Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಸ್ಥಳೀಯ...

ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ಶುಲ್ಕ: ಹೋರಾಟ ಸಮಿತಿ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ12 July 2019 10:24 PM IST
share

ಮಂಗಳೂರು, ಜು.12: ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಸ್ಥಳೀಯ ಖಾಸಗಿ ವಾಹನಗಳ ಸುಂಕ ವಿನಾಯಿತಿಯನ್ನು ರದ್ದುಗೊಳಿಸಿ ಜು.16ರಿಂದ ಕಡ್ಡಾಯ ಶುಲ್ಕ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಜಿಲ್ಲಾಡಳಿತ ಶುಲ್ಕ ಸಂಗ್ರಹಕ್ಕೆ ಪೊಲೀಸ್ ರಕ್ಷಣೆ ಒದಗಿಸಲು ನಿರ್ಧರಿಸಿರುವು ದನ್ನು ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯು ತೀವ್ರವಾಗಿ ಖಂಡಿಸಿದೆ.

ನಿಯಮದ ಪ್ರಕಾರ ಸುಂಕ ವಸೂಲಿಯೇ ಅಕ್ರಮವಾಗಿದೆ. ಸ್ವತಃ ಹೆದ್ದಾರಿ ಪ್ರಾಧಿಕಾರವೇ ಮುಚ್ಚಲು ತೀರ್ಮಾನ ಕೈಗೊಂಡಿರುವ ಟೋಲ್‌ ಗೇಟ್‌ನಲ್ಲಿ ಯಾವುದೇ ಕಾರಣಕ್ಕೂ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸಲು ಹೋರಾಟ ಸಮಿತಿ ಅವಕಾಶ ನೀಡುವುದಿಲ್ಲ. ಅಕ್ರಮ ವಸೂಲಿಗೆ ಪೊಲೀಸ್ ರಕ್ಷಣೆ ಒದಗಿಸುವ ಬದಲಿಗೆ ಜಿಲ್ಲಾಡಳಿತ ಟೋಲ್‌ಗೇಟ್ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಮೂರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್‌ಗೇಟ್ ಒಂಬತ್ತು ಕಿ.ಮೀ. ದೂರದ ಹೆಜಮಾಡಿ ಟೋಲ್‌ಗೇಟ್ ಕಾರ್ಯಾಚರಣೆ ಆರಂಭಿಸಿದ ನಂತರವೂ ಮುಂದುವರಿಯುತ್ತಿರುವುದು ಅಕ್ರಮವಾಗಿದೆ ಎಂದು ತಿಳಿಸಿದರು.

ಈ ಕುರಿತು ಜನಪರ ಸಂಘಟನೆಗಳು ಧ್ವನಿ ಎತ್ತಿದ ನಂತರ ಸುರತ್ಕಲ್ ಟೋಲ್‌ಗೇಟ್‌ನ್ನು ಹೆಜಮಾಡಿಯ ನವಯುಗ ಟೋಲ್‌ಗೇಟ್‌ನೊಂದಿಗೆ ವಿಲೀನ ಗೊಳಿಸಲು ಹೆದ್ದಾರಿ ಪ್ರಾಧಿಕಾರ ತೀರ್ಮಾನ ಕೈಗೊಂಡಿದೆ. ತನ್ನ ತೀರ್ಮಾನಕ್ಕೆ ರಾಜ್ಯ ಸರಕಾರದ ತಾತ್ವಿಕ ಒಪ್ಪಿಗೆಯನ್ನೂ ಪಡೆದಿದೆ. ಆದರೆ ತೀರ್ಮಾನವನ್ನು ವರ್ಷಗಳ ಕಾಲ ಜಾರಿಗೆ ತರದೆ ಅಕ್ರಮ ಟೋಲ್ ಸಂಗ್ರಹ ಮುಂದುವರಿಸಿದಾಗ ವರ್ಷದ ಹಿಂದೆ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ತೀವ್ರ ರೀತಿಯ ಪ್ರತಿಭಟನೆಗಳನ್ನು ನಡೆಸಲಾಗಿತ್ತು ಎಂದು ವಿವರಿಸಿದರು.

ಜನಾಗ್ರಹ ವ್ಯಾಪಕಗೊಂಡ ನಂತರ ಮಂಗಳೂರಿಗೆ ಆಗಮಿಸಿದ ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿ ಮಂಗಳೂರಿನಲ್ಲಿ ಸಭೆ ನಡೆಸಿ ಹೆಜಮಾಡಿ ನವಯುಗ ಟೋಲ್ ಫ್ಲಾಝಾದಲ್ಲಿ ಸುರತ್ಕಲ್ ಟೋಲ್‌ಗೇಟ್ ವಿಲೀನಕ್ಕೆ ಕೆಲವು ತಾಂತ್ರಿಕ ಸಮಸ್ಯೆಗಳು ಇರುವುದರಿಂದ ಸುರತ್ಕಲ್ ಟೋಲ್ ಕೇಂದ್ರವನ್ನು ಬಂಟ್ವಾಳದ ಬ್ರಹ್ಮರ ಕೂಟ್ಲು ಟೋಲ್ ಕೇಂದ್ರದಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಕೇಂದ್ರ ಮುಚ್ಚುಲಾಗುವುದು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಸಮ್ಮುಖ ಹೇಳಿಕೆ ನೀಡಿದ್ದರು. ಆದರೆ ಆ ಪ್ರಸ್ತಾವ ಜಾರಿಗೆ ತರದೆ, ಹಳೆಯ ತೀರ್ಮಾನವನ್ನು ಮರೆತು ಈಗ ಪೊಲೀಸ್ ಬಲದೊಂದಿಗೆ ಸ್ಥಳೀಯರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದು ಅಕ್ಷಮ್ಯ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ನಂತೂರು ಮುಕ್ಕ ಹೆದ್ದಾರಿ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಸರ್ವಿಸ್ ರಸ್ತೆಗಳ ನಿರ್ಮಾಣ ಸ್ಥಗಿತಗೊಂಡಿದೆ. ಹೊಂಡಗಳನ್ನು ಮುಚ್ಚುವ, ರಸ್ತೆಗಳ ನಿರ್ವಹಣೆ ಕೆಲಸಗಳು ನಡೆಯುತ್ತಿಲ್ಲ. ಕೂಳೂರಿನ ಸೇತುವೆ ಯಾವುದೇ ಕ್ಷಣದಲ್ಲಿ ಬೀಳುವ ಅಪಾಯ ಎದುರಿಸುತ್ತಿದೆ. ಇಂತಹ ಗಂಭೀರವಾದ ರಸ್ತೆಯ ಸಮಸ್ಯೆಗಳನ್ನು ಬಗೆಹರಿಸದೆ ನಿಯಮಗಳಿಗೆ ವಿರುದ್ದವಾಗಿ ಒಂಬತ್ತು ಕಿ.ಮೀ. ಅಂತರದಲ್ಲಿ ಎರಡೆರಡು ಕಡೆ ಟೋಲ್ ಸಂಗ್ರಹ ನಡೆಸುವುದು ದರೋಡೆಗೆ ಸಮ ಎಂದು ಅವರು ತಿಳಿಸಿದರು.

ಈಗಿರುವ ಟೋಲ್ ಸಂಗ್ರಹದ ಗುತ್ತಿಗೆ ಇದೇ ಅಕ್ಟೋಬರ್‌ಗೆ ಕೊನೆಯಾಗುತ್ತದೆ. ಆ ನಂತರ ಯಾವ ಸಬೂಬು ನೀಡದೆ ನಿಯಮ ಪ್ರಕಾರ ಟೋಲ್ ಕೇಂದ್ರವನ್ನು ಮುಚ್ಚಬೇಕು. ಅಲ್ಲಿಯವರಗೆ ಯಾವುದೆ ಕಾರಣಕ್ಕೂ ಸ್ಥಳೀಯ ಖಾಸಗಿ ವಾಹನಗಳಿಗೆ ಶುಲ್ಕ ವಿಧಿಸದೆ ಯಥಾಸ್ಥಿತಿ ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.

ಪೊಲೀಸ್ ಬಲದೊಂದಿಗೆ ಟೋಲ್ ಸಂಗ್ರಹಕ್ಕೆ ಮುಂದಾದರೆ ಸ್ಥಳೀಯ ಜನಪರ ಸಂಘಟನೆಗಳ ಜೊತೆ ತೀವ್ರ ಪ್ರತಿಭಟನೆಯನ್ನು ನಡೆಸಲಾಗುವುದು. ಅಲ್ಲದೆ, ಟೋಲ್ ಸಂಗ್ರವನ್ನು ತಡೆಯಲಾಗುವುದು ಎಂದು ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X