Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮುಂದುವರಿದ ಮಳೆ, ತಗ್ಗು...

ಉಡುಪಿ: ಮುಂದುವರಿದ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಸಿಇಒ ಭೇಟಿ

ವಾರ್ತಾಭಾರತಿವಾರ್ತಾಭಾರತಿ23 July 2019 8:27 PM IST
share
ಉಡುಪಿ: ಮುಂದುವರಿದ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಉಡುಪಿ, ಜು.23: ಉಡುಪಿ ಜಿಲ್ಲೆಯಾದ್ಯಂತ ಮಳೆ ಸತತ ಮೂರನೇ ದಿನವೂ ಮುಂದುವರಿದಿದ್ದು, ಆಗಾಗ ವಿರಾಮ ಪಡೆದು ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ನಾನಾ ಕಡೆಗಳಲ್ಲಿ ಮನೆ, ಸೊತ್ತುಗಳಿಗೆ ಹಾನಿಯಾದ ವರದಿಗಳು ಬಂದಿದ್ದು, ಬುಧವಾರವೂ ಇನ್ನಷ್ಟು ಜೋರಾದ ಮಳೆಸುರಿಯುವ ಸಾಧ್ಯತೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದರಿಂದ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿದ್ದಾರೆ.

ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 12.98 ಸೆ.ಮೀ. ಮಳೆ ಸುರಿದಿದೆ. ಉಡುಪಿಯಲ್ಲಿ 13.37ಸೆ.ಮಿ. ಮಳೆಯಾದರೆ, ಕುಂದಾಪುರದಲ್ಲಿ 15.60 ಸೆ.ಮಿ. ಮಳೆ ಸುರಿದ ಬಗ್ಗೆ ವರದಿಯಾಗಿದೆ. ಕಾರ್ಕಳದಲ್ಲಿ 8.83ಸೆ.ಮಿ.ನಷ್ಟು ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ 20ಸೆ.ಮೀ.ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಿಂದಾಗಿ ಉಡುಪಿ ನಗರಸಭಾ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಅಂಬಾಗಿಲು, ನಿಟ್ಟೂರು, ಮೂಡನಿಡಂಬೂರು, ಬೈಲುಕೆರೆ ಮುಂತಾದ ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿದ್ದು, ಇದರಿಂದ 30ರಿಂದ 40 ಮನೆ ಗಳು ನೀರಿನಿಂದಾವೃತ ವಾಗಿವೆ. ಮಳೆ ಮುಂದುವರಿದರೆ ರಾತ್ರಿ ಮನೆಯಲ್ಲಿದ್ದವರನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಲಾಗುವುದು ಎಂದು ಉಡುಪಿ ತಹಶೀಲ್ದಾರ್ ಅವರು ತಿಳಿಸಿದ್ದಾರೆ.

ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕುಂದಾಪುರ-ಬೈಂದೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಇಕ್ಕೆಲಗಳಲ್ಲಿ ಹಲವು ಕಡೆ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಗುತ್ತಿಗೆದಾರರು ನೀರು ಸರಾಗವಾಗಿ ಹರಿದು ಹೋಗಲು ಬೇಕಾದ ವ್ಯವಸ್ಥೆ ಮಾಡಿದ್ದಾರೆ ಎಂದು ಬೈಂದೂರು ತಾಲೂಕು ಕಚೇರಿ ಮೂಲಗಳು ತಿಳಿಸಿವೆ.

ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆ ಹಾಗೂ ಆಗಾಗ ಬೀಸಿದ ಬಲವಾದ ಗಾಳಿಗೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಗಳು ಬಂದಿವೆ. ಇಂದು ಸಂಜೆಯ ವೇಳೆಗೆ ಬೈಂದೂರು ತಾಲೂಕು ಕಂಬದಕೋಣೆ ಗ್ರಾಮದ ಹಳಗೇರಿ ಎಂಬಲ್ಲಿ ಜಯಲಕ್ಷ್ಮೀ ಎಂಬ ವರ ಮನೆಯ ಮೇಲೆ ಮರಬಿದ್ದು ಭಾರೀ ಹಾನಿ ಸಂಭವಿಸಿದ್ದು, ನಷ್ಟದ ಕುರಿತು ಇನ್ನೂ ಮಾಹಿತಿ ಬಂದಿಲ್ಲ. ಶೀರೂರು ಗ್ರಾಮದ ಚಂದ್ರಕಲಾ ಎಂಬವರ ಮನೆ ಭಾರೀ ಮಳೆಗೆ ಭಾಗಶ: ಹಾನಿಗೊಂಡಿದ್ದು 20,000ರೂ. ನಷ್ಟ ಸಂಭವಿಸಿದೆ.

ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಾಗರಾಜ ಖಾರ್ವಿ ಎಂಬವರ ಮನೆಯ ಮೇಲೆ ಇಂದು ಮಧ್ಯಾಹ್ನದ ವೇಳೆ ಮರಬಿದ್ದು ಒಂದು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಅದೇ ರೀತಿ ಹಂಗಳೂರು ಗ್ರಾಮದಲ್ಲಿ ಜಯಲಕ್ಷ್ಮೀ ಎಂಬವರ ಮನೆಯ ದನದ ಕೊಟ್ಟಿಗೆ ಮೇಲೆ ಮರ ಬಿದ್ದು 20,000ರೂ. ನಷ್ಟ ಸಂಭವಿಸಿದೆ. ಹೊಂಬಾಡಿ ಮಂಡಾಡಿ ಗ್ರಾಮದ ರುಕ್ಮಿಣಿ ಕುಲಾಲ್ತಿ ಅವರ ವಾಸದ ಮನೆಗೆ ಭಾಗಶ: ಹಾನಿಯಾ ಗಿದ್ದು 8,000ರೂ.ನಷ್ಟ ಸಂಭವಿಸಿದೆ ಎಂದು ತಾಲೂಕು ಕಚೇರಿಯ ಮೂಲಗಳು ತಿಳಿಸಿವೆ.

ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ಸುಮತಿ ಶೆಟಟಿ ಅವರ ಮನೆಯ ಮೇಲೆ ಮರಬಿದ್ದು 50,000ರೂ., ಬೆಳ್ಳಂಪಳ್ಳಿ ಗ್ರಾಮದ ