Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುದಾನ ಕಡಿತ, ಒಂದು ಲಕ್ಷ ಸರಕಾರಿ ಶಾಲೆ...

ಅನುದಾನ ಕಡಿತ, ಒಂದು ಲಕ್ಷ ಸರಕಾರಿ ಶಾಲೆ ಮುಚ್ಚುಗಡೆ: ಶಿಕ್ಷಣ ತಜ್ಞರ ಆತಂಕ

ವಾರ್ತಾಭಾರತಿವಾರ್ತಾಭಾರತಿ13 July 2019 9:37 PM IST
share
ಅನುದಾನ ಕಡಿತ, ಒಂದು ಲಕ್ಷ ಸರಕಾರಿ ಶಾಲೆ ಮುಚ್ಚುಗಡೆ: ಶಿಕ್ಷಣ ತಜ್ಞರ ಆತಂಕ

    ಹೊಸದಿಲ್ಲಿ, ಜು.13: ಕಳೆದ ಕೆಲ ವರ್ಷದಿಂದೀಚೆಗೆ 1 ಲಕ್ಷಕ್ಕೂ ಅಧಿಕ ಸರಕಾರಿ ಶಾಲೆಗಳು ಮುಚ್ಚಿವೆ ಮತ್ತು ವರ್ಷದಿಂದ ವರ್ಷಕ್ಕೆ ಬಜೆಟ್‌ ನಲ್ಲಿ ಶಿಕ್ಷಣಕ್ಕೆ ಮೀಸಲಿರಿಸಿದ ಅನುದಾನವನ್ನು ಕಡಿತಗೊಳಿಸುತ್ತಿರುವ ಬಗ್ಗೆ ಜುಲೈ 11ರಂದು ಹೊಸದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಕರಡು ಶಿಕ್ಷಣ ನೀತಿ ಕುರಿತ ರಾಷ್ಟ್ರೀಯ ಸಮಾಲೋಚನೆ ಕಾರ್ಯಕ್ರಮದಲ್ಲಿ ತೀವ್ರ ಕಳವಳ ವ್ಯಕ್ತವಾಗಿದೆ.

  ಸಭೆಯಲ್ಲಿ ಮಾತನಾಡಿದ ಶಿಕ್ಷಣ ಹಕ್ಕು (ಆರ್‌ಟಿಇ) ವೇದಿಕೆಯ ರಾಷ್ಟ್ರೀಯ ಸಂಚಾಲಕ ಅಂಬರೀಶ್ ರಾಯ್, ವಿವಿಧ ನೆಪದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವಾಗ ಸಾರ್ವತ್ರಿಕ ಶಿಕ್ಷಣದ ಕನಸು ನನಸಾಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ನೂತನ ಕರಡು ಶಿಕ್ಷಣ ನೀತಿಯು ಕಡಿಮೆ ವೆಚ್ಚದ ಖಾಸಗಿ ಶಾಲೆಗಳ ಬಗ್ಗೆ ಒಲವು ತೋರಿರುವ ಕಾರಣ ಶಿಕ್ಷಣದ ವಾಣಿಜ್ಯೀಕರಣಕ್ಕೆ ಪ್ರೋತ್ಸಾಹ ದೊರಕುವ ಆತಂಕವಿದೆ ಎಂದು ಅಂಬರೀಶ್ ಹೇಳಿದ್ದಾರೆ.

  “ರಾಷ್ಟ್ರೀಯ ಶಿಕ್ಷಣ ನೀತಿಯ ಅಗತ್ಯವಿದೆ ಎಂಬುದನ್ನು ನಾವು ಒಪ್ಪುತ್ತೇವೆ. ಇದು ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿತ್ತು. 1986ರಲ್ಲಿ ಕಟ್ಟಕಡೆಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು ಇದನ್ನು 1992ರಲ್ಲಿ ಪರಿಷ್ಕರಿಸಲಾಗಿದೆ. ಆ ಬಳಿಕ, ಬಹುದೂರದ ಪರಿಣಾಮ ಬೀರುವ ಮಹತ್ವದ ಬದಲಾವಣೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಘಟಿಸಿದೆ. ತಂತ್ರಜ್ಞಾನದಲ್ಲಿ, ಅದರಲ್ಲೂ ವಿಶೇಷವಾಗಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದಲ್ಲಿ ಆಗಿರುವ ಮುನ್ನಡೆ ಬಹಳ ಪ್ರಮುಖವಾಗಿದೆ” ಎಂದವರು ಹೇಳಿದ್ದಾರೆ.

  ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ವಿದೇಶ ಸಚಿವ , ಸಾಮಾಜಿಕ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೊ ಮುಚುಕುಂದ್ ದುಬೆ, ಶಾಲಾ ಶಿಕ್ಷಣ ನೀತಿಯ ಕ್ಷೇತ್ರದಲ್ಲಿ ಆಗಿರುವ ಇತ್ತೀಚಿನ ಅಭಿವೃದ್ಧಿಯನ್ನು ತ್ಯಾಗ ಮಾಡಿ ನೂತನ ಶಿಕ್ಷಣ ನೀತಿಯನ್ನು ಅಂಗೀಕರಿಸಬಾರದು. ಇದರಲ್ಲಿ ಆರ್‌ಟಿಇ ಕಾಯ್ದೆ ಅತ್ಯಂತ ಮಹತ್ವದ್ದಾಗಿದ್ದು ಇದರಿಂದಾಗಿ ಪ್ರಾಥಮಿಕ ಶಿಕ್ಷಣವು ಈಗ ಮೂಲಭೂತ ಹಕ್ಕಾಗಿದೆ ಎಂದು ಅಭಿಪ್ರಾಯಪಟ್ಟರು. ಯಾವುದೇ ಕಾರಣಕ್ಕೂ ಆರ್‌ಟಿಇ ಕಾಯ್ದೆಯನ್ನು ದುರ್ಬಲಗೊಳಿಸುವುದು ಸ್ವೀಕಾರಾರ್ಹವಲ್ಲ. ಪ್ರಸ್ತಾವ ಮತ್ತು ಕರಡು ವರದಿಯಲ್ಲಿ ಶಾಲಾ ಶಿಕ್ಷಣದಲ್ಲಿ ಭಾರತವು ಸ್ವಾಭಾವಿಕ ನ್ಯಾಯ ಮತ್ತು ಪ್ರವೇಶಾವಕಾಶವನ್ನು ಅನುಸರಿಸಿದೆ ಎಂದು ಹೇಳಲಾಗಿದೆ. ಆದರೆ ನಾವು ವಿದ್ಯಾರ್ಥಿಗಳ ಹಾಜರಾತಿ ಮತ್ತು ಶಾಲೆಯಿಂದ ಹೊರಗುಳಿಯುವ ವಿದ್ಯಾರ್ಥಿಗಳ ಪ್ರಮಾಣವನ್ನೂ ಗಮನಿಸಬೇಕಿದೆ ಎಂದು ದುಬೆ ಹೇಳಿದರು.

   ಯುನೆಸ್ಕೋದ ಕಾರ್ಯನಿರ್ವಾಹಕ ಮಂಡಳಿಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಪ್ರೊ. ಜಗಮೋಹನ್ ಸಿಂಗ್ ರಜಪೂತ್ ಮಾತನಾಡಿ, ಸಮಸ್ಯೆಗೆ ಬೆನ್ನು ತೋರಿಸಿ ಓಡುವುದರಿಂದ ಯಾವುದೇ ಪ್ರಯೋಜನವಾಗದು. ಶಿಕ್ಷಣ ಕ್ಷೇತ್ರಕ್ಕೆ ನಾವು ತಕ್ಷಣ ಅತ್ಯಧಿಕ ಗಮನ ನೀಡುವ ಅಗತ್ಯವಿದೆ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸುಧಾರಣೆ ಮಾಡದಿದ್ದರೆ ನಾವು ಇದ್ದಲ್ಲೇ ಇರುತ್ತೇವೆ. ಈ ಸಂದರ್ಭದಲ್ಲಿ ಭಾರತದ ಶಿಕ್ಷಣ ಪರಂಪರೆಯನ್ನು ನಾವು ನಿರ್ಲಕ್ಷಿಸುವಂತಿಲ್ಲ. ಇಂದಿನ ದಿನದಲ್ಲಿ ಶೈಕ್ಷಣಿಕ ನಾಯಕತ್ವದ ಬಗ್ಗೆ ಯಾರೂ ಸೊಲ್ಲೆತ್ತುತ್ತಿಲ್ಲ. ಈ ಹಿಂದೆ, ಶಿಕ್ಷಣಕ್ಕೆ ಸಂಬಂಧಿಸಿದ ನೀತಿಯನ್ನು ರೂಪಿಸುವಾಗ ಶಿಕ್ಷಣ ತಜ್ಞರ ಅಭಿಪ್ರಾಯಕ್ಕೆ ಮಹತ್ವ ಇರುತ್ತಿರಲಿಲ್ಲ ಎಂಬುದು ಖಂಡಿತಾ ಸತ್ಯವಲ್ಲ. ಇದೀಗ ಶಿಕ್ಷಣವು ಶಿಕ್ಷಣೇತರರ, ಅಧಿಕಾರಿಗಳ ಮರ್ಜಿ ಕಾಯುವಂತಾಗಿದೆ ಎಂದಿದ್ದಾರೆ.

