Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನಿಂದ 1900...

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನಿಂದ 1900 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 July 2019 8:24 PM IST
share
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನಿಂದ 1900 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ, ಜು.14: ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸಮಾಜದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ 1900 ವಿದ್ಯಾರ್ಥಿಗಳಿಗೆ 2018-19ನೆ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಶನಿವಾರ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಜರಗಿತು.

ಸಮಾರಂಭವನ್ನು ಉದ್ಘಾಟಿಸಿದ ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯದ ಮಹಾಪ್ರಬಂಧಕ ಎಂ.ಜೆ.ನಾಗರಾಜ್ ಮಾತನಾಡಿ, ವಿದ್ಯಾರ್ಥಿ ಗಳು ದಿನ ಪತ್ರಿಕೆಯನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಜ್ಞಾನ ವೃದ್ಧಿ ಜೊತೆ ಭಾಷೆ ಮೇಲೆ ಹಿಡಿತ ಸಾಧಿಸಲು ಸಾಧ್ಯ ವಾಗುತ್ತದೆ ಎಂದರು.

ವಿದ್ಯಾರ್ಥಿಗಳು ಮುಂದೆ ತಮ್ಮ ಯಾವುದೇ ವೃತ್ತಿಯ ಜೊತೆ ಕಲೆ, ಸಂಗೀತ, ನಾಟಕಗದಳಂತ ಉತ್ತಮ ಪ್ರವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ತಮ್ಮ ಒತ್ತಡ ನಿರ್ವಹಣೆ ಮಾತ್ರವಲ್ಲದೆ ಸದಾ ಚಟುವಟಿಯಿಂದ ಇರಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಮಾತನಾಡಿ, ಬ್ಯಾಂಕ್ ಆಫ್ ಬರೋಡಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸಾಲ ಸೌಲಭ್ಯ ವನ್ನು ನೀಡುತ್ತಿದ್ದು, ಬಡ ಹಾಗೂ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳು ಯಾವುದೇ ಭದ್ರತೆ ಇಲ್ಲದೆ 7.50ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಪಡೆಯ ಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮುಂದೆ ಈ ಯೋಜನೆಯ ಅರ್ಹ 500 ಮಂದಿ ಫಲಾನುಭವಿಗಳಿಗೆ ಇದೇ ಹಾಲ್‌ನಲ್ಲಿ ಸಾಲ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಳೆದ 17 ವರ್ಷಗಳಿಂದ ನಾವು ಅರ್ಹರಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿ ಕೊಂಡು ಬರುತ್ತಿದ್ದೇವೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಮುಂದೆ ಸಮಾಜ ಇತರ ಬಡವರಿಗೆ ಸಹಾಯ ಮಾಡಬೇಕು. ವಿದ್ಯಾರ್ಥಿಗಳು ಮೊಬೈಲನ್ನು ಹೆಚ್ಚು ಬಳಸದೆ ಸಂಸ್ಕಾರಯುತವಾಗಿ ಸಮಾಜ, ಶಾಲೆ ಮತ್ತು ಹೆತ್ತವರಿಗೆ ಮಾದರಿಯಾಗಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪಲ್ಲವಿ(ಕನ್ನಡ ಮಾಧ್ಯಮ), ಎಂ.ಮನ್ವಿತ್ ಪ್ರಭು(ಆಂಗ್ಲ ಮಾಧ್ಯಮ) ಮತ್ತು ಪಿಯುಸಿ ಅತ್ಯಧಿಕ ಅಂಕ ಗಳಿಸಿದ ನಿವೇದಿತ(ಕಲಾ), ಪ್ರತೀಕ್ಷಾ ಪೈ(ವಾಣಿಜ್ಯ), ರಾಯೀಶ ಮತ್ತು ಸ್ವಾತಿ (ವಿಜ್ಞಾನ) ಅವರಿಗೆ ಪುರಸ್ಕಾರ ನೀಡಲಾಯಿತು.
ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಶುಭಶ್ರೀ ಎಸ್. ಶೆಣೈ, ಸುಮಂತ್ ಕೆ.ಎಸ್. ಅವರನ್ನು ಗೌರವಿಸಲಾಯಿತು. ಹಾವು ಹಿಡಿಯುವ ಕೃಷ್ಣ ಮೂರ್ತಿ ಹೆಬ್ಬಾರ್ ಅವರನ್ನು ಸನ್ಮಾನಿಸಲಾಯಿತು. ಅವಿಭಜಿತ ದ.ಕ. ಜಿಲ್ಲೆಯ ಹಿರಿಯ ಅಶಕ್ತ ಯಕ್ಷಗಾನ ಕಲಾವಿದರಿಗೆ ಸಹಾಯಧನವನ್ನು ವಿತರಿಸಲಾಯಿತು.

ಬ್ಯಾಂಕ್ ಆಫ್ ಬರೋಡ ಉಡುಪಿ ಪ್ರಾದೇಶಿಕ ಶಾಖೆಯ ಉಪ ಮಹಾ ಪ್ರಬಂಧಕ ರವೀಂದ್ರ ರೈ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ ಕರ್ಕೇರ ಉಪಸ್ಥಿತರಿದ್ದರು. ಟ್ರಸ್ಟ್‌ನ ಸದಸ್ಯ ಆನಂದ ಎಸ್.ಕೆ. ಸ್ವಾಗತಿಸಿದರು. ಶಿವರಾವ್ ಕೆ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X