Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಧ್ಯಾಹ್ನ ಊಟಕ್ಕೆ ಹೊರಹೋಗದಂತೆ ನಿರ್ಬಂಧ:...

ಮಧ್ಯಾಹ್ನ ಊಟಕ್ಕೆ ಹೊರಹೋಗದಂತೆ ನಿರ್ಬಂಧ: ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 July 2019 8:19 PM IST
share
ಮಧ್ಯಾಹ್ನ ಊಟಕ್ಕೆ ಹೊರಹೋಗದಂತೆ ನಿರ್ಬಂಧ: ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ಮಧ್ಯಾಹ್ನ ಊಟದ ವಿರಾಮ ವೇಳೆಯಲ್ಲಿ ವಿದ್ಯಾರ್ಥಿಗಳು ಕಾಲೇಜ್ ಕ್ಯಾಂಪಸ್ ಬಿಟ್ಟು ಹೊರ ಹೋಗದಂತೆ ಕಾಲೇಜ್‍ನ ಆಡಳಿತ ಮಂಡಳಿ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಪುತ್ತೂರಿನ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಬುಧವಾರ ಮಧ್ಯಾಹ್ನ  ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಕೆಲ ದಿನಗಳ ಹಿಂದೆ ನಡೆದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಘಟನೆಯ ಹಿನ್ನೆಲೆಯಲ್ಲಿ ಕಾಲೇಜ್ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳು ಕಾಲೇಜ್‍ನಿಂದ ಹೊರಹೋಗದಂತೆ ಮುಖ್ಯ ಗೇಟ್‍ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿತ್ತು. 

ಇದರಿಂದಾಗಿ ಬೆಳಗ್ಗೆ ಕಾಲೇಜ್‍ಗೆ ಹಾಜರಾದ ವಿದ್ಯಾರ್ಥಿಗಳು ತರಗತಿ ಮುಕ್ತಾಯವಾಗುವ ಸಂಜೆ 4 ಗಂಟೆಯ ತನಕ ಕ್ಯಾಂಪಸ್‍ನಿಂದ ಹೊರ ಹೋಗಲು ಅವಕಾಶವಿಲ್ಲದಾಗಿದ್ದು, ಮಧ್ಯಾಹ್ನದ ಊಟಕ್ಕೆ ಮನೆಯಿಂದ ಬುತ್ತಿ ತರಬೇಕು ಇಲ್ಲವೇ ಕಾಲೇಜ್ ಕ್ಯಾಂಟೀನ್‍ನಲ್ಲಿ ಊಟ ಮಾಡಬೇಕು ಎಂಬ ಸೂಚನೆ ನೀಡಿತ್ತು ಎನ್ನಲಾಗಿದೆ.

ಏಕಾಏಕಿ ಕಾಲೇಜು ಆಡಳಿತ ಮಂಡಳಿ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಮಧ್ಯಾಹ್ನದ ಅವಧಿಯಲ್ಲಿ ಕಾಲೇಜು ಆವರಣದೊಳಗೆ ಪ್ರತಿಭಟನೆ ನಡೆಸಿದರು. ಈ ನಡುವೆ ಕಾಲೇಜಿನ ಸಂಚಾಲಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನ ನಡೆಸಿದರೂ ಕೇಳದ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮುಂದುವರಿಸಿದ್ದರು. 

ಮಧ್ಯಾಹ್ನ ಕೇವಲ ಒಂದು ಗಂಟೆಯ ಅವಧಿಗೆ ಊಟದ ವಿರಾಮವಿದೆ. ಕ್ಯಾಂಪಸ್ ಒಳಗಡೆ ಕೇವಲ 2 ಕ್ಯಾಂಟೀನ್ ಮಾತ್ರವಿದೆ. ಇಲ್ಲಿ ಸಾವಿರಾರು ವಿದ್ಯಾರ್ಥಿಗಳು ಊಟ ಮಾಡುವುದು ಸಾಧ್ಯವಿಲ್ಲ. ಅಲ್ಲದೆ ಬೆಳಗ್ಗೆ 9 ಗಂಟೆಗೆ ತರಗತಿಗೆ ಹಾಜರಾದರೆ 4 ಗಂಟೆಯ ತನಕ ಹೊರಗಡೆ ಹೋಗುವಂತಿಲ್ಲ. ನಾವು ಪೇಯಿಂಗ್ ಗೆಸ್ಟ್ ಗೆ ಮುಂಗಡ ಹಣ ಪಾವತಿಸಿದ್ದು, ಕಾಲೇಜ್‍ನ ನಿರ್ಬಂಧದಿಂದಾಗಿ ಮಧ್ಯಾಹ್ನದ ಊಟಕ್ಕಾಗಿ ಪ್ರತಿದಿನ 30 ರೂ. ವ್ಯಯಿಸಬೇಕಾಗುತ್ತದೆ. ನಾವು ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಹಾಗಿದ್ದರೂ ನಮ್ಮ ಮೇಲೆ ಇಂತಹ ಕ್ರಮ ಸರಿಯಲ್ಲ ಎಂದು ವಿದ್ಯಾರ್ಥಿ ಸುದೀಪ್ ತಿಳಿಸಿದ್ದಾರೆ.

''ಕಾಲೇಜ್‍ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಮಾಹಿತಿ ಅರಿತು ನಾವು ಅಲ್ಲಿಗೆ ಹೋಗಿದ್ದೆವು. ಆದರೆ ಕ್ಯಾಂಪಸ್ ಒಳಗಡೆ ವಿದ್ಯಾರ್ಥಿಗಳು ಶಾಂತಿ ಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಕಾಲೇಜ್ ಕ್ಯಾಂಪಸ್‍ನ ಒಳಗಡೆ ಪ್ರತಿಭಟನೆ ನಡೆಯುತ್ತಿರುವುದರಿಂದ ನಾವು ಅಲ್ಲಿಗೆ ಪ್ರವೇಶಿಸಿಲ್ಲ''
-ತಿಮ್ಮಪ್ಪ ನಾಯ್ಕ್, ಇನ್ಸ್ ಪೆಕ್ಟರ್  ಪುತ್ತೂರು ನಗರ ಠಾಣೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X