Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಡವರ ಹಣ ನುಂಗಿದವರ ರಕ್ಷಿಸುವ ಪ್ರಶ್ನೆಯೇ...

ಬಡವರ ಹಣ ನುಂಗಿದವರ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಕುಮಾರಸ್ವಾಮಿ

ಐಎಂಎ ಬಹುಕೋಟಿ ವಂಚನೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ22 July 2019 5:55 PM IST
share
ಬಡವರ ಹಣ ನುಂಗಿದವರ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು. 22: ‘ಬಡವರ ದುಡ್ಡು ನುಂಗಿದವರಿಗೆ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಯಾವುದೇ ಕಾರಣಕ್ಕೂ ರಕ್ಷಣೆ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಸ್ತಾವದ ಮೇಲಿನ ಚರ್ಚೆ ವೇಳೆ ಬಿಜೆಪಿ ಸದಸ್ಯ ಸಿ.ಟಿ.ರವಿ ಮಾಡಿದ ಟೀಕೆಗೆ ಮಧ್ಯಪ್ರವೇಶಿಸಿದ ಕುಮಾರಸ್ವಾಮಿ, ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಈಗಾಗಲೇ ಸಿಟ್ ತನಿಖಾ ತಂಡ ಕಂಪೆನಿ ವ್ಯವಸ್ಥಾಪಕರನ್ನು ಬಂಧಿಸಿದೆ. ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸಲಿ, ಸತ್ಯಾಂಶ ಹೊರಬರಬೇಕು ಎಂದ ಅವರು, ಕೇಂದ್ರ ಆದಾಯ ತೆರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಐಎಂಎ ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಐಎಂಎ ಕಂಪೆನಿ ನಮ್ಮ ಆಡಳಿತಾವಧಿಯಲ್ಲಿ ಆರಂಭಗೊಂಡಿಲ್ಲ. 10-12 ವರ್ಷಗಳ ಹಿಂದೆಯೇ ಪ್ರಾರಂಭವಾಗಿದೆ. ಆ ಸಂಸ್ಥೆ 250 ಕೋಟಿ ರೂ.ತೆರಿಗೆ ಪಾವತಿಸಿದ್ದಕ್ಕೆ ಕೇಂದ್ರ ಸರಕಾರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ತಮ್ಮ ಕಚೇರಿಯಲ್ಲಿ ಪ್ರಧಾನಿ ಭಾವಚಿತ್ರ ಹಾಕಿದ್ದಾರೆಂಬುದನ್ನು ನೋಡಿದ್ದೇನೆ ಎಂದು ಹೇಳಿದರು.

ಐಎಂಎ ಪ್ರಕರಣದ ಬಗ್ಗೆ ಸಿಟ್ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ ಮುಕ್ತ ತನಿಖೆಗೆ ನಿರ್ದೇಶನ ನೀಡಲಾಗಿದೆ. ಐಎಂಎ ವ್ಯವಸ್ಥಾಪಕರು ನನಗೆ ಯಾವುದೇ ರೀತಿಯಲ್ಲಿಯೂ ವೈಯಕ್ತಿಕ ಪರಿಚಯವಿಲ್ಲ ಎಂದು ಹೇಳಿದರು.

ನಾನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಸಚಿವ ಕೃಷ್ಣ ಬೈರೇಗೌಡ ಪ್ರಸ್ತಾಪಿಸಿದ ಶಾಸಕರೊಬ್ಬರು ರಂಝಾನ್ ಸಂದರ್ಭದಲ್ಲಿ ಇಫ್ತಾರ್ ಕೂಟಕ್ಕೆ ಬಲವಂತವಾಗಿ ಕರೆದುಕೊಂಡು ಹೋಗಿದ್ದರು. ಅದೇ ನನ್ನ ಮೊದಲ ಭೇಟಿ ಎಂದು ಹೇಳಿದರು.

ತಪ್ಪಿತಸ್ಥರನ್ನು ನೇಣಿಗೇರಿಸಿ: ಆರಂಭಕ್ಕೆ ಮಾತನಾಡಿದ ಬಿಜೆಪಿಯ ಸಿ.ಟಿ.ರವಿ, 40 ಸಾವಿರ ಬಡ ಕುಟುಂಬಗಳ ಹಣ ವಂಚನೆ ಆರೋಪದಲ್ಲಿನ ತಪ್ಪಿತಸ್ಥರನ್ನು ನೇಣಿಗೇರಿಸಲಿ. ಅವರ ಪಾಪದ ಹಣದಲ್ಲಿ ಚುನಾವಣೆಗೆ ಕೆಲವರು ಬಳಸಿಕೊಂಡಿದ್ದಾರೆ ಎಂದು ದೂರಿದರು.

ರಾಜ್ಯದ ಆಡಳಿತ ನಡೆಸುವವರು ಗುಪ್ತಚರ ಇಲಾಖೆ ಹೊಂದಿದವರೇ ಪ್ರಕರಣದ ಆರೋಪಿತ ವ್ಯಕ್ತಿಯೊಂದಿಗೆ ಬಿರಿಯಾನಿ ತಿಂದಿದ್ದಾರೆ. ಇದು ಯಾರೆಂಬುದು ದೇಶಕ್ಕೆ ಗೊತ್ತಾಗಬೇಕು. ಆರೋಪಿಗೆ ಸರಕಾರ ನಿಮ್ಮೊಂದಿಗೆ ಇದೆ ಬನ್ನಿ ಎಂದು ಆಹ್ವಾನ ನೀಡಿದ್ದಾರೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X