'ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ'
ಉಡುಪಿ, ಜು.12: ಮಳೆಗಾಲ ಆರಂಭವಾಗಿರುವುದರಿಂದ ಅಲ್ಲಲ್ಲಿ ಮಳೆ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಳು ಹೆಚ್ಚಾಗುವ ಸಾಧ್ಯತೆಯಿದೆ. ಆದುದರಿಂದ ಗ್ರಾಮಪಂಚಾಯತ್ ವ್ಯಾಪ್ತಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಳೆ ನೀರು ನಿಲ್ಲುವುದರಿಂದ ಹಾಗೂ ತ್ಯಾಜ್ಯ ವಸ್ತುಗಳ ಶೇಖರಣೆಯಿಂದ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗುವ ಸಂಭವವಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ವಾರಂಬಳ್ಳಿ, ಚಾಂತಾರು, ಹಂದಾಡಿ ಮತ್ತು ಹಾರಾಡಿ ಗ್ರಾಪಂಗಳಿಗೆ ಪತ್ರಮುಖೇನ ಹಾಗೂ ವೌಖಿಕವಾಗಿ ತಿಳಿಸಲಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದ ಆಳಿತ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ವಾರಂಬಳ್ಳಿ, ಇಂದಿರಾನಗರ ವ್ಯಾಪ್ತಿಯಲ್ಲಿ ಕಂಡು ಬಂದಿರುವ ಡೆಂಗ್ ಜ್ವರ ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





