ಮಂಗಳೂರು: ಅಕ್ರಮ ಮರಳು ಸಾಗಾಟ ಪತ್ತೆ

ಮಂಗಳೂರು, ಜು.13: ಅಕ್ರಮವಾಗಿ ಮರಳು ಸಾಗಾಟದ ಲಾರಿಯನ್ನು ಶುಕ್ರವಾರ ಕಂಕನಾಡಿ ನಗರ ಪೊಲೀಸರು ಪತ್ತೆ ಮಾಡಿ, ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದುದನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅಶೋಕ್ ಪಿ. ನೇತೃತ್ವದಲ್ಲಿ ಎಸ್ಸೈ ಪ್ರದೀಪ್ ಟಿ.ಆರ್. ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಡೀಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





