ಮಂಗಳೂರು ವಿವಿ: ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನ
ಮಂಗಳೂರು, ಜು.10: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿವಿ ಆವರಣ, ಮಂಗಳಗಂಗೋತ್ರಿ/ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ/ವಿವಿ ಕಾಲೇಜು, ಮಂಗಳೂರು ವಿವಿ ಸಂಧ್ಯಾ ಕಾಲೇಜು, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ನಾತಕೋತ್ತರ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು www.mangaloreuniversity.ac.in ನಿಂದ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳ ಝೆರಾಕ್ಸ್ ಪ್ರತಿಯೊಂದಿಗೆ ಕುಲಸಚಿವರ ಕಚೇರಿಗೆ ಜು.15ರಂದು ಸಂಜೆ 5:30ರೊಳಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.
Next Story





