Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯ ಒಂಟಿ ಮಹಿಳೆ ಕೊಲೆ ಪ್ರಕರಣ:...

ಉಡುಪಿಯ ಒಂಟಿ ಮಹಿಳೆ ಕೊಲೆ ಪ್ರಕರಣ: ಇಬ್ಬರ ಬಂಧನ

ಚಿನ್ನದಾಸೆಗೆ ವೃದ್ಧೆಯ ಕೊಲೆ; ಗೋವಾದಲ್ಲಿ ಬಲೆಗೆ ಬಿದ್ದ ಆರೋಪಿಗಳು

ವಾರ್ತಾಭಾರತಿವಾರ್ತಾಭಾರತಿ10 July 2019 10:03 PM IST
share
ಉಡುಪಿಯ ಒಂಟಿ ಮಹಿಳೆ ಕೊಲೆ ಪ್ರಕರಣ: ಇಬ್ಬರ ಬಂಧನ

ಉಡುಪಿ, ಜು.11: ಗೋವಾದ ಪಣಜಿಯ ಸೆಂಟಾಕ್ರೂಸ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಗೋವಾ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಹ್ಮಣ್ಯ ನಗರದ ಮನೆಯೊಂದರಲ್ಲಿ ವಾಸವಾಗಿದ್ದ ವೃದ್ಧ ಮಹಿಳೆಯ ಕೊಲೆ ಆರೋಪಿಗಳಿಬ್ಬರನ್ನು ಉಡುಪಿ ಪೊಲೀಸರು ಬಂಧಿಸಿ ಬುಧವಾರ ಉಡುಪಿಗೆ ಕರೆ ತಂದಿದ್ದಾರೆ.

ಧಾರವಾಡ ಜಿಲ್ಲೆಯ ನರಗುಂದ ನಿವಾಸಿಗಳಾಗಿದ್ದು, ಅಂಬಣ್ಣ ಯಾನೆ ಅಂಬರೀಶ್ ಯಾನೆ ಅಂಬಣ್ಣ ಬಸಪ್ಪ ಜಾಡರ್ ಯಾನೆ ಶಿವ (31) ಹಾಗೂ ಆತನ ಪತ್ನಿ ರಶೀದಾ ಯಾನೆ ಖಾಜಿ ಯಾನೆ ಜ್ಯೋತಿ (26) ಬಂಧಿತ ಆರೋಪಿಗಳು.

ಸುಬ್ರಹ್ಮಣ್ಯ ನಗರದ 5ನೇ ಕ್ರಾಸ್‌ನಲ್ಲಿರುವ ಮನೆಯಲ್ಲಿ ಒಬ್ಬರೇ ವಾಸಿಸುತಿದ್ದ ರತ್ನಾವತಿ ಜಿ.ಶೆಟ್ಟಿ (80) ಅವರನ್ನು ಜು.2ರ ಅಪರಾಹ್ನ 3ರಿಂದ ಜ.5ರ ರಾತ್ರಿ 8:30ರ ನಡುವಿನ ಅವಧಿಯಲ್ಲಿ ಮನೆಯನ್ನು ಪ್ರವೇಶಿಸಿ ಆಯುಧದಿಂದ ಕೊಲೆ ಮಾಡಿ ಅವರ ಮೈಮೇಲಿದ್ದ ಹಾಗೂ ಮನೆಯಲ್ಲಿದ್ದ ಎರಡು ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು.

