ಮಂಗಳೂರು: 40 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ
ಮಂಗಳೂರು, ಜು. 17: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು 12 ಲಕ್ಷ ರೂ. ಮೌಲ್ಯದ 40 ಕಿ.ಗ್ರಾಂ. ಗಾಂಜಾ ಸಹಿತ ಕಾವೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕಾಸರಗೋಡು ಪರಿಸರದ ಇಕ್ಬಾಲ್ ಮತ್ತು ಫಝಲ್ ಬಂಧಿತ ಆರೋಪಿಗಳು.
ಕೇರಳ ನೋಂದಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಿ ಬೋಂದೆಲ್ ಬಳಿ ಮಾರಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಗರಿಷ್ಠ ಪ್ರಮಾಣದ ಗಾಂಜಾ ಪತ್ತೆ: ಮಂಗಳೂರು ನಗರದಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಪತ್ತೆಯಾದ ಗರಿಷ್ಠ ಪ್ರಮಾಣದ ಗಾಂಜಾ ಇದಾಗಿದೆ. 40 ಕಿ.ಗ್ರಾಂ ಗೆ ಸುಮಾರು 12 ಲಕ್ಷ ರೂ. ಮೌಲ್ಯವಿದೆ. ಕೇರಳದಿಂದ ಗಾಂಜಾ ಖರೀದಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಕೇಂದ್ರೀಕರಿಸಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story