ಕಾಂಗ್ರೆಸ್, ಟಿಎಂಸಿ, ಸಿಪಿಎಂನ 107 ಶಾಸಕರು ಬಿಜೆಪಿಗೆ: ಮುಕುಲ್ ರಾಯ್ ಬಾಂಬ್

ಕೊಲ್ಕತ್ತಾ, ಜು.13: ಕಾಂಗ್ರೆಸ್, ಟಿಎಂಸಿ ಮತ್ತು ಸಿಪಿಎಂನ 107 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ನಾಯಕ ಮುಕುಲ್ ರಾಯ್ ಹೊಸ ಬಾಂಬ್ ಸಿಡಿಸಿದ್ದಾರೆ.
“ಸಿಪಿಎಂ, ಕಾಂಗ್ರೆಸ್ ಮತ್ತು ಸಿಪಿಎಂನ 107 ಶಾಸಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಬಿಜೆಪಿ ಸೇರ್ಪಡೆಗೊಳ್ಳಲಿರುವ ಶಾಸಕರ ಪಟ್ಟಿ ತಯಾರಿಸಲಾಗುತ್ತಿದೆ. ರಾಜ್ಯ ನಾಯಕತ್ವದೊಂದಿಗೆ ಅವರು ಮಾತುಕತೆಯಲ್ಲಿದ್ದಾರೆ ಎಂದವರು ಹೇಳಿದರು.
ಕರ್ನಾಟಕದಲ್ಲಿ ರಾಜಕೀಯ ಹೈಡ್ರಾಮ ನಡೆಯುತ್ತಿರುವ ನಡುವೆ ಅತ್ತ ಗೋವಾದಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
Next Story





