Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಾರಾಷ್ಟ್ರ ಸರಕಾರದ ವರ್ತನೆ ಖಂಡನೀಯ:...

ಮಹಾರಾಷ್ಟ್ರ ಸರಕಾರದ ವರ್ತನೆ ಖಂಡನೀಯ: ಸಿಎಂ ಕುಮಾರಸ್ವಾಮಿ

"ಸಚಿವರು, ಶಾಸಕರನ್ನು ಬೀದಿಯಲ್ಲಿ ನಿಲ್ಲಿಸಿದ್ದು ಪಾಳೇಗಾರಿಕೆ ಮನೋಭಾವ"

ವಾರ್ತಾಭಾರತಿವಾರ್ತಾಭಾರತಿ10 July 2019 8:43 PM IST
share
ಮಹಾರಾಷ್ಟ್ರ ಸರಕಾರದ ವರ್ತನೆ ಖಂಡನೀಯ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.10: ಮುಂಬೈನಲ್ಲಿ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಘಟನೆಗಳು ಭಾರತೀಯ ಜನತಾ ಪಕ್ಷವು ಪ್ರಜಾಪ್ರಭುತ್ವದ ಎಲ್ಲ ಎಲ್ಲೆಗಳನ್ನೂ ಮೀರಿ ವರ್ತಿಸುತ್ತಿರುವುದು ಹಾಗೂ ನಾಗರಿಕ ಸಂಹಿತೆಯನ್ನೂ ಮೀರಿರುವುದು ಸ್ಪಷ್ಟ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇಂದು ಬೆಳಗ್ಗೆ ಮುಂಬೈನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರನ್ನು ಭೇಟಿ ಮಾಡಲು ತೆರಳಿದ್ದ ನನ್ನ ಸಹೋದ್ಯೋಗಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಜಿ.ಟಿ. ದೇವೇಗೌಡ ಮತ್ತು ಶಾಸಕರಾದ ಶಿವಲಿಂಗೇಗೌಡ ಹಾಗೂ ಬಾಲಕೃಷ್ಣ ಅವರನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡು ಮಹಾರಾಷ್ಟ್ರ ಸರಕಾರ ವರ್ತಿಸಿರುವ ರೀತಿ ಖಂಡನೀಯ ಎಂದು ಅವರು ಕಿಡಿಗಾರಿದ್ದಾರೆ. ಜನಪ್ರತಿನಿಧಿಗಳು, ಅದರಲ್ಲೂ ಸಚಿವರು ಹಾಗೂ ಶಾಸಕರನ್ನು ಬೀದಿಯಲ್ಲಿ ನಿಲ್ಲಿಸಿ ಕಸ್ಟಡಿಗೆ ತೆಗೆದುಕೊಂಡಿರುವುದು ಮತ್ತು ಅಪರಾಧಿಗಳಂತೆ ಅವರನ್ನು ನಡೆಸಿಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆ ಮಾತ್ರವಲ್ಲ, ಪಾಳೇಗಾರಿಕೆಯ ಮನೋಭಾವದ ಅನಾವರಣವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರಕಾರ ನೆರೆಯ ರಾಜ್ಯದ ಸಚಿವರಿಗೆ, ಶಾಸಕರಿಗೆ ರಕ್ಷಣೆ ನೀಡಬೇಕಿತ್ತು. ಆದರೆ, ಅವರನ್ನು ಅಗೌರವದಿಂದ ಕಂಡಿರುವುದು ಸಮಂಜಸವಲ್ಲ. ಮಹಾರಾಷ್ಟ್ರ ಸರಕಾರವು ನೆರೆಯ ರಾಜ್ಯದ ಸರಕಾರವನ್ನು ಅಭದ್ರಗೊಳಿಸಲು ಸಹಕಾರ ನೀಡುತ್ತಿರುವುದು ಇದರಿಂದ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಹೋಟೆಲ್‌ನಲ್ಲಿ ಗೃಹ ಬಂಧನದಲ್ಲಿಡಲು ಮಹಾರಾಷ್ಟ್ರ ಸರಕಾರ ಬಿಜೆಪಿಗೆ ಸಹಕಾರ ನೀಡಿರುವುದು ಇದರಿಂದ ಸಂಪೂರ್ಣ ಸ್ಪಷ್ಟ. ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಬಿಜೆಪಿ ಶಾಸಕರ ದುಂಡಾವರ್ತಿಯ ನಡವಳಿಕೆ ಜಿಗುಪ್ಸೆ ಹುಟ್ಟಿಸುವಂತದ್ದು ಎಂದು ಮುಖ್ಯಮಂತ್ರಿ ಕಿಡಿಗಾರಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕರೊಂದಿಗೆ ಚರ್ಚೆ ನಡೆಸುತ್ತಿದ್ದ ಸಮಯದಲ್ಲಿ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ವರ್ತಿಸಿದ ರೀತಿ ವಿಧಾನಸೌಧಕ್ಕೆ ಅಷ್ಟೇ ಅಲ್ಲ, ಕರ್ನಾಟಕ ರಾಜಕಾರಣದ ಶ್ರೇಷ್ಠ ಪರಂಪರೆಗೂ ಮಸಿ ಬಳಿದಿದೆ ಎಂದು ಅವರು ಟೀಕಿಸಿದ್ದಾರೆ.

ಇಡೀ ರಾಷ್ಟ್ರ ಗಮನಿಸುತ್ತಿದೆ ಎಂಬ ಪರಿವೆಯೂ ಇಲ್ಲದೆ, ಲಜ್ಜಾಹೀನರಾಗಿ ವರ್ತಿಸಿರುವುದು ಬೇಸರ ಉಂಟು ಮಾಡಿದೆ. ಇವರ ಅಧಿಕಾರದ ಹಪಾಹಪಿಯಿಂದ ನಡೆದ ಘಟನಾವಳಿಗಳಿಂದ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ನಗೆಪಾಟಲಿಗೀಡಾಗಿದೆ. ಬಿಜೆಪಿ ನಡೆಸುತ್ತಿರುವುದು ಪ್ರಜಾಪ್ರಭುತ್ವ ರಾಜಕಾರಣವೋ ಅಥವಾ ದಮನಕಾರಿ ಮನೋಭಾವದ ವಿಕೃತ ಪ್ರದರ್ಶನವೋ? ಎಂದು ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X