Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ವಿವಿಧ ಬೇಡಿಕೆಗಳ...

ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಲೆಕ್ಕಿಗರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ17 July 2019 11:38 PM IST
share
ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಲೆಕ್ಕಿಗರಿಂದ ಧರಣಿ

ಚಿಕ್ಕಮಗಳೂರು, ಜು.17: ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳನ್ನು ಸರಕಾರದ ವಿವಿಧ ಇಲಾಖೆಗಳ ಕೆಲಸಗಳನ್ನು ಮಾಡಲು ಒತ್ತಾಯ ಹೇರುತ್ತಿದ್ದು, ಈ ಹೆಚ್ಚುವರಿ ಕೆಲಸದ ಹೊರೆಯನ್ನು ಕಡಿಮೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ಗ್ರಾಮಲೆಕ್ಕಾಧಿಕಾರಿ ಸಂಘದ ನೂರಾರು ಸದಸ್ಯರು ಬುಧವಾರ ನಗರದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.

ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಗೌರವಾಧ್ಯಕ್ಷ ನವೀನ್‍ಕುಮಾರ್, ಜಿಲ್ಲಾಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಮಧುಸೂದನ್, ಪ್ರಧಾನ ಕಾರ್ಯದರ್ಶಿ ಲವಕುಮಾರ್, ಸದಸದಸ್ಯರಾದ ಗುರುರಾಜ್, ರಘು, ಹನುಮಂತಪ್ಪ, ಹರ್ಷವರ್ಧನ್, ಲಕ್ಷ್ಮಣ್, ಝಬೀವುಲ್ಲಾ, ಯಮುನಾ, ಯಶಸ್ವಿನಿ ಮತ್ತಿತರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಆವರಣಕ್ಕೆ ಆಗಮಿಸಿದ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಲೆಕ್ಕಾಧಿಕಾರಿಗಳು, ಸರಕಾರ ಗ್ರಾಮಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಈ ಬೇಡಿಕೆಗಳ ಸಂಬಂಧ ಈ ಹಿಂದೆಯೇ ಸರಕಾರಕ್ಕೆ ಮನವಿ ಮಾಡಿದ್ದು, ಸರಕಾರದ ಭರವಸೆಯ ಮೇರೆಗೆ ಸಂದಿಗ್ಧ ಪರಿಸ್ಥಿತಿಯಲ್ಲೂ ಕೆಲಸದ ಒತ್ತಡ, ಹೊರೆಯನ್ನು ನಿಭಾಯಿಸಿಕೊಂಡು ಬಂದಿದ್ದೇವೆ. ಆದರೆ ಸರಕಾರ ತಮ್ಮ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಮಾತನಾಡಿ, ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘವು ಈ ಹಿಂದೆ ತಮ್ಮ ಕುಂದು ಕೊರತೆಗಳು ಹಾಗೂ ಮುಂಭಡ್ತಿಯಲ್ಲಿ ಉಂಟಾಗುತ್ತಿರುವ ನಿರಂತರ ಅನ್ಯಾಯವನ್ನು ಸರಿಪಡಿಸುವಂತೆ ಹಾಗೂ ಕಂದಾಯ ಇಲಾಖೆಯ ಕೆಲಸಗಳ ಜತೆಗೆ ವಿವಿಧ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ನಿರ್ವಹಿಸುತ್ತಿರುವ ಗ್ರಾಮಲೆಕ್ಕಾಧಿಕಾರಿಗಳ ಕೆಲಸದ ಒತ್ತಡವನ್ನು ಕಡಿಮೆ ಮಾಡುವಂತೆ ಸರಕಾರದ ಗಮನಸೆಳೆಯಲಾಗಿತ್ತು. ಈ ಸಂಬಂಧ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಸಂಘದ ಮುಖಂಡರೊಂದಿಗೆ ಸುಧೀರ್ಘವಾಗಿ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನೂ ನೀಡಿದ್ದರು. ಆದರೆ ಈ ಭರವಸೆ ನೀಡಿದ ಹಲವು ವರ್ಷಗಳಾಗಿದ್ದರೂ ಸರಕಾರ ಇದುವರೆಗೂ ಗ್ರಾಮಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.

