Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲಾದ್ಯಂತ ಸಾಧಾರಣ ಮಳೆ:...

ಚಿಕ್ಕಮಗಳೂರು ಜಿಲ್ಲಾದ್ಯಂತ ಸಾಧಾರಣ ಮಳೆ: ಭತ್ತದ ಕೃಷಿ ಚಟುವಟಿಕೆ ಬಿರುಸು

ವಾರ್ತಾಭಾರತಿವಾರ್ತಾಭಾರತಿ22 July 2019 9:33 PM IST
share

ಚಿಕ್ಕಮಗಳೂರು, ಜು.22: ಕಳೆದ ಕೆಲ ದಿನಗಳಿಂದ ಭತ್ತದ ಕೃಷಿಕರೊಂದಿಗೆ ಕಣ್ಣಾಮುಚ್ಚಾಲೆಯಾಡುತ್ತಿದ್ದ ಮಳೆ ರವಿವಾರ ಸಂಜೆಯಿಂದ ಜಿಲ್ಲಾದ್ಯಂತ ಬಿರುಸುಗೊಂಡಿದ್ದು, ಸೋಮವಾರ ಬೆಳಗಿನಿಂದಲೇ ನಗರ ಸೇರಿದಂತೆ ಮಲೆನಾಡಿನಾದ್ಯಂತ ಉತ್ತಮ ಮಳೆಯಾಗಿದೆ.

ಕಳೆದ ಎರಡು ವಾರಗಳ ಹಿಂದೆ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿದಿದ್ದ ಮಳೆ ನಂತರದ ದಿನಗಳಲ್ಲಿ ಜಿಲ್ಲೆಯ ಅಲ್ಲಲ್ಲಿ ಸಾಧಾರಣವಾಗಿ ಸುರಿದಿದೆ. ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ಜಿಲ್ಲೆಯಾದ್ಯಂತ ಭತ್ತದ ಕೃಷಿಕರು ಭತ್ತದ ಗದ್ದೆಗಳನ್ನು ಹೂಟೆ ಮಾಡಲಾರಂಭಿಸಿದ್ದು, ಸಸಿಮಡಿಗಳನ್ನು ಸಿದ್ಧಗೊಳಿಸಿದ್ದರು. ಆದರೆ ಮಳೆಯ ಕಣ್ಣಾಮುಚ್ಚಾಲೆ ರೈತರಿಗೆ ನಿರಾಶೆಯನ್ನುಂಟು ಮಾಡಿತ್ತು. 

ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಹಾಗೂ ಬಯಲುಸೀಮೆ ಪ್ರದೇಶವಾದ ತರೀಕೆರೆ ತಾಲೂಕುಗಳು ಜಿಲ್ಲೆಯಲ್ಲಿ ಹೆಚ್ಚು ಭತ್ತ ಬೆಳೆಯುವ ತಾಲೂಕುಗಳಾಗಿವೆ. ಉತ್ತಮ ಮಳೆಯಾಗಿದ್ದಲ್ಲಿ ಈ ಹೊತ್ತಿಗಾಗಲೇ ಭತ್ತದ ನಾಟಿ ಕೆಲಸ ಆರಂಭವಾಗಬೇಕಿತ್ತು. ಆದರೆ ಭತ್ತದ ಕೃಷಿಕರು ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಭತ್ತದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ.