ಈ ಬಗ್ಗೆ ಮೃತರ ಮಗಳಾದ ಸುಪ್ರಭಾ ನೀಡಿದ ದೂರಿನಂತೆ ಉಡುಪಿ ನಗರ ಠಾಣೆುಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಆರಂಭಿಸಿದ ಪೊಲೀಸರು ಮನೆಯ ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಕೆಲವು ದಿನಗಳ ಹಿಂದೆ ರತ್ನಾವತಿ ಜಿ. ಶೆಟ್ಟಿ ಅವರ ಮನೆಗೆ ಒಬ್ಬ ಗಂಡಸು ಮತ್ತು ಓರ್ವ ಮಹಿಳೆ ಮನೆ ಬಾಡಿಗೆಗೆ ಬಂದಿರುವ ವಿಚಾರ ತಿಳಿದು ಬಂತು. ಸಂಶಯಿತ ವ್ಯಕ್ತಿಗಳ ಮಾಹಿತಿ ಕಲೆ ಹಾಕಿದಾಗ ಅವರು ಧಾರವಾಡ ಜಿಲ್ಲೆ ನರಗುಂದದವರು ಎಂಬ ಮಾಹಿತಿ ಸಿಕ್ಕಿತು. ಆರೋಪಿಗಳ ಇರುವಿಕೆಯ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿದಾಗ ಇಬ್ಬರೂ ಗೋವಾ ರಾಜ್ಯದ ಓಲ್ಡ್ ಗೋವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವುದು ಪತ್ತೆಯಾಯಿತು. ಈ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಿ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಕೋರಿಕೊಂಡು ವಿಶೇಷ ತಂಡವನ್ನು ಗೋವಾಕ್ಕೆ ಕಳುಹಿಸಿಕೊಡಲಾಯಿತು.

ಉಡುಪಿಯ ವಿಶೇಷ ತನಿಖಾ ತಂಡ, ಗೋವಾ ಪೊಲೀಸರ ಸಹಕಾರದಿಂದ ಆರೋಪಿಗಳನ್ನು ಸೆಂಟಾಕ್ರೂಸ್‌ನಲ್ಲಿ ಬಂಧಿಸಿ ಬುಧವಾರ ಉಡುಪಿಗೆ ಕರೆ ತಂದಿದೆ.

ಉಡುಪಿ ವೃತ್ತ ನಿರೀಕ್ಷಕ ನೇತೃತ್ವದ ವಿಶೇಷ ತಂಡ, ಡಿಸಿಐಬಿ ತಂಡದ ಸದಸ್ಯರೊಂದಿಗೆ ಜಂಟಿಯಾಗಿ ಪ್ರಕರಣ ದಾಖಲಾಗಿ 5 ದಿನದೊಳಗೆ ಪ್ರಕರಣ ವನ್ನು ಚಾಣಾಕ್ಷತನದಿಂದ ಭೇದಿಸಿ ಆರೋಪಿಗಳನ್ನು ಬಂಧಿಸಿರುವುದಕ್ಕೆ ಎಸ್ಪಿ ನಿಶಾ ಜೇಮ್ಸ್ ಶ್ಲಾಘಿಸಿದ್ದಾರೆ.

ಮೋಜಿನ ಜೀವನಕ್ಕಾಗಿ ಕೊಲೆ ಕೃತ್ಯ

ದುಂದುವೆಚ್ಚ, ಮೋಜಿನ ಜೀವನಕ್ಕೆ ಹಣದ ಅಡಚಣೆಯಾದ ಕಾರಣ ಕೊಲೆ ಕೃತ್ಯ ಎಸಗಿರುವುದಾಗಿ ಅಂಬಣ್ಣ ಪೊಲೀಸರಿಗೆ ವಿಚಾರಣೆಯ ವೇಳೆ ತಿಳಿಸಿದ್ದಾನೆ. ತಮಗೆ ಬಾಡಿಗೆ ಮನೆ ನೀಡಿದ ಯಜಮಾನಿ ರತ್ನಾವತಿ ಶೆಟ್ಟಿ ಅವರ ಕುತ್ತಿಗೆ ಮತ್ತು ಕೈಯಲ್ಲಿದ್ದ ಚಿನ್ನವನ್ನು ನೋಡಿ ಮನೆಯಲ್ಲಿ ತುಂಬಾ ಚಿನ್ನ ಇರಬಹುದೆಂದು ತಿಳಿದು ತಾವು ಕೊಲೆ ಮಾಡಿದ್ದೇವೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆ ಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆರೋಪಿ ಅಂಬಣ್ಣ ಬಸಪ್ಪ ಜಾಡರ್ ಈ ಹಿಂದೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ. ಹುಬ್ಬಳ್ಳಿ ಯಲ್ಲಿ ಮೊಬೈಲ್ ಕಳವು , ಬಿಜಾಪುರದಲ್ಲಿ ಸ್ಕೂಟರ್ ಕಳವು, ಬಾದಾಮಿಯಲ್ಲಿ ಸರ ಸುಲಿಗೆ, ಮಂಗಳೂರಿನ ಕಾವೂರಿನಲ್ಲಿ ಮನೆ ಕಳವು ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X