Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂಬೈನಲ್ಲಿ ಅತೃಪ್ತ ಶಾಸಕರ ಭೇಟಿಗೆ ಸಿಗದ...

ಮುಂಬೈನಲ್ಲಿ ಅತೃಪ್ತ ಶಾಸಕರ ಭೇಟಿಗೆ ಸಿಗದ ಅವಕಾಶ: ಸಚಿವ ಡಿಕೆಶಿ ಬರಿಗೈಲಿ ಬೆಂಗಳೂರಿಗೆ ವಾಪಸ್

ಹೊಟೇಲ್ ಪ್ರವೇಶಕ್ಕೆ ಪೊಲೀಸ್ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ10 July 2019 8:16 PM IST
share
ಮುಂಬೈನಲ್ಲಿ ಅತೃಪ್ತ ಶಾಸಕರ ಭೇಟಿಗೆ ಸಿಗದ ಅವಕಾಶ: ಸಚಿವ ಡಿಕೆಶಿ ಬರಿಗೈಲಿ ಬೆಂಗಳೂರಿಗೆ ವಾಪಸ್

ಬೆಂಗಳೂರು, ಜು.10: ಅತೃಪ್ತ ಶಾಸಕರ ಮನವೊಲಿಕೆಗಾಗಿ ಮುಂಬೈಗೆ ತೆರಳಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ತಂಡವು, ಅತೃಪ್ತ ಶಾಸಕರನ್ನು ಭೇಟಿ ಮಾಡಲು ಸಾಧ್ಯವಾಗದೇ ಬರಿಗೈಲಿ ವಾಪಸ್ ಆಗುವಂತೆ ಆಗಿದೆ.

ಶಿವಕುಮಾರ್ ಮುಂಬೈಗೆ ಬರುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಅತೃಪ್ತ ಶಾಸಕರು ಮುಂಬೈ ಪೊಲೀಸರಿಗೆ ರಕ್ಷಣೆ ಕೋರಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರು ತಂಗಿದ್ದ ಹೊಟೇಲ್‌ಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಅತೃಪ್ತರನ್ನು ಭೇಟಿ ಮಾಡುವ ಉದ್ದೇಶದಿಂದ ಅವರು ತಂಗಿದ್ದ ಹೊಟೇಲ್‌ನಲ್ಲಿಯೇ ಡಿ.ಕೆ.ಶಿವಕುಮಾರ್ ಕೊಠಡಿಯನ್ನು ಕಾಯ್ದಿರಿಸಿದ್ದರು. ಆದರೆ, ಇಂದು ಬೆಳಗ್ಗೆ ಹೊಟೇಲ್ ಪ್ರವೇಶಿಸಲು ಹೋದ ಅವರನ್ನು ಪೊಲೀಸರು ತಡೆದರು. ಅಲ್ಲದೇ, ಹೊಟೇಲ್ ಆಡಳಿತ ಮಂಡಳಿಯು ಇ-ಮೇಲ್ ಮೂಲಕ ಕಾಯ್ದಿರಿಸಿದ್ದ ಕೊಠಡಿಯನ್ನು ರದ್ದುಗೊಳಿಸಿರುವುದಾಗಿ ಸಂದೇಶ ಕಳುಹಿಸಿದರು.

ಡಿ.ಕೆ.ಶಿವಕುಮಾರ್‌ಗೆ ಹೊಟೇಲ್ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ ಕ್ರಮವನ್ನು ಖಂಡಿಸಿ, ಮುಂಬೈ ಮಹಾನಗರ ಕಾಂಗ್ರೆಸ್ ಸಮಿತಿಯ ಮುಖಂಡ ಮಿಲಿಂದ್ ದೇವೋರಾ ಸೇರಿದಂತೆ ಇನ್ನಿತರ ಮುಖಂಡರು ಹೊಟೇಲ್ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಬಂದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ, ‘ಗೋ ಬ್ಯಾಕ್ ಶಿವಕುಮಾರ್’ ಎಂದು ಘೋಷಣೆಗಳನ್ನು ಕೂಗಿದರು.