ರವಿವಾರದಿಂದ ಜಿಲ್ಲಾದ್ಯಂತ ಮಳೆ ಧಾರಾಕಾರವಾಗಿ ಸುರಿಯದಿದ್ದರೂ ಸಾಧಾರಣವಾಗಿ ಮಳೆ ಸುರಿಯುತ್ತಿರುವುದರಿಂದ ಭತ್ತದ ಕೃಷಿಕರು ಮತ್ತೆ ಭತ್ತದ ಗದ್ದೆಗಳತ್ತ ಮುಖ ಮಾಡಿದ್ದು, ಕೃಷಿ ಚಟುವಟಿಕೆಗಿಳಿದಿದ್ದಾರೆ. ಅರ್ಧಕ್ಕೆ ನಿಲ್ಲಿಸಿದ್ದ ಭತ್ತದ ಹೂಟೆ ಕೆಲಸಕ್ಕೆ ಚಾಲನೆ ನೀಡುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಸೋಮವಾರ ಮುಂಜಾನೆಯಿಂದ ಜಿಲ್ಲಾದ್ಯಂತ ಸುರಿದ ಸಾಧಾರಣ ಮಳೆಯಿಂದಾಗಿ ಭತ್ತದ ಕೃಷಿಕರಲ್ಲಿ ಉತ್ತಮ ಮಳೆಯ ನಿರೀಕ್ಷೆಯನ್ನು ಜೀವಂತವಾಗಿರಿಸಿದೆ. ಗದ್ದೆಗಳ ಹೂಟೆ ಕೆಲಸವನ್ನು ಪೂರ್ಣಗೊಳಿಸಿರುವ ರೈತರು ಭತ್ತದ ನಾಟಿ ಕೆಲಸಕ್ಕೆ ಸಿದ್ಧತೆ ನಡೆಸಿದ್ದಾರೆ.

ಮಲೆನಾಡಿನ ಶೃಂಗೇರಿ, ಮೂಡಿಗೆರೆ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲವೆಡೆ ಈಗಾಗಲೇ ನಾಟಿ ಕೆಲಸ ಆರಂಭವಾಗಿದ್ದು, ತರೀಕೆರೆ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳಲ್ಲಿ ಭತ್ತದ ಸಸಿ ಕೀಳುವ ಕೆಲಸ ಆರಂಭವಾಗಿದೆ. ಸದ್ಯ ಸುರಿಯುತ್ತಿರುವ ಮಳೆ ನಿರಂತರವಾಗಿ ಸುರಿದಲ್ಲಿ ಭತ್ತದ ಸಸಿ ನಾಟಿ ಕೆಲಸ ಎಲ್ಲೆಡೆ ಬಿರುಸುಗೊಳ್ಳಲಿದೆ.

ಚಿಕ್ಕಮಗಳೂರು ಜಿಲ್ಲೆ ಕಾಫಿಗೆ ಹೆಸರಾಗಿರುವಂತೆ ಭತ್ತದ ಕೃಷಿಗೂ ಈ ಹಿಂದೆ ಹೆಸರಾಗಿತ್ತು. ಆದರೆ ಕಾಫಿ, ಅಡಿಕೆಗೆ ಬೇಡಿಕೆಗ ಹೆಚ್ಚಾದಾಗಿನಿಂದ ಮಲೆನಾಡಿನ ಸಾಂಪ್ರದಾಯಿಕ ಭತ್ತದ ಕೃಷಿಕರು ವಾಣಿಜ್ಯ ಬೆಳೆಗಳತ್ತ ಮುಖ ಮಾಡಿದ್ದಾರೆ. ಪರಿಣಾಮ ಭತ್ತದ ಗದ್ದೆಗಳು ಕಾಫಿ, ಅಡಿಕೆ ತೋಟಗಳಾಗಿ ಮಾರ್ಪಾಡುಗೊಂಡಿವೆ. ಭತ್ತದ ಕೃಷಿಕರು ವಾಣಿಜ್ಯ ಬೆಳೆಗಳತ್ತ ಮುಖಮಾಡಲು ಹವಾಮಾನ ವೈಪರೀತ್ಯ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಕಳೆದ ಕೆಲ ದಶಕಗಳಿಂದ ಜಿಲ್ಲೆಯಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗುತ್ತಿದೆ. ಈ ಬಾರಿಯಂತೂ ವಾಡಿಕೆ ಮಳೆಯ ಅರ್ಧದಷ್ಟು ಮಳೆಯಾಗದಿರುವುದು ರೈತರನ್ನು ಕಂಗೆಡಿಸಿದೆ. ಈ ಹವಾಮಾನ್ಯ ವೈಪರೀತ್ಯ ಮುಂದುವರಿದಲ್ಲಿ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿ ಕಣ್ಮರೆಯಾಗುವ ದಿನ ದೂರವಿಲ್ಲ ಎಂಬುದು ಈ ಭಾಗದ ಕೃಷಿಕರ ಅಭಿಪ್ರಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X