Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನಪ್ರತಿನಿಧಿಗಳು ಮೌಲ್ಯಾಧಾರಿತ ಸಿದ್ಧಾಂತ...

ಜನಪ್ರತಿನಿಧಿಗಳು ಮೌಲ್ಯಾಧಾರಿತ ಸಿದ್ಧಾಂತ ರೂಢಿಸಿಕೊಳ್ಳಬೇಕು: ನ್ಯಾ.ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ14 July 2019 6:52 PM IST
share
ಜನಪ್ರತಿನಿಧಿಗಳು ಮೌಲ್ಯಾಧಾರಿತ ಸಿದ್ಧಾಂತ ರೂಢಿಸಿಕೊಳ್ಳಬೇಕು: ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು, ಜು.14: ಜನಪ್ರತಿನಿಧಿಗಳು ಮೌಲ್ಯಾಧಾರಿತ ಸಿದ್ಧಾಂತಗಳನ್ನು ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಲಹೆ ನೀಡಿದ್ದಾರೆ.

ರವಿವಾರ ನಗರದ ಪುರಭವನದ ಸಭಾಂಗಣದಲ್ಲಿ ಸಿಟಿಜನ್ಸ್ ಫಾರ್ ಬೆಂಗಳೂರು ಆಯೋಜಿಸಿದ್ದ ಕಾರ್ಪೊರೇಟರ್ ನಂ.1 ನಮ್ಮ ಸಮಿತಿ ಪುರಸ್ಕಾರ ಹಾಗೂ ಕಾರ್ಪೊರೇಟರ್‌ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜನಪ್ರತಿನಿಧಿಗಳ ಪಾತ್ರ ಬಹುಮುಖ್ಯವಾಗಿದ್ದು, ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅವರು ಗಮನ ನೀಡಬೇಕೇ ಹೊರತು ಸಮಸ್ಯೆಗಳಿಗೆ ಕಾರಣರಾಗಬಾರದು ಎಂದು ಅಭಿಪ್ರಾಯಪಟ್ಟರು.

ಪಾಲಿಕೆ, ನಗರಸಭೆ ಸೇರಿದಂತೆ ಸ್ಥಳೀಯ ಮಟ್ಟದ ಸಂಸ್ಥೆಗಳು, ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ, ಅತೀ ವೇಗವಾಗಿಯೇ ನಾವು ಅಭಿವೃದ್ಧಿ ಕಾಣಬಹುದು. ಹಾಗಾಗಿ, ಅಧಿಕಾರಿಗಳ ವರ್ಗ ಮತ್ತು ಸರಕಾರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಧ್ಯನತೆ ನೀಡಬೇಕು ಎಂದು ತಿಳಿಸಿದರು.

ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಮಾತನಾಡಿ, ಸಮಸ್ಯೆಗಳ ಬಗ್ಗೆ ಜನ ದೂರು ಹೇಳುವುದು ಸಹಜ. ವಾರ್ಡ್ ಸಮಿತಿ ಚಟುವಟಿಕೆಗಳಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದೇ ಆದರೆ, ನಗರದ ಚಿತ್ರಣವನ್ನೇ ಬದಲಾಯಿಸಬಹುದು. ಅನೇಕ ವಾರ್ಡ್‌ಗಳಲ್ಲಿ ಈ ಬೆಳವಣಿಗೆಯನ್ನು ಈಗಾಗಲೇ ಗಮನಿಸಿ ಸಿಟಿಜನ್ಸ್ ಫಾರ್ ಬೆಂಗಳೂರು ಈ ಪ್ರಶಸ್ತಿ ಪ್ರಾರಂಭಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಲ್ಲ ವಾರ್ಡ್ ಸಮಿತಿಗಳು ಪ್ರತಿ ತಿಂಗಳ ಮೊದಲ ಶನಿವಾರ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಸಬೇಕು ಎಂಬ ನಿರ್ಣಯವನ್ನು ಬಿಬಿಎಂಪಿ ಕೌನ್ಸಿಲ್ ಕೈಗೊಂಡಿತು. 2018ರ ಅಕ್ಟೋಬರ್‌ನಲ್ಲಿ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದರು. 2018ರ ಡಿಸೆಂಬರ್ ಬಳಿಕ ನಗರದಲ್ಲಿ ಸುಮಾರು 500 ವಾರ್ಡ್ ಸಭೆಗಳು ನಡೆದಿವೆ ಎನ್ನುವ ಮಾಹಿತಿ ಇದೆ ಎಂದರು.

ಈ ಸಂದರ್ಭದಲ್ಲಿ ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ಭದ್ರೇಗೌಡ, ಸಿಎಫ್‌ಬಿಯ ಸಹಸ್ಥಾಪಕ ಶ್ರೀನಿವಾಸ್ ಅಲವಿಲ್ಲಿ, ತಾರಾ ಕೃಷ್ಣಮೂರ್ತಿ ಸೇರಿದಂತೆ ಪ್ರಮುಖರಿದ್ದರು.

ಆಡಳಿತವನ್ನು ಪಾರದರ್ಶಕವನ್ನಾಗಿಸಲು ಇರುವ ಸಾಧನವೇ ವಾರ್ಡ್ ಸಮಿತಿ. ಪ್ರಜಾಪ್ರಭುತ್ವದ ಆಡಳಿತ ಪ್ರಕ್ರಿಯೆಯಲ್ಲಿ ಎಲ್ಲರನ್ನೂ ಒಳಗೊಳ್ಳುವಂತೆ ಮಾಡುವಲ್ಲಿ ಇವು ಪರಿಣಾಮಕಾರಿ. ವಾರ್ಡ್ ಸಮಿತಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಜೆಗಳು ಭಾಗವಹಿಸುವಂತೆ ಆಗಬೇಕು.

- ಗಂಗಾಂಬಿಕೆ, ಬಿಬಿಎಂಪಿ ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X