Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ:...

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಐವನ್ ಡಿಸೋಜ ಆರೋಪ

ವಾರ್ತಾಭಾರತಿವಾರ್ತಾಭಾರತಿ13 July 2019 12:58 PM IST
share
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಐವನ್ ಡಿಸೋಜ ಆರೋಪ

ಮಂಗಳೂರು, ಜು.13: ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಮೈತ್ರಿ ಸರಕಾರವನ್ನು ಅಸ್ತಿರಗೊಳಿಸುವಲ್ಲಿ ಪ್ರಸಕ್ತ ಉದ್ಭವವಾಗಿರುವ ವಿದ್ಯಮಾನಕ್ಕೆ ಬಿಜೆಪಿಯೇ ನೇರ ಹೊಣೆ. ಬಿಜೆಪಿ ಕೆಲ ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷವೊಡ್ಡಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಸಮಯದಿಂದ ಬಿಜೆಪಿಯು ಸರಕಾರವನ್ನು ಅಸ್ತಿರಗೊಳಿಸುವ ಪ್ರಯತ್ನ ನಡೆಸುತ್ತಿದ್ದು, ಇದೀಗ ಆರನೇ ಬಾರಿಗೆ ಆ ಕಾರ್ಯಕ್ಕೆ ಮುಂದಾಗಿದೆ ಎಂದು ದೂರಿದರು. ಅಪರೇಶನ್ ಕಮಲದ ಯತ್ನದಲ್ಲಿ 2009ರಲ್ಲಿ ಯಶಸ್ವಿಯಾಗಿದ್ದ ಬಿಜೆಪಿ 2013ರಲ್ಲಿ ವಿಪಕ್ಷ ಸ್ಥಾನವನ್ನು ಅನುಭವಿಸಬೇಕಾಯಿತು. ಚುನಾಯಿತ ಪ್ರತಿನಿಧಿಗಳು ಒಂದು ಪಕ್ಷದಿಂದ ಮತ್ತೊಂದು ಪಕ್ಷವನ್ನು ಸೇರುವುದು ತಪ್ಪಲ್ಲ ಹಾಗೂ ಅದು ಅಸ್ವಾಭಾವಿಕ ಪ್ರಕ್ರಿಯೆಯೂ ಅಲ್ಲ. ಆದರೆ ಶಾಸಕರನ್ನು ರಾಜೀನಾಮೆ ಕೊಡಿಸಿ ಕಾನೂನು ಗಾಳಿಗೆ ತೂರಿ ಸದನದ ಬಲ ಕಡಿಮೆ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ 2ನೇ ಬಾರಿಗೆ ಬಿಜೆಪಿಯಿಂದ ನಡೆದಿದೆ ಎಂದವರು ಹೇಳಿದರು.

ಶಾಸಕರು ವೈಯಕ್ತಿಕ ನೆಲೆಯಲ್ಲಿ ರಾಜೀನಾಮೆ ನೀಡಬೇಕಾದರೂ ಅದು ನೈಜವಾಗಿರಬೇಕು. ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ, ಅಭಿವೃದ್ಧಿ ಮಾಡಲು ಆಗುತ್ತಿಲ್ಲ ಎಂದು ರಾಜೀನಾಮೆ ನೀಡಬಹುದಾಗಿದ್ದರೂ ಇದೀಗ ಪೊಲೀಸ್ ರಕ್ಷಣೆಯಲ್ಲಿ ಬಂದು ರಾಜೀನಾಮೆ ನೀಡಲು ಪ್ರೇರೇಪಿಸುವಂತಹ ಕ್ರಮ ಜನಪ್ರತಿನಿಧಿಗಳು ತಲೆತಗ್ಗಿಸುವ ಕೆಲಸ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರೇ ನೇರ ಹೊಣೆ. ಇದರಿಂದ ಬಿಜೆಪಿ ಬಣ್ಣ ಬಯಲಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದು ಜನತೆಗೆ ಮನದಟ್ಟಾಗಿದೆ. ಪಕ್ಷಾಂತರ ನಿಷೇಧ ಕಾಯ್ದೆಯನ್ನು ಗಾಳಿಗೆ ತೂರಿ ದೇಶವನ್ನು ಆಡಳಿತ ಮಾಡುತ್ತಿರುವ ಪಕ್ಷವೊಂದು ಈ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ ಎಂದವರು ಹೇಳಿದರು.

