಕರನ್ನು ಕುದುರೆ ವ್ಯಾಪಾರ ಮಾಡುವ ಮೂಲಕ ಖರೀದಿ ಮಾಡಲು ಮುಂದಾಗಿದ್ದಾರೆ. ಇದನ್ನು ಮುಂದಿಟ್ಟುಕೊಂಡು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಪ್ರತಿಭಟನೆ ನಡೆಸಿದೆವು. ನಾವು ಸಭೆಯಲ್ಲಿ ಯಾವುದೇ ವಿಷಯ ಚರ್ಚಿಸಲು ಸಿದ್ಧರಿದ್ದೇವೆ.

-ಅಬ್ದುಲ್ ವಾಜಿದ್, ಆಡಳಿತ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X