ಮುಂಜಾನೆ ಏಳು ಗಂಟೆಯಿಂದಲೂ ಹೊಟೇಲ್ ಎದುರು ನಡುರಸ್ತೆಯಲ್ಲಿ ಮಳೆಯಲ್ಲೆ ನಿಂತಿದ್ದ ಶಿವಕುಮಾರ್, ಮುಂಬೈ ಪೊಲೀಸರಿಗೆ ಎಷ್ಟು ಮನವಿ ಮಾಡಿದರೂ ಆವರನ್ನು ಹೊಟೇಲ್ ಒಳಗೆ ಹೋಗಲು ಅವಕಾಶ ಕಲ್ಪಿಸಲಾಗಿಲ್ಲ. ಅಲ್ಲದೇ, ಹೊಟೇಲ್ ಬಳಿ ನಿಷೇಧಾಜ್ಞೆ ಜಾರಿಗೊಳಿಸಿದರು. ಶಾಸಕರ ಮನವೊಲಿಕೆಗೆ ಹಲವು ಸಮಯ ರಸ್ತೆಯಲ್ಲಿದ್ದ ಡಿ.ಕೆ.ಶಿವಕುಮಾರ್, ರಸ್ತೆ ಬದಿಯಲ್ಲಿಯೇ ತಿಂಡಿ ಸೇವಿಸಿದರು.

ನಾನು ಸಚಿವನಲ್ಲ, ಒಬ್ಬ ಸಾಮಾನ್ಯ ನಾಗರಿಕ. ನಾನೇನು ಉಗ್ರಗಾಮಿಯಲ್ಲ. ಇವೆಲ್ಲ ರಾಜಕೀಯ ತಂತ್ರಗಳು ಅಷ್ಟೇ. ನಾನು ನಮ್ಮ ಪಕ್ಷದ ಶಾಸಕರನ್ನು ಭೇಟಿಯಾಗಲು ಬಂದಿದ್ದೇನೆ. ಅದಕ್ಕೆ ನಿರ್ಬಂಧ ವಿಧಿಸಲು ಇವರು ಯಾರು. ನಾನು ನಮ್ಮ ಶಾಸಕರನ್ನು ಭೇಟಿ ಮಾಡುವವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

ನಾನು ಕಾಯ್ದಿರಿಸಿರುವ ಕೊಠಡಿಯೊಳಗೆ ಹೋಗಲು ಅನುಮತಿ ನೀಡುತ್ತಿಲ್ಲ. ಭದ್ರತೆಯ ದೃಷ್ಟಿಯಿಂದ ಬದಲಾವಣೆ ಮಾಡಿರುವುದಾಗಿ ತಿಳಿಸುತ್ತಿದ್ದಾರೆ. ನನ್ನಿಂದ ಯಾರಿಗೂ ಯಾವುದೇ ಅಪಾಯವಿಲ್ಲ. ನಾನು ಯಾವುದೇ ಅನಾಹುತ ಮಾಡುವುದಿಲ್ಲ. ನನ್ನ ಬಳಿ ಯಾವುದೇ ಶಸ್ತ್ರಾಸ್ತ್ರಗಳಿಲ್ಲ. ಆದರೂ, ನನ್ನನ್ನು ಯಾಕೆ ತಡೆಯಲಾಗುತ್ತಿದೆ ಎಂದು ಅವರು ಪೊಲೀಸರ ಮನವೊಲಿಕೆಗೆ ಪ್ರಯತ್ನಿಸಿದರು.

ನನ್ನ ಸ್ನೇಹಿತರು ಈ ಹೊಟೇಲ್‌ನಲ್ಲಿ ತಂಗಿದ್ದಾರೆ. ಅವರ ಜೊತೆ ಕೂತು ಮಾತನಾಡಬೇಕು. ದಯವಿಟ್ಟು ನನಗೆ ಒಳಗೆ ಹೋಗಲು ಅವಕಾಶ ನೀಡಿ ಶಿವಕುಮಾರ್ ಮನವಿ ಮಾಡಿದರು. ಆದರೆ, ಇದಕ್ಕೆ ಒಪ್ಪದ ಪೊಲೀಸರು, ಡಿ.ಕೆ.ಶಿವಕುಮಾರ್, ಸಚಿವ ಜಿ.ಟಿ.ದೇವೇಗೌಡ, ಶಾಸಕರಾದ ಶಿವಲಿಂಗೇಗೌಡ, ಬಾಲಕೃಷ್ಣ ಸೇರಿದಂತೆ ಇನ್ನಿತರರನ್ನು ಮುಂಬೈ ವಿಮಾನ ನಿಲ್ದಾಣದ ಸಮೀಪದ ಅತಿಥಿಗೃಹಕ್ಕೆ ಕರೆದೊಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X