ಕೋಳಿ ಅಂಕ: ನಾಲ್ವರ ಬಂಧನ
ಮಂಗಳೂರು, ಜು.18: ನಗರ ಹೊರವಲಯ ಪೆರ್ಮಂಕಿ ಪದವಿನಲ್ಲಿ ಕೋಳಿಅಂಕಕ್ಕೆ ದಾಳಿ ನಡೆಸಿದ ಮಂಗಳೂರು ಗ್ರಾಮಾಂತರ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿ, ಐದು ಕೋಳಿಯನ್ನು ವಶಪಡಿಸಿಕೊಂಡಿದ್ದಾರೆ.
ಪೆರ್ಮಂಕಿ ಪದವು ವ್ಯಾಪ್ತಿಯ ಕಲ್ಲುಕೋರೆ ಪ್ರದೇಶದಲ್ಲಿ ನಿರಂತರವಾಗಿ ಕೋಳಿಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಇನ್ಸ್ಪೆಕ್ಟರ್ ಭಜಂತ್ರಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಸಂದರ್ಭ ಪೊಲೀಸರನ್ನು ನೋಡಿ ಹಲವು ಮಂದಿ ಪರಾರಿಯಾಗಿದ್ದಾರೆ. ನಾಲ್ಕು ಮಂದಿಯನ್ನು ಬಂಧಿಸಿ ಹಾಗೂ 5 ಕೋಳಿ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story