ರೆಡ್‌ಕ್ರಾಸ್‌ನಿಂದ ವಿಶ್ವ ಜನಸಂಖ್ಯಾ ದಿನಾಚರಣೆ
ಉಡುಪಿ, ಜು.10: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜು.11ರಂದು ಅಪರಾಹ್ನ 3:00 ಗಂಟೆಗೆ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಂಟ್ ಹಾಲ್‌ನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಉಮೇಶ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





