Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತರ ಹತ್ಯೆಯ ಬಗ್ಗೆ ವಿಧಾನಸಭೆಯಲ್ಲಿ...

ದಲಿತರ ಹತ್ಯೆಯ ಬಗ್ಗೆ ವಿಧಾನಸಭೆಯಲ್ಲಿ ದನಿಯೆತ್ತಲು ಬಿಜೆಪಿ, ಸ್ಪೀಕರ್ ಬಿಡುತ್ತಿಲ್ಲ: ಜಿಗ್ನೇಶ್ ಮೇವಾನಿ ಆರೋಪ

ವಾರ್ತಾಭಾರತಿವಾರ್ತಾಭಾರತಿ12 July 2019 2:38 PM IST
share
ದಲಿತರ ಹತ್ಯೆಯ ಬಗ್ಗೆ ವಿಧಾನಸಭೆಯಲ್ಲಿ ದನಿಯೆತ್ತಲು ಬಿಜೆಪಿ, ಸ್ಪೀಕರ್ ಬಿಡುತ್ತಿಲ್ಲ: ಜಿಗ್ನೇಶ್ ಮೇವಾನಿ ಆರೋಪ

ಗಾಂಧಿನಗರ್, ಜು.12: ಗುಜರಾತ್ ವಿಧಾನಸಭೆಯಲ್ಲಿ ತಮ್ಮ ದನಿ ಕೇಳಿಸಲು ಇನ್ನಿಲ್ಲದ ಪ್ರಯತ್ನ ಪಡುತ್ತಿರುವ ದಲಿತ ನಾಯಕ ಹಾಗೂ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿಗ್ನೇಶ್ ಮೇವಾನಿ, ಆಡಳಿತ  ಬಿಜೆಪಿ ತನ್ನ ಬಲ ಪ್ರಯೋಗಿಸಿ ವಿಧಾನಸಭೆಯಲ್ಲಿ ಮಾತನಾಡುವ ತನ್ನ ಯತ್ನವನ್ನು ವಿಫಲಗೊಳಿಸುತ್ತಿದೆ ಎಂದಿದ್ದಾರೆ.

ಗುಜರಾತ್ ನಲ್ಲಿ ಇತ್ತೀಚೆಗೆ ನಡೆದ ದಲಿತರ ಹತ್ಯೆ ಪ್ರಕರಣಗಳ ವಿಚಾರವನ್ನು ಸದನದಲ್ಲಿ ಎತ್ತಲು ವಿಫಲರಾಗಿ ಅಸಮಾಧಾನ ಹೊಂದಿರುವ ಮೇವಾನಿ “ಆಡಳಿತ ಬಿಜೆಪಿ ಹಾಗೂ ಆ ಪಕ್ಷ ನೇಮಿಸಿದ ಸ್ಪೀಕರ್ ನನ್ನನ್ನು ಮಾತನಾಡಲು ಬಿಡುತ್ತಿಲ್ಲ'' ಎಂದು ದೂರಿದ್ದಾರೆ.

“ಒಬ್ಬ ಶಾಸಕನಾಗಿ ಹಾಗೂ ನನ್ನ ಕ್ಷೇತ್ರದ ಜನ ಪ್ರತಿನಿಧಿಯಾಗಿ ಅವರ ಸಮಸ್ಯೆಗಳ ಬಗ್ಗೆ ದನಿಯೆತ್ತುವುದು ನನ್ನ ಹಕ್ಕು ಹಾಗೂ ಕರ್ತವ್ಯವಾಗಿದೆ, ಆದರೆ ಸ್ಪೀಕರ್ ನನಗೆ ಮಾತನಾಡಲು ಆಸ್ಪದ ನೀಡುತ್ತಿಲ್ಲ'' ಎಂದು ಮೇವಾನಿ ದೂರಿದರು. “ಉನಾದಲ್ಲಿ ಗೋಹತ್ಯೆಯ ನೆಪದಲ್ಲಿ ದಲಿತ ಯುವಕರ ಮೇಲೆ ಅಮಾನುಷ ಹಲ್ಲೆ ನಡೆದು ಮೂರು ವರ್ಷಗಳಾಗಿವೆ. ಆ ಪ್ರಕರಣದ ಸ್ಥಿತಿಗತಿಯ ಬಗ್ಗೆ ಸದನಕ್ಕೆ ಹೇಳಬೇಕೆಂದಿದ್ದೆ. ಇತರ ಜಾತಿ ತಾರತಮ್ಯ ಪ್ರಕರಣಗಳ ಹಾಗೂ ರಾಜ್ಯದಲ್ಲಿ ನಡೆದ ದ್ವೇಷದ ಅಪರಾಧ ಪ್ರಕರಣಗಳ ಬಗ್ಗೆಯೂ ಮಾತನಾಡಬೇಕೆಂದಿದ್ದೆ” ಎಂದಿರುವ ಮೇವಾನಿ, ಆಡಳಿತ ಬಿಜೆಪಿ ಉದ್ದೇಶಪೂರ್ವಕವಾಗಿ ನನ್ನನ್ನು ತಡೆಯುತ್ತಿದೆ ಎಂದರು.

“ವಿಪಕ್ಷ ನಾಯಕ ಪರೇಶ್ ಧನಾನಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ನೀಡಲಾದ ಅವಧಿ ವೇಳೆ ನನಗೆ ಮಾತನಾಡಲು ಅನುಮತಿಸುವಂತೆ ಸ್ಪೀಕರ್ ಅವರಲ್ಲಿ ಕೇಳಿಕೊಂಡರೂ ನಿರಾಕರಿಸಲಾಗಿದೆ'' ಎಂದು ವಡ್ಗಮ್ ಕ್ಷೇತ್ರದ ಶಾಸಕರಾಗಿರುವ ಮೇವಾನಿ ಆರೋಪಿಸಿದ್ಧಾರೆ.

``ಸೋಮವಾರ ವರ್ಮೋರ್ ಗ್ರಾಮದಲ್ಲಿ ಮೇಲ್ಜಾತಿಯ ಯುವತಿಯನ್ನು ವಿವಾಹವಾಗಿದ್ದಾನೆಂಬ ಕಾರಣಕ್ಕೆ ದಲಿತ ಯುವಕನ ಹತ್ಯೆ ಪ್ರಕರಣದ ಕುರಿತಂತೆ ಮಾತನಾಡಲು ನಾನು ನಿಯಮ 116 ಅನ್ವಯ ನೀಡಿದ ನೋಟಿಸನ್ನೂ ತಿರಸ್ಕರಿಸಲಾಗಿದೆ'' ಎಂದು ಮೇವಾನಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X