Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಜಿ, ಹಾಸ್ಟೆಲ್, ಸರ್ವಿಸ್...

ಪಿಜಿ, ಹಾಸ್ಟೆಲ್, ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ಅನುಮತಿ ಕಡ್ಡಾಯ

ಮಂಗಳೂರು ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 July 2019 7:38 PM IST
share
ಪಿಜಿ, ಹಾಸ್ಟೆಲ್, ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ಅನುಮತಿ ಕಡ್ಡಾಯ

ಮಂಗಳೂರು : ನಗರದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ನಿಗಾ ವಹಿಸಿರುವ ಮಂಗಳೂರು ಪೊಲೀಸ್ ಆಯುಕ್ತರು ಇದೀಗ ಇದರ ಜತೆಯಲ್ಲೇ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಿಜಿ (ಪೇಯಿಂಗ್ ಗೆಸ್ಟ್) ಹಾಸ್ಟೆಲ್‌ಗಳು ಹಾಗೂ ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ಕಟ್ಟುನಿಟ್ಟಿನ ಸೂಚನೆಗಳ ಆದೇಶವನ್ನು ನೀಡಿದ್ದಾರೆ.

ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್‌ರವರು, ತಮ್ಮ ಆದೇಶದಲ್ಲಿ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್, ಪೇಯಿಂಗ್ ಗೆಸ್ಟ್‌ಗಳು ಹಾಗೂ ಸರ್ವಿಸ್ ಅಪಾರ್ಟ್‌ಮೆಂಟ್‌ಗಳು ಹಾಗೂ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು, ಪಾಲುದಾರರು ಹಾಗೂ ಆಡಳಿತ ಮಂಡಳಿಯವರು ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿಯನ್ನು ಪಡೆಯಬೇಕೆಂದು ತಿಳಿಸಿದ್ದಾರೆ.

ಆಯುಕ್ತರ ಆದೇಶದಂತೆ, ಈ ಸಂಸ್ಥೆಗಳ ಮಾಲಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ವ್ಯಾಪ್ತಿಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು.

ವಾಸ್ತವ್ಯವಿರುವ ವಿದ್ಯಾರ್ಥಿಗಳ ಹೆಸರು, ದೂರವಾಣಿ ಸಂಖ್ಯೆ ಹಾಗೂ ಗುರುತಿನ ಚೀಟಿಯನ್ನು ಠಾಣೆಗೆ ನೀಡಬೇಕು. ವಿದೇಶದ ವಿದ್ಯಾರ್ಥಿಗಳು ಈ ಸಂಸ್ಥೆಗಳಲ್ಲಿ ವಾಸ್ತವ್ಯವಿದ್ದಲ್ಲಿ ಅವರು ವಾಸ್ತವ್ಯಕ್ಕೆ ಬಂದ 15 ದಿನಗಳ ಒಳಗೆ ಅವರ ಪೂರ್ಣ ಮಾಹಿತಿಯೊಂದಿಗೆ ಪಾಸ್‌ಪೋರ್ಟ್ ಹಾಗೂ ಅವರು ಹೊಂದಿರುವ ವೀಸಾದ ವಿವರಗಳನ್ನು ಠಾಣೆಗೆ ಸಲ್ಲಿಸಬೇಕು. ವಾಸ್ತವ್ಯ ತೆರವುಗೊಳಿಸಿದಾಗಲೂ ವಿವರಗಳನ್ನು ಠಾಣಾಧಿಕಾರಿಗೆ ಸಲ್ಲಿಸಬೇಕು. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವುದು. ಒಂದು ಸಿಸಿಟಿವಿ ಮುಖ್ಯ ಪ್ರವೇಶದ್ವಾರಕ್ಕೆ/ ರಸ್ತೆಗೆ ಮುಖ ಮಾಡಿರುವಂತೆ ಅಳವಡಿಸಬೇಕು. ಸಿಸಿಟಿವಿಗಳ ಫೂಟೇಜ್‌ಗಳು ಕನಿಷ್ಠ 30 ದಿನಗಳ ಅವಧಿಗೆ ವೀಕ್ಷಣೆಗೆ ಲಭ್ಯವಿರುವಂತೆ ಡಿವಿಆರ್‌ಗಳಿಗೆ ದಾಸ್ತಾನು ಮಾಡಿಕೊಳ್ಳುವುದು ಹಾಗೂ ಠಾಣಾಧಿಕಾರಿಗಳು ವಿವರ ಕೇಳಿದಾಗ ಮಾಹಿತಿ ಸಲ್ಲಿಸುವುದು. ಇದರ ಅಳವಡಿಕೆಗೆ 15 ದಿನಗಳ ಕಾಲಾವಕಾಶವನ್ನು ಅವರು ನೀಡಿದ್ದಾರೆ.

ಅಪರಿಚಿತರಿಗೆ ಪ್ರವೇಶ ನಿಯಂತ್ರಿಸಬೇಕು. ಮಾಲಕರು ಯಾವುದೇ ಅಪರಾಧ ಘಟನೆಗಳು ಅಥವಾ ಡ್ರಗ್ಸ್ ಅಥವಾ ಇತರ ಅನೈತಿಕ ಚಟುವಟಿಕೆಗಳೆ ಆಸ್ಪದವಿಲ್ಲದಂತೆ ಕ್ರಮ ವಹಿಸಬೇಕು. ಶಬ್ಧ ಮಾಲಿನ್ಯ ಉಂಟು ಮಾಡುವ ಯಾವುದೇ ಕಾರ್ಯಕ್ರಮ ಅಥವಾ ಸಂಸ್ಥೆಗಳ ಪರವಾನಿಗೆ ವ್ಯಾಪ್ತಿಗೆ ಬಾರದ ಇತರ ಯಾವುದೇ ಕಾರ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆಯೂ ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X