Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೆ.1 ರೊಳಗೆ ಪ್ಲಾಸ್ಟಿಕ್ ನಿಷೇಧ ಆದೇಶ...

ಸೆ.1 ರೊಳಗೆ ಪ್ಲಾಸ್ಟಿಕ್ ನಿಷೇಧ ಆದೇಶ ಕಟ್ಟುನಿಟ್ಟಿನ ಜಾರಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2019 11:01 PM IST
share
ಸೆ.1 ರೊಳಗೆ ಪ್ಲಾಸ್ಟಿಕ್ ನಿಷೇಧ ಆದೇಶ ಕಟ್ಟುನಿಟ್ಟಿನ ಜಾರಿಗೆ ಸೂಚನೆ

ಬೆಂಗಳೂರು, ಜು.21: ಪ್ಲಾಸ್ಟಿಕ್ ನಿಷೇಧ ಆದೇಶವನ್ನು ಸೆ.1 ರೊಳಗೆ ಕಟ್ಟುನಿಟ್ಟಾಗಿ ಜಾರಿ ಮಾಡದಿದ್ದಲ್ಲಿ, ಬಿಬಿಎಂಪಿ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಟ್ಟದ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್ ಬಿ. ಆದಿ ಹೇಳಿದ್ದಾರೆ.

ರವಿವಾರ ನಗರದ ಪುರಭವನದಲ್ಲಿ ಬಿಬಿಎಂಪಿ ವತಿಯಿಂದ ಹಮ್ಮಿಕೊಂಡಿದ್ದ ದಕ್ಷಿಣ ವಲಯದಲ್ಲಿ ಘನತಾಜ್ಯ ನಿರ್ವಹಣೆ ನಿಯಮ 2016, ಪ್ಲಾಸ್ಟಿಕ್ ನಿರ್ವಹಣೆ ನಿಯಮ ಕುರಿತು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಘನತಾಜ್ಯ ನಿರ್ವಹಣೆ ನಿಯಮದಂತೆ ಕಡ್ಡಾಯವಾಗಿ ಕಸವನ್ನು ವಿಂಗಡನೆ ಮಾಡಬೇಕು. ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಪ್ಲಾಸ್ಟಿಕ್ ನಿಷೇಧ ಕುರಿತು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ರಸ್ತೆ, ಅಂಗಡಿ ಸೇರಿ ಎಲ್ಲೆಂದರಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್ ಬಳಕೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಪಾಲಿಕೆ ವಿಫಲವಾಗಿದೆ. ಆದ್ದರಿಂದ ಸೆ. 1ರೊಳಗೆ ಪ್ಲಾಸ್ಟಿಕ್ ನಿಷೇಧ ಆದೇಶ ಕಟ್ಟುನಿಟ್ಟಾಗಿ ಜಾರಿಮಾಡದಿದ್ದರೆ, ಎನ್‌ಜಿಟಿಗೆ ಪಾಲಿಕೆ ವಿರುದ್ಧ ವರದಿ ನೀಡಲಾಗುವುದು ಎಂದರು.

ಉತ್ತರ ಕರ್ನಾಟಕದಲ್ಲಿ ತೀರಾ ಹಿಂದುಳಿದ ಜಿಲ್ಲೆಗಳೆಂದು ಹೆಸರು ಗಳಿಸಿರುವ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಜನರಿಗೆ ಸಮರ್ಪಕವಾಗಿ ಮಾಹಿತಿ ನೀಡಿದ ಪರಿಣಾಮವಿಂದು ಅಲ್ಲಿನ ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಮುಂದಾಗಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ನಿಯಂತ್ರಣವಾಗಿಲ್ಲ. ಈ ಬಗ್ಗೆ ಪಾಲಿಕೆ ಜಾಗೃತಿ ಮೂಡಿಸುವುದು ಮಾತ್ರವಲ್ಲದೇ, ದಂಡ ಹಾಕುವ ಮೂಲಕ ಎಚ್ಚರಿಕೆ ನೀಡಬೇಕು. ಅದೇ ರೀತಿ ಜನರು ಜವಾಬ್ದಾರಿ ತೆಗೆದುಕೊಳ್ಳಬೇಕು. ಆದರೆ ಬೆಂಗಳೂರಿಗರಿಗೆ ಜವಾಬ್ದಾರಿ ತೆಗೆದುಕೊಳ್ಳುವ ಮನಸ್ಸು ಇಲ್ಲ ಎಂದು ಹೇಳಿದರು.

ದೇಶದಲ್ಲಿ ಪ್ರತಿದಿನ 1.5 ಲಕ್ಷ ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಇನ್ನು ಕೆಲ ವರ್ಷಗಳಲ್ಲಿ 3 ಲಕ್ಷ ಟನ್ ಗಡಿ ದಾಟುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರಿನಲ್ಲಿ ಪ್ರತಿದಿನ 4200 ಟನ್ ಮನೆಗಳ ಕಸ, 1400 ಟನ್ ಅಂಗಡಿ, ಕಲ್ಯಾಣ ಮಂಟಪ, ಹೋಟೆಲ್ ಸೇರಿ ಹಲವೆಡೆಯಿಂದ ಕಸ ಸಂಗ್ರಹಣೆಯಾಗಿತ್ತಿದ್ದು, ಪಾಲಿಕೆ ವ್ಯಾಪ್ತಿಯ ಘಟಕಗಳು ತುಂಬುತ್ತಿವೆ. ಇದರಿಂದ ಘಟಕಗಳ ಸುತ್ತಲಿರುವ ಗ್ರಾಮಗಳಲ್ಲಿ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು.

