ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರವೂ ಶಾಲೆಗಳಿಗೆ ರಜೆ
ಕಾಸರಗೋಡು, ಜು.22: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಗಳವಾರ (ಜು.23) ಕೂಡಾ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೂ ಈ ರಜೆ ಆದೇಶ ಅನ್ವಯವಾಗಲಿದೆ.
ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಕೂಡಾ ಶಾಲೆಗಳಿಗೆ ರಜೆ ನೀಡಲಾಗಿತ್ತು.
Next Story