ರಚನಾತ್ಮಕ ಕಾರ್ಯ ಸಂಸ್ಕೃತಿ ಹಾಗೂ ರಾಷ್ಟ್ರಭಕ್ತಿಗೆ ಪ್ರೇರಣೆ ನೀಡುವ ರೀತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತೀ ಐದು ವರ್ಷಕ್ಕೊಮ್ಮೆ ಪಠ್ಯಕ್ರಮವನ್ನು ಪರಿಷ್ಕರಿಸಬೇಕು ಎಂದು ರಜಪೂತ್ ಹೇಳಿದ್ದಾರೆ.

    ಬಿಹಾರ ಮಾಧ್ಯಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶತ್ರುಘ್ನಪ್ರಸಾದ್ ಸಿಂಗ್ ಮಾತನಾಡಿ, ಶಿಕ್ಷಕರು ಶೈಕ್ಷಣಿಕ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದಾರೆ. ಆದರೆ ಇಂದಿನ ದಿನಗಳಲ್ಲಿ ಅವರನ್ನು ಬೋಧನೆಯ ಹೊರತಾದ ಕಾರ್ಯಗಳಿಗೆ ಬಳಸುವುದು ವಿಷಾದಕರ ವಿಷಯವಾಗಿದೆ. ಕರಡು ಶಿಕ್ಷಣ ನೀತಿಯಲ್ಲಿ ಶಿಕ್ಷಕರನ್ನು ಬೋಧನೆ ಹೊರತುಪಡಿಸಿ ಇತರ ಕೆಲಸಗಳಿಗೆ ನಿಯೋಜಿಸುವಂತಿಲ್ಲ ಎಂದು ತಿಳಿಸಿದೆ. ಇದು ಸ್ವಾಗತಾರ್ಹ ಎಂದರು. ಆದರೆ ಒಟ್ಟಾರೆಯಾಗಿ ಹೇಳುವುದಾದರೆ ಕರಡು ಶಿಕ್ಷಣ ನೀತಿ ಸಮತೂಕವಿಲ್ಲದ ಯೋಜನೆಯಾಗಿದ್ದು ಶಿಕ್ಷಕರ ನೇಮಕಾತಿಗೆ ಆಯೋಗದ ಸ್ಥಾಪನೆಯ ಬಗ್ಗೆ ಏನನ್ನೂ ಹೇಳಿಲ್ಲ. ಶಿಕ್ಷಕರ ಪ್ರತಿಷ್ಠೆಯ ಖಾತರಿಗೆ ಇಂತಹ ಆಯೋಗದ ಅಗತ್ಯವಿದೆ ಎಂದವರು ಹೇಳಿದ್ದಾರೆ.

 ದಿಲ್ಲಿ ವಿವಿಯ ಪ್ರೊಫೆಸರ್ ಪೂನಮ್ ಬಾತ್ರಾ, ದಿಲ್ಲಿ ವಿವಿಯ ಮಾಜಿ ಪ್ರೊಫೆಸರ್ ಅನಿತಾ ರಾಂಪಾಲ್, ಯುನಿಸೆಫ್‌ನ ಶಿಕ್ಷಣ ತಜ್ಞ ರಾಮಚಂದ್ರ ಬೇಗೂರ್, ಎನ್‌ಐಇಪಿಎ ಅಸೋಸಿಯೇಟ್ ಪ್ರೊಫೆಸರ್ ಎಕೆ ಸಿಂಗ್, ಎನ್‌ಸಿಆರ್‌ಟಿ ವಿಶೇಷ ಅಗತ್ಯವುಳ್ಳವರ ಶಿಕ್ಷಣ ವಿಭಾಗದ ಮಾಜಿ ಮುಖ್ಯಸ್ಥರಾದ ಡಾ ನೀರ್ಜಾ ಶುಕ್ಲ, ಮುಂಬೈಯ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈಯನ್ಸ್‌ನ ಪ್ರೊಫೆಸರ ಸಂಜೀವ್ ರೈ ಮುಂತಾದ ಶಿಕ್ಷಣ ತಜ್ಞರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X