ಕೋಳಿ ಅಂಕದ ಅಡ್ಡೆಗೆ ದಾಳಿ: 21 ಮಂದಿ ಪೊಲೀಸರ ವಶ
ಬಂಟ್ವಾಳ, ಜು. 10: ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕದ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು 21 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಬಂಟ್ವಾಳ ತಾಲೂಕು ಕೊಡಂಬೆಟ್ಟು ಗ್ರಾಮದ ಹೊಸಬೆಟ್ಟು ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಬಂದ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 14,120 ರೂ., 15 ಕೋಳಿಗಳನ್ನು ಸಹಿತ 21 ಮಂದಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.
ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





