Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೂನ್ಯರೇಖೆಯಲ್ಲಿ ಸೇತುವೆ ನಿರ್ಮಿಸಲು...

ಶೂನ್ಯರೇಖೆಯಲ್ಲಿ ಸೇತುವೆ ನಿರ್ಮಿಸಲು ಪಾಕ್ ತಾತ್ವಿಕ ಒಪ್ಪಿಗೆ: ಭಾರತ

ಕರ್ತಾರ್‌ಪುರ ಕಾರಿಡಾರ್

ವಾರ್ತಾಭಾರತಿವಾರ್ತಾಭಾರತಿ14 July 2019 11:46 PM IST
share

ಹೊಸದಿಲ್ಲಿ, ಜು.14: ಕರ್ತಾರ್‌ಪುರ ಕಾರಿಡಾರ್‌ಗೆ ಸರ್ವಋತು ಸಂಪರ್ಕ ಸಾಧ್ಯವಾಗಿಸಲು ಭಾರತ-ಪಾಕ್ ರಾಷ್ಟ್ರಗಳ ಗಡಿಯ ಶೂನ್ಯರೇಖೆಯಲ್ಲಿ ಸೇತುವೆ ನಿರ್ಮಿಸುವ ಪ್ರಸ್ತಾಪಕ್ಕೆ ಪಾಕಿಸ್ತಾನ ತಾತ್ವಿಕ ಒಪ್ಪಿಗೆ ನೀಡಿದೆ.

 ಕಾರಿಡಾರ್‌ಗೆ ಯಾವುದೇ ಧರ್ಮದ ಯಾತ್ರಾರ್ಥಿಗಳೂ ಭೇಟಿ ನೀಡಬಹುದು ಎಂದು ವಿದೇಶ ವ್ಯವಹಾರ ಇಲಾಖೆಯ ಹೇಳಿಕೆ ತಿಳಿಸಿದೆ. ಕರ್ತಾರ್‌ಪುರ ಕಾರಿಡಾರ್ ಅನ್ನು ತ್ವರಿತವಾಗಿ ಕಾರ್ಯಗತಗೊಳಿಸುವ ಬಗ್ಗೆ ಉಭಯ ದೇಶಗಳ ನಡುವೆ ಮಾತುಕತೆ ಪುನರಾರಂಭವಾಗಿದೆ. ಭಾರತದ ನಿಯೋಗದ ನೇತೃತ್ವವನ್ನು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಎಸ್‌ಸಿಎಲ್ ದಾಸ್ ಹಾಗೂ ವಿದೇಶ ವ್ಯವಹಾರ ಇಲಾಖೆಯ ಜಂಟಿ ಕಾರ್ಯದರ್ಶಿ ದೀಪಕ್ ಮಿತ್ತಲ್ (ಪಾಕಿಸ್ತಾನ, ಅಪಘಾನಿಸ್ತಾನ, ಇರಾನ್ ವಿಭಾಗ)ವಹಿಸಿದ್ದರು.

20 ಸದಸ್ಯರ ಪಾಕಿಸ್ತಾನದ ನಿಯೋಗದ ನೇತೃತ್ವವನ್ನು ಪಾಕ್ ವಿದೇಶ ಇಲಾಖೆಯ ವಕ್ತಾರ ಮುಹಮ್ಮದ್ ಫೈಝಲ್ ವಹಿಸಿದ್ದರು. ಕರ್ತಾರ್‌ಪುರ ಕಾರಿಡಾರ್ ಕಾರ್ಯನಿರ್ವಹಿಸುವಂತಾಗಲು ಪಾಕಿಸ್ತಾನ ಪೂರ್ಣ ಬದ್ಧವಾಗಿದೆ ಎಂದು ಫೈಝಲ್ ಹೇಳಿದ್ದಾರೆ. ಪಾಕಿಸ್ತಾನದ ನಿಯೋಗದಲ್ಲಿ ಖಾಲಿಸ್ತಾನ್‌ವಾದಿ ಮುಖಂಡ ಗೋಪಾಲ್‌ಸಿಂಗ್ ಚಾವ್ಲಾರನ್ನು ಸೇರಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ಸೂಚಿಸಿದ ಬಳಿಕ ಅವರನ್ನು ನಿಯೋಗದಿಂದ ಕೈಬಿಡಲಾಗಿದೆ.