ಸರಕಾರದ ಗ್ರಾಮಲೆಕ್ಕಾಧಿಕಾರಿಗಳ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದರಿಂದ ಹಾಗೂ ಅವೈಜ್ಞಾನಿಕ ನೀತಿಗಳಿಂದಾಗಿ ಗ್ರಾಮಲೆಕ್ಕಾಧಿಕಾರಿಗಳ ಕಂದಾಯ ಇಲಾಖೆಯ ಕೆಲಸ ಜತೆಗೆ ವಿವಿಧ ಇಲಾಖೆಗಳ ಕೆಲಸವನ್ನೂ ಹೆಚ್ಚುವರಿಯಾಗಿ ನಿರ್ವಹಿಸುವಂತಾಗಿದೆ. ಇದರಿಂದಾಗಿ ನೌಕರರ ಮೇಲೆ ಕೆಲಸದ ಒತ್ತಡ ಹೆಚ್ಚುತ್ತಿದ್ದು, ರಜಾ ದಿನಗಳಲ್ಲೂ ಗ್ರಾಮಲೆಕ್ಕಾಧಿಕಾರಿಗಳು ಕಚೇರಿಗಳಲ್ಲಿ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಇದರ ಪರಿಣಾಮ ನೌಕರರು ಹಲವಾರು ಕೌಟುಂಬಿಕ ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡಗಳನ್ನು ಎದುರಿಸುತ್ತಿದ್ದಾರೆ ಎಂದ ಅವರು, ಸರಕಾರ ಗ್ರಾಮಲೆಕ್ಕಾಧಿಕಾರಿಗಳ ಜಾಬ್ ಚಾರ್ಟ್ ಅನ್ನು ಪರಿಷ್ಕರಿಸಿದ್ದರೂ ಪರಿಷ್ಕರಿಸಿದ ಜಾಬ್ ಚಾರ್ಟ್ ಅನ್ನು ಸರಕಾರ ಇದುವರೆಗೂ ನೀಡಿಲ್ಲ. ಕೂಡಲೇ ಜಾಬ್ ಚಾರ್ಟ್ ಅನ್ನು ಎಲ್ಲ ಗ್ರಾಮಲೆಕ್ಕಾಧಿಕಾರಿಗಳಿಗೂ ನೀಡಬೇಕೆಂದು ಅವರು ಒತ್ತಾಯಿಸಿದರು.

ಮುಂಭಡ್ತಿ ವಿಚಾರದಲ್ಲಿ ಗ್ರಾಮಲೆಕ್ಕಾಧಿಕಾರಿಗಳಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರ ಮತ್ತು ಗ್ರಾಮಲೆಕ್ಕಾಧಿಕಾರಿಗಳ ಜೇಷ್ಠತೆಯನ್ನು ಒಟ್ಟುಗೂಡಿಸಿ ಮುಂಭಡ್ತಿ ನೀಡಬೇಕು. ಗ್ರಾಮಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆಯನ್ನು 1 ಸಾವಿರ ರೂ. ಹೆಚ್ಚಿಸಲು ಸರಕಾರದ ಪ್ರಧಾನ ಕರ್ಯದರ್ಶಿ ಅವರೇ ತೀರ್ಮಾನಿಸಿ ಸರಕಾರಕ್ಕೆ ವರದಿ ನೀಡಿದ್ದಾರೆ. ಆದರೆ ಸರಕಾರ ಪ್ರಯಾಣ ಭತ್ಯೆಯನ್ನು ಕೇವಲ 300ರಿಂದ 500 ರೂ.ವರೆಗೆ ಮಾತ್ರ ಹೆಚ್ಚಿಸಿದ್ದು, ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಗ್ರಾಮಲೆಕ್ಕಾಧಿಕಾರಿಗಳಿಗೆ ತೊಂದರೆಯಾಗಿದೆ. ಸರಕಾರ ಹಾಲಿ ಪ್ರಯಾಣ ಭತ್ಯೆಯನ್ನು ಪುನರ್ ಪರಿಶೀಲಿಸಿ ಭತ್ಯೆಯನ್ನು 1 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ಅವರು ಆಗ್ರಹಿಸಿದರು.

ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರಿಂದ ಗ್ರಾಮಲೆಕ್ಕಾಧಿಕಾರಿಗಳ ಮೇಲೆ ದಾಳಿ, ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಸರಕಾರ ಈ ಸಂಬಂಧ ಸೂಕ್ತ ಭದ್ರತೆ ಒದಗಿಸಬೇಕೆಂದ ಅವರು, ಮರಳು ದಂಧೆ ನಿಯಂತ್ರಣಕ್ಕೆ ಮುಂದಾದ ವೇಳೆಯಲ್ಲಿ ಸಾಹಿಬ್ ಪಾಟೀಲ್ ಎಂಬ ಗ್ರಾಮಲೆಕ್ಕಾಧಿಕಾರಿಯನ್ನು ದಂಧೆಕೋರರು ಲಾರಿ ನುಗ್ಗಿಸಿ ಹತ್ಯೆ ಮಾಡಿದ್ದಾರೆ. ಆದರೆ ಸರಕಾರ ಈ ಪ್ರಕರಣದಲ್ಲಿ ಮೃತ ಗ್ರಾಮಲೆಕ್ಕಾಧಿಕಾರಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿಲ್ಲ. ಇವರ ಕುಟುಂಬಕ್ಕೆ ಸರಕಾರ ಕೂಡಲೇ ವಿಶೇಷ ಪರಿಹಾರದ ರೂಪದಲ್ಲಿ 20 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಬೇಕು. ಅಲ್ಲದೇ ಗ್ರಾಮಲೆಕ್ಕಾಧಿಕಾರಿಗಳನ್ನು ಖಾಯಮಾತಿ ಮಾಡಬೇಕೆಂಬ ಬೇಡಿಕೆಗೆ ಸರಕಾರ ಇದುವರೆಗೂ ಸ್ಪಂದಿಸಿಲ್ಲ. ಸರಕಾರ ಕೂಡಲೇ ಈ ಬೇಡಿಕೆಯನ್ನು ಈಡೇರಿಸಬೇಕೆಂದರು.

ಈ ಬೇಡಿಕೆಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಈಡೇರಿಸಬೇಕು. ತಪ್ಪಿದಲ್ಲಿ ರಾಜ್ಯದ ಎಲ್ಲ ಗ್ರಾಮಲೆಕ್ಕಾಧಿಕಾರಿಗಳು ಕುಟುಂಬ ಸಮೇತರಾಗಿ ಬೆಂಗಳೂರಿನಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟ ಮುಷ್ಕರ ಹಮ್ಮಿಕೊಳ್ಳುವುದಾಗಿ ಇದೇ ವೇಳೆ ಸಂಘದ ಮುಖಂಡರು ಸರಕಾರವನ್ನು ಎಚ್ಚರಿಸಿದರು. ನಂತರ ಬೇಡಿಕೆಗಳ ಸಂಬಂಧ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಧರಣಿಯಲ್ಲಿ ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕಡೂರು, ನರಸಿಂಹರಾಜಪುರ, ಚಿಕ್ಕಮಗಳೂರು, ತರೀಕೆರೆ ತಾಲೂಕು ವ್ಯಾಪ್ತಿಯ ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಸಂಘದ ಮುಖಂಡರು ಭಾಗವಹಿಸಿದ್ದರು.

ಗ್ರಾಮಲೆಕ್ಕಾಧಿಕಾರಿಗಳ ಬೇಡಿಕೆಗಳ ಸಂಬಂಧ ಮಂಗಳವಾರ ಜಿಲ್ಲಾದ್ಯಂತ ಕೆಲಸ ಸ್ಥಗಿತಗೊಳಿಸಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ್ದ ನೌಕರರಿಗೆ ಧರಣಿ ಹಮ್ಮಿಕೊಳ್ಳಲು ಜಿಲ್ಲಾಡಳಿನ ಕಾನೂನು ಸುವ್ಯವಸ್ಥೆಯ ನೆಪದಲ್ಲಿ ಅವಕಾಶ ನೀಡಲಿಲ್ಲ. ಇದರಿಂದಾಗಿ ವಿವಿಧ ತಾಲೂಕುಗಳಿಂದ ಧರಣಿ ಬೆಂಬಲಿಸಿ ಆಗಮಿಸಿದ್ದ ಗ್ರಾಮಲೆಕ್ಕಾಧಿಕಾರಿಗಳು ಜಿಲ್ಲಾ ಆಟದ ಮೈದಾನಕ್ಕೆ ತೆರಳಿ ಅಲ್ಲಿ ಸಾಂಕೇತಿಕ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೌಕರರು, ಸಂಘದ ಮುಖಂಡರು ಮನವಿ ಪತ್ರ ಸಲ್ಲಿಸಿ ಹಿಂದಿರುಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X