1975ರಲ್ಲಿ ದೇಶದಲ್ಲಿ ಸಂವಿಧಾನಬದ್ಧವಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇದೀಗ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣವನ್ನು ಬಿಜೆಪಿ ಸೃಷ್ಟಿಸಿದೆ. ಕೇಂದ್ರ ಸರಕಾರವು ತನ್ನ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು, ಐಟಿ, ಸಿಬಿಐ ತನಿಖೆ ದಾಳಿಯ ಬೆದರಿಕೆಯೊಡ್ಡಿ ಶಾಸಕರ ರಾಜೀನಾಮೆ ನಡೆಸಿರುವುದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್. ಇದೇ ರೀತಿ ತೆಲಂಗಾಣ, ಗೋವಾ, ಮಹಾರಾಷ್ಟ್ರದಲ್ಲೂ ಶಾಸಕರನ್ನು ಆಮಿಷವೊಡ್ಡಿ ಸೆಳೆಯುವ ಯತ್ನ ಮಾಡಲಾಗುತ್ತಿದೆ. ‘ನಾ ಕಾವೂಂಗಾ, ನಾ ಕಾನೇದೂಂಗಾ’ ಎಂಬ ಪ್ರಧಾನಿಯವರ ಹೇಳಿಕೆಗೆ ವ್ಯತಿರಿಕ್ತವಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಐವನ್ ಡಿಸೋಜ ಹೇಳಿದರು.

ಸಚಿವರಾಗಿದ್ದವರನ್ನು ಕೊಂಡುಕೊಂಡು ರಾಜೀನಾಮೆ ನೀಡಿಸುವುದಕ್ಕೆ ಅರ್ಥ ಬೇಕಲ್ಲ. ರಾಜೀನಾಮೆ ನೀಡುವುದು ಸ್ಪೀಕರ್‌ಗೆ. ಆದರೆ ರಾಜ್ಯಪಾಲರಿಗೆ ರಾಜೀನಾಮೆ ನೀಡುವ ಮೂಲಕ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಐವನ್ ಆರೋಪಿಸಿದರು.

ಯಾರು ಪಕ್ಷಕ್ಕೆ ಹಿಂತಿರುಗಬೇಕು ಎಂಬುದು ಪಕ್ಷದ ನಾಯಕರಿಗೆ ತಿಳಿದಿದೆ. ಈ ರೀತಿ ಪಕ್ಷದ ಸಿದ್ಧಾಂತವನ್ನು ಮರೆತು ಪಕ್ಷಾಂತರ ಆಗುವವರು ಬೇರೆಲ್ಲಿಗೆ ಹೋದರೂ ಅಲ್ಲಿಯೂ ಹಾಗೇ ಮಾಡುತ್ತಾರೆ. ಅಧಿಕಾರವೇ ಶಾಶ್ವತ ಅಲ್ಲ ಎಂಬುದನ್ನು ಜನಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಐವನ್ ಡಿಸೋಜ ಹೇಳಿದರು.

ಸ್ಪೀಕರ್‌ರಿಂದ ಐತಿಹಾಸಿಕ ನಿರ್ಣಯದ ನಿರೀಕ್ಷೆ

ಶಾಸಕರ ರಾಜೀನಾಮೆಗೆ ಸಂಬಂಧಿಸಿ ಇದುವರೆಗೂ ಸ್ಪೀಕರ್ ಸರಿಯಾದ ತೀರ್ಮಾನವನ್ನು ಕೈಗೊಂಡಿದ್ದಾರೆ. ಇದೀಗ ಸಂವಿಧಾನ ವಿರೋಧಿ ಆಗಿ ಶಾಸಕರು ನೀಡಿರುವ ರಾಜೀನಾಮೆಗೆ ಸಂಬಂಧಿಸಿ ಸ್ಪೀಕರ್‌ರವರು ದೇಶಕ್ಕೆ ಮಾದರಿಯಾದ ಐತಿಹಾಸಿಕ ತೀರ್ಮಾನವನ್ನು ನೀಡುವ ನಿರೀಕ್ಷೆ ಇದೆ. ಅತೃಪ್ತ ಶಾಸಕರು ಬಿಜೆಪಿಯ ಬಂಧನದಿಂದ ಪಕ್ಷಕ್ಕೆ ಹಿಂದಿರುಗಿ ರಾಜೀನಾಮೆ ಹಿಂಪಡೆಯುತ್ತಾರೆ. ರಾಜಕೀಯ ವಿದ್ಯಮಾನ ಗಮನಿಸಿ ಬಹುಮತ ಸಾಬೀತುಪಡಿಸುವ ಕಾರ್ಯವನ್ನು ನಾವು ಮಾಡಲಿದ್ದೇವೆ. ಸರಕಾರ ಉಳಿಯಲಿದೆ.

- ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯರು ಮತ್ತು ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X