ಸಿಖ್ ಯಾತ್ರಾರ್ಥಿಗಳಿಗೆ ಕಾರಿಡಾರ್ ತಲುಪಲು ಸೇತುವೆಯ ಬದಲು ಒಡ್ಡಿನ ಮೇಲಿನ ದಾರಿ ಸೂಕ್ತ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರು. ಆದರೆ ಇದರಿಂದ ಭಾರತದತ್ತ ಇನ್ನಷ್ಟು ನೆರೆನೀರು ನುಗ್ಗುತ್ತದೆ ಎಂದು ಭಾರತ ಆತಂಕ ವ್ಯಕ್ತಪಡಿಸಿ ಆಕ್ಷೇಪಿಸಿತು. ಪಾಕಿಸ್ತಾನದ ಪ್ರದೇಶದಲ್ಲಿ ಹಳೆಯ ರಾವಿ ನದಿಯ ಮೇಲೆ ಸೇತುವೆ ನಿರ್ಮಿಸುವುದೆಂದು ನಿರ್ಧರಿಸಲಾಗಿದೆ. ನವೆಂಬರ್‌ನಲ್ಲಿ ಗುರುನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆಯ ಐತಿಹಾಸಿಕ ಸಮಾರಂಭದ ಸಂದರ್ಭ ಕಾರಿಡಾರ್ ಕಾರ್ಯಾರಂಭ ಮಾಡಲು ಅಗತ್ಯವಿರುವ ಮಧ್ಯಂತರ ವ್ಯವಸ್ಥೆಯನ್ನು ಮಾಡುವುದಾಗಿ ಭಾರತ ಭರವಸೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯರು ಹಾಗೂ ಸಾಗರೋತ್ತರ ಭಾರತೀಯ ಪೌರರಿಗೆ ವೀಸಾರಹಿತ ಪ್ರಯಾಣಕ್ಕೆ ಅವಕಾಶ ನೀಡಲು ಉಭಯ ದೇಶಗಳು ಒಪ್ಪಿಕೊಂಡಿವೆ. ವರ್ಷವಿಡೀ, ದಿನವೊಂದಕ್ಕೆ 5000 ಯಾತ್ರಾರ್ಥಿಗಳನ್ನು ಕರ್ತಾರ್‌ಪುರ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಲು ಅವಕಾಶ ಒದಗಿಸಲಾಗುವುದು ಎಂದು ಭಾರತ ತಿಳಿಸಿದೆ. ಆದರೆ ತಮ್ಮಲ್ಲಿರುವ ಮೂಲಸೌಕರ್ಯ ನಿರ್ಬಂಧದ ಹಿನ್ನೆಲೆಯಲ್ಲಿ ಭಾರತೀಯರು ಪ್ರಸ್ತಾವಿಸಿದಷ್ಟು ಯಾತ್ರಾರ್ಥಿಗಳಿಗೆ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ಬಗ್ಗೆ ಪಾಕ್ ಅಧಿಕಾರಿಗಳು ಹೇಳಿದರು.

ಕರ್ತಾರ್‌ಪುರ ಕಾರಿಡಾರ್ ಮೂಲಕ ಪಾಕಿಸ್ತಾನದ ಕರ್ತಾರ್‌ಪುರದಲ್ಲಿರುವ ದರ್ಬಾರ್ ಸಾಹಿಬ್ ಅನ್ನು ಪಂಜಾಬ್‌ನ ಗುರುದಾಸ್‌ಪುರದಲ್ಲಿರುವ ಬಾಬಾ ನಾನಕ್ ಮಂದಿರಕ್ಕೆ ಸಂಪರ್ಕಿಸಲಾಗುತ್ತದೆ. ಇಲ್ಲಿಗೆ ಭೇಟಿ ನೀಡುವ ಸಿಖ್ ಯಾತ್ರಾರ್ಥಿಗಳಿಗೆ ವೀಸಾದ ಅಗತ್ಯವಿಲ್ಲ , ಕೇವಲ ಅನುಮತಿ ಪತ್ರ ಸಾಕಾಗುತ್ತದೆ ಎಂದು ವಿದೇಶ ವ್ಯವಹಾರ ಇಲಾಖೆಯ ಹೇಳಿಕೆ ತಿಳಿಸಿದೆ.

ಕರ್ತಾರ್‌ಪುರ ಕಾರಿಡಾರ್ ಕುರಿತ ಪ್ರಥಮ ಹಂತದ ಮಾತುಕತೆ ಮಾರ್ಚ್ 14ರಂದು ನಡೆದಿದ್ದರೆ ಎಪ್ರಿಲ್ 2ರಂದು ನಿಗದಿಯಾಗಿದ್ದ ದ್ವಿತೀಯ ಹಂತದ ಮಾತುಕತೆಯನ್ನು ಭದ್ರತೆಯ ಕಾರಣದಿಂದ ರದ್ದುಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X