Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ಪೂರಕ ಪರೀಕ್ಷೆ : ಶೇ.42.47...

ಎಸೆಸೆಲ್ಸಿ ಪೂರಕ ಪರೀಕ್ಷೆ : ಶೇ.42.47 ಫಲಿತಾಂಶ

ಜು.13ರಂದು ಶಾಲೆಗಳಲ್ಲಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ12 July 2019 8:04 PM IST
share
ಎಸೆಸೆಲ್ಸಿ ಪೂರಕ ಪರೀಕ್ಷೆ : ಶೇ.42.47 ಫಲಿತಾಂಶ

ಬೆಂಗಳೂರು, ಜು.12: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ ತಿಂಗಳಿನಲ್ಲಿ ನಡೆಸಿದ ಎಸೆಸೆಲ್ಸಿ 2019ನೆ ಸಾಲಿನ ಪೂರಕ ಪರೀಕ್ಷೆ ಫಲಿತಾಂಶ ಜು.13ರಂದು ಶಾಲೆಗಳಲ್ಲಿ ಪ್ರಕಟವಾಗಲಿದ್ದು, ಈ ವರ್ಷ ಶೇ.42.47 ಫಲಿತಾಂಶ ಬಂದಿದೆ.

1,92,181 ವಿದ್ಯಾರ್ಥಿಗಳ ಪೈಕಿ 81,614 (ಶೇ.42.47) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ.39.53 ಬಾಲಕರು ಹಾಗೂ ಶೇ.47.67 ಬಾಲಕಿಯರು ಹಾಗೂ ಶೇ.41.63 ನಗರ ಹಾಗೂ ಶೇ.43.34 ಗ್ರಾಮೀಣ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇ.40.95 ಸರಕಾರಿ, ಶೇ.42.27 ಅನುದಾನಿತ ಮತ್ತು ಶೇ.44.96 ಅನುದಾನ ರಹಿತ ಶಾಲೆಗಳ ಫಲಿತಾಂಶ ಬಂದಿದೆ. 625ಕ್ಕೆ 584 ಅಂಕ, ಅತಿ ಹೆಚ್ಚಿನ ಅಂಕವಾಗಿದೆ. ನಂತರದ ಸ್ಥಾನದಲ್ಲಿ 572, 562 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿದ್ದಾರೆ. ‘ಎ’ ಪ್ಲಸ್ ಶ್ರೇಣಿಯಲ್ಲಿ ಇಬ್ಬರು, ‘ಎ’ ಶ್ರೇಣಿಯಲ್ಲಿ 343, ‘ಬಿ’ ಪ್ಲಸ್ ಶ್ರೇಣಿಯಲ್ಲಿ 1,838 ಹಾಗೂ ‘ಬಿ’ ಶ್ರೇಣಿಯಲ್ಲಿ 13,035, ‘ಸಿ’ ಪ್ಲಸ್ ಶ್ರೇಣಿಯಲ್ಲಿ 43,479 ಹಾಗೂ ‘ಸಿ’ ಶ್ರೇಣಿಯಲ್ಲಿ 23,049 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

48 ಮಾನಸಿಕ ಅಸ್ವಸ್ಥರು, 125 ದೈಹಿಕ ಅಂಗವಿಕಲರು, 27 ಕುರುಡರು, 130 ಕಿವುಡ, 18 ವಿವಿಧ ಅಂಗವೈಕಲ್ಯ ಸೇರಿ 512 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲಾವಾರು ಲಿತಾಂಶದಲ್ಲಿ ದಾವಣಗೆರೆ ಮೊದಲ ಸ್ಥಾನದಲ್ಲಿದ್ದು, ಬೆಂ. ಗ್ರಾಮಾಂತರ ಎರಡನೇ ಸ್ಥಾನದಲ್ಲಿದೆ. ಇನ್ನು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.1.78 ಹೆಚ್ಚಿನ ಫಲಿತಾಂಶ ಪ್ರಕಟವಾಗಿದೆ ಎಂದು ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
 
ವೆಬ್‌ಸೈಟ್‌ನಲ್ಲಿ ಫಲಿತಾಂಶ
ಫಲಿತಾಂಶವನ್ನು ಮಂಡಳಿ ವೆಬ್‌ಸೈಟ್ kseeb.karnataka.gov.in/results ಹಾಗೂ  http://karresults.nic.in ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ನೋಂದಣಿ ಸಮಯದಲ್ಲಿ ಮಂಡಳಿಗೆ ನೀಡಿರುವ ಮೊಬೈಲ್ ಸಂಖ್ಯೆಗೂ ಶುಕ್ರವಾರ ಮಧ್ಯಾಹ್ನ ಫಲಿತಾಂಶ ಕಳುಹಿಸಲಾಗಿದೆ. ಶಾಲಾ ಲಾಗಿನ್ ಬಳಸಿ ಫಲಿತಾಂಶ ಪಡೆದು ಶಾಲಾ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸೂಚಿಸಲಾಗಿದೆ.

ಜು. 24ರವರೆಗೆ ಮರುಮೌಲ್ಯಮಾಪನ
ಉತ್ತರ ಪತ್ರಿಕೆಗಳ ಛಾಯಾಪ್ರತಿ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್ ಮೂಲಕ ಮಂಡಳಿ ವೆಬ್‌ಸೈಟ್ www.kseeb.kar.nic.in  ಅರ್ಜಿ ಸಲ್ಲಿಸಬೇಕು. ಜು.24ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಛಾಯಾ ಪ್ರತಿಗೆ ಪ್ರತಿ ವಿಷಯಕ್ಕೆ 405ರೂ. ಹಾಗೂ ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 805 ರೂ. ನಿಗದಿ ಮಾಡಲಾಗಿದೆ.

ಹಿಂದೆ ಹೋದ ಹಾಸನ-ರಾಮನಗರ
ಜೂ.21ರಿಂದ 28ರ ವರೆಗೆ ರಾಜ್ಯದ 655 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಅಲ್ಲದೆ, ಮಾರ್ಚ್‌ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಮೊದಲ ಸ್ಥಾನದಲ್ಲಿದ್ದ ಹಾಸನ 14ನೇ ಸ್ಥಾನಕ್ಕೆ ಮತ್ತು ರಾಮನಗರ 5ನೇ ಸ್ಥಾನಕ್ಕೆ ಕುಸಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X