ನಮ್ಮ ಕಸ ನಮ್ಮ ಜವಾಬ್ದಾರಿ ಎಂಬಂತೆ ನಮ್ಮ ವಾರ್ಡ್ ನಮ್ಮ ಜವಾಬ್ದಾರಿ ಎಂಬ ಘೋಷಣೆಯೊಂದಿಗೆ ತಮ್ಮ ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲೇ ಸಂಸ್ಕರಿಸಬೇಕು. ಮನೆ ಮನೆ ಕಸ ವಿಂಗಡನೆ ಮಾಡುವುದು ಕಡ್ಡಾಯಗೊಳಿಸಬೇಕು. ಹಸಿ ಕಸ, ಒಣ ಕಸ ವಿಂಗಡನೆ ಮಾಡಿ ನೀಡದಿದ್ದರೆ ದುಪ್ಪಟ್ಟು ದಂಡ ವಿಧಿಸಬೇಕು. ಅಲ್ಲದೆ, ತಮ್ಮ ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಅಲ್ಲೇ ಸಂಸ್ಕರಣೆ ಮಾಡಲು ಮುಂದಾದರೆ ಸಮಸ್ಯೆ ನಿವಾರಣೆ ಸಾಧ್ಯ ಎಂದು ನುಡಿದರು.

ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮಾತನಾಡಿ, ಸ್ವಚ್ಛ ನಗರಿಯಾಗಿದ್ದ ಬೆಂಗಳೂರು ಕ್ರಮೇಣ ಗಾರ್ಬೇಜ್ ಸಿಟಿ ಎಂಬ ಅಪವಾದವಿದೆ. ಸ್ವಚ್ಛ ನಗರವನ್ನಾಗಿ ನಿರ್ಮಿಸಲು ಪಾಲಿಕೆ ಮತ್ತು ಅಕಾರಿಗಳಿಂದ ಮಾತ್ರ ಸಾಧ್ಯವಿಲ್ಲ. ಜನರು ಕೈಜೋಡಿಸಿದರೆ ಬೆಂಗಳೂರು ಸ್ವಚ್ಛ ನಗರವಾಗುತ್ತದೆ. ಪ್ರತಿಯೊಬ್ಬರು ಕಸವನ್ನು ಪ್ಲಾಸ್ಟಿಕ್‌ನಲ್ಲಿ ಶೇಖರಿಸುತ್ತಿದ್ದು, ದುವಾರ್ಸನೆ ಬೀರುತ್ತದೆ. ಆದ್ದರಿಂದ ಕಸದ ತೊಟ್ಟಿ ಬಳಸಬೇಕು ಎಂದರು.

ನಗರದಲ್ಲಿ 2006 ರಿಂದಲೂ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟವನ್ನು ನಿಷೇಧ ಮಾಡಿದ್ದರೂ, ಯಾರೂ ಅದನ್ನು ಅನುಸರಿಸುತ್ತಿಲ್ಲ. ಹೀಗಾಗಿ, ಇದೀಗ ಪಾಲಿಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರ ಭಾಗವಾಗಿ ಆ.1 ರಿಂದ ಪ್ಲಾಸ್ಟಿಕ್ ಬಳಕೆ ಮಾಡುವವರಿಗೆ ಹಾಗೂ ಮಾರಾಟ ಮಾಡುವವರಿಗೆ ವಿಧಿಸುವ ದಂಡದ ಮೊತ್ತವನ್ನು ಶೇ.5 ರಷ್ಟು ಹೆಚ್ಚಳ ಮಾಡಲಾಗುವುದು.

- ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್

ದಕ್ಷಿಣ ವಲಯದಲ್ಲಿ ಎಷ್ಟು ಕಸ ಉತ್ಪತ್ತಿ?

ದಕ್ಷಿಣ ವಲಯ 6 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, 44 ವಾರ್ಡ್‌ಗಳಿವೆ. 4.91 ಲಕ್ಷ ಮನೆಗಳಿದ್ದು, 22.10 ಲಕ್ಷ ಜನರು ವಾಸಿಸುತ್ತಿದ್ದಾರೆ. ದಕ್ಷಿಣ ವಲಯದಲ್ಲಿ ಪ್ರತಿದಿನ 1087 ಮೆಟ್ರಿಕ್ ಟನ್ ಹಸಿ, 33 ಮೆಟ್ರಿಕ್ ಟನ್ ಒಣ ಕಸ ಉತ್ಪತ್ತಿಯಾಗುತ್ತದೆ. ಕಸ ವಿಲೇವಾರಿಗೆ 134 ಕಾಂಪ್ಯಾಕ್ಟರ್‌ಗಳು, 11 ಟಿಪ್ಪರ್, 885 ಆಟೋ ಟಿಪ್ಪರ್ ಬಳಸಲಾಗುತ್ತಿದೆ. ವಲಯದಲ್ಲಿ ನೇರ ವೇತನ ಪಾವತಿಯ 3613 ಪೌರಕಾರ್ಮಿಕರು, 183 ಹೊರಗುತ್ತಿಗೆ ಮೇಲ್ವಿಚಾರಕರು ಮತ್ತು 420 ಪಾಲಿಕೆಯ ಕಾಯಂ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X