Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಾವಿನ ಎಲೆಗಳ ಅದ್ಭುತ ಆರೋಗ್ಯಲಾಭಗಳು...

ಮಾವಿನ ಎಲೆಗಳ ಅದ್ಭುತ ಆರೋಗ್ಯಲಾಭಗಳು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ10 July 2019 9:08 PM IST
share
ಮಾವಿನ ಎಲೆಗಳ ಅದ್ಭುತ ಆರೋಗ್ಯಲಾಭಗಳು ಗೊತ್ತೇ ?

ಮಾವಿನ ಹಣ್ಣಿನ ಸ್ವಾದ ಯಾರಿಗೆ ಇಷ್ಟವಿಲ್ಲ?, ಸ್ವಾದದ ಜೊತೆಗೆ ಸಮೃದ್ಧ ವಿಟಾಮಿನ್‌ಗಳು ಮತ್ತು ಖನಿಜಗಳನ್ನೊಳಗೊಂಡಿರುವ ಅದು ಆರೋಗ್ಯಲಾಭಗಳನ್ನೂ ನೀಡುತ್ತದೆ. ಮಾವಿನ ಎಲೆಗಳೂ ಔಷಧೀಯ ಗುಣಗಳನ್ನು ಹೊಂದಿವೆ. ತನ್ನ ಈ ಗುಣಗಳಿಂದಾಗಿ ಪೌರ್ವಾತ್ಯ ವೈದ್ಯಕೀಯದಲ್ಲಿ ಅದು ಮಹತ್ವದ ಸ್ಥಾನವನ್ನು ಹೊಂದಿದೆ.

ಮಾವಿನ ಎಲೆಯು ಎ,ಬಿ ಮತ್ತು ಸಿ ವಿಟಮಿನ್‌ಗಳ ಜೊತೆಗೆ ಫೆನಾಲ್‌ಗಳು ಮತ್ತು ಫ್ಲಾವನಾಯ್ಡಾಗಳು ಸೇರಿದಂತೆ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಮಾವಿನ ಎಲೆಗಳು ನೀಡುವ ಆರೋಗ್ಯಲಾಭಗಳ ಕುರಿತು ಮಾಹಿತಿಯಿಲ್ಲಿದೆ.....

►ಟೈಪ್ 2 ಮಧುಮೇಹವನ್ನು ನಿಯಂತ್ರಿಸುತ್ತದೆ

  ಮಧುಮೇಹದ ಚಿಕಿತ್ಸೆಗೆ ನೆರವಾಗುವ ಆ್ಯಂಥೊಸೈನಿಡಿನ್‌ಗಳೆಂಬ ಟ್ಯಾನಿನ್‌ಗಳನ್ನು ಒಳಗೊಂಡಿರುವುದರಿಂದ ಮಾವಿನ ಎಲೆಗಳು ಮಧುಮೇಹವನ್ನು ನಿಯಂತ್ರಿಸಲು ಪರಿಣಾಮಕಾರಿಯಾಗಿವೆ ಎಂದು ಪರಿಗಣಿಸಲಾಗಿದೆ. ಮಧುಮೇಹ ನಿಯಂತ್ರಣಕ್ಕಾಗಿ ಮಾವಿನ ಎಲೆಗಳನ್ನು ಚೆನ್ನಾಗಿ ಒಣಗಿಸಿ ಪುಡಿಯ ರೂಪದಲ್ಲಿ ಸೇವಿಸಬಹುದಾಗಿದೆ.

►ಗ್ರಹಣ ಶಕ್ತಿಯನ್ನು ಉತ್ತಮಗೊಳಿಸುತ್ತದೆ

ಟೈಪ್ 2 ಮಧುಮೇಹವು ಅಲ್ಝೀಮರ್ಸ್ ಕಾಯಿಲೆ ಮತ್ತು ಮಿದುಳಿಗೆ ರಕ್ತಪೂರೈಕೆಯಲ್ಲಿ ವ್ಯತ್ಯಯಗಳಿಂದಾಗಿ ಉಂಟಾಗುವ ವಸ್ಕುಲರ್ ಡಿಮೆನ್ಶಿಯಾ ಅಥವಾ ನಾಳೀಯ ಬುದ್ಧಿಮಾಂದ್ಯತೆಗೆ ಗುರಿಯಾಗುವ ಅಪಾಯವನ್ನು ಹೆಚ್ಚಿಸುತ್ತದೆ. ಮಾವಿನ ಎಲೆಗಳ ಸಾರವು ಟೈಪ್ 2 ಮಧುಮೇಹಿಗಳಲ್ಲಿ ಅರಿವಿನ ಕಾರ್ಯನಿರ್ವಹಣೆಯನ್ನು ಸುಧಾರಿಸುವ ಮೂಲಕ ಇಂತಹ ಗಂಭೀರ ರೋಗಗಳ ವಿರುದ್ಧ ರಕ್ಷಣೆಯನ್ನು ನೀಡುತ್ತದೆ.

►ಅಧಿಕ ರಕ್ತದೊತ್ತಡವನ್ನು ತಗ್ಗಿಸುತ್ತದೆ

ಮಾವಿನ ಎಲೆಯು ಅಧಿಕ ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಾವಿನ ಎಲೆಗಳ ಸೇವನೆಯು ರಕ್ತನಾಳಗಳನ್ನು ಬಲಗೊಳಿಸಲು ಮತ್ತು ವೆರಿಕೋಸ್ ವೇನ್(ಉಬ್ಬಿದ ರಕ್ತನಾಳ)ಗಳ ಚಿಕಿತ್ಸೆಗೂ ನೆರವಾಗುತ್ತದೆ.

►ಅಸ್ತಮಾಕ್ಕೆ ಚಿಕಿತ್ಸೆ ನೀಡುತ್ತದೆ

ಅಸ್ತಮಾ ಸೇರಿದಂತೆ ಶ್ವಾಸಕೋಶದ ಕಾಯಿಲೆಗಳಿಗೆ ಮಾವಿನ ಎಲೆಗಳನ್ನು ಬಳಸಿ ಚಿಕಿತ್ಸೆ ನೀಡಬಹುದಾಗಿದೆ. ಬ್ರಾಂಕೈಟಿಸ್ ಅಥವಾ ಶ್ವಾಸನಾಳಗಳ ಒಳಪೊರೆಗಳ ಉರಿಯೂತ,ಅಸ್ತಮಾ ಮತ್ತು ಶೀತದಿಂದ ಬಳಲುತ್ತಿರುವವರು ಮಾವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ,ಆ ನೀರಿಗೆ ಸ್ವಲ್ಪ ಜೇನನ್ನು ಸೇರಿಸಿ ಕುಡಿಯಬಹುದಾಗಿದೆ.

►ಬೇಧಿಯನ್ನು ನಿಲ್ಲಿಸುತ್ತದೆ

ಮಾವಿನ ಎಲೆಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಮತ್ತು ಸೂಕ್ಷ್ಮಜೀವಿ ನಿರೋಧಕ ಗುಣಗಳು ಸ್ಟಾಫೈಲೊಕಾಕಸ್ ಆರಿಯಸ್ ಮತ್ತು ಸಾಲ್ಮೊನೆಲ್ಲಾ ಟೈಫಿಮುರಿಯಮ್ ಬ್ಯಾಕ್ಟೀರಿಯಾಗಳ ವಿರುದ್ಧ ಪರಿಣಾಮಕಾರಿಯಾಗಿವೆ. ಇವೆರಡೂ ಬ್ಯಾಕ್ಟೀರಿಯಾಗಳು ಮಾನವರಲ್ಲಿ ಹಲವಾರು ವಿಧದ ಸೋಂಕುಗಳನ್ನುಂಟು ಮಾಡುತ್ತವೆ.

► ಜಠರದ ಆರೋಗ್ಯವನ್ನು ಹೆಚ್ಚಿಸುತ್ತದೆ

ಮಾವಿನ ಎಲೆಯು ತನ್ನಲ್ಲಿರುವ ಗ್ಯಾಸ್ಟ್ರಿಕ್‌ನಿಂದ ರಕ್ಷಣೆ ನೀಡುವ ಗುಣಗಳಿಂದಾಗಿ ಜಠರವನ್ನು ವಿವಿಧ ಅನಾರೋಗ್ಯಗಳಿಂದ ರಕ್ಷಿಸುತ್ತದೆ. ಇದಕ್ಕಾಗಿ ನೀವು ಮಾಡಬೇಕಿರುವುದು ಇಷ್ಟೇ:ರಾತ್ರಿ ಬೆಚ್ಚಗಿನ ನೀರಿನಲ್ಲಿ ಕೆಲವು ಮಾವಿನ ಎಲೆಗಳನ್ನು ಹಾಕಿಡಿ. ಬೆಳಿಗ್ಗೆ ಈ ನೀರನ್ನು ಸೋಸಿ ಕುಡಿದುಬಿಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X