ಮಾಜಿ ಸಂಸದ ಯಾದವ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ಲಕ್ನೋ,ಜು.12: ಕಾಂಗ್ರೆಸ್ ಉತ್ತರ ಪ್ರದೇಶದ ಮಾಜಿ ಸಂಸದ ಭಾಲಚಂದ್ ಯಾದವ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಆರು ವರ್ಷಗಳಿಗೆ ಪಕ್ಷದಿಂದ ಉಚ್ಚಾಟಿಸಿದೆ.
ಯಾದವ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಸಂತ ಕಬೀರ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರು ಚುನಾವಣೆಗೆ ತಿಂಗಳ ಮೊದಲಷ್ಟೇ ಎಸ್‌ಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.
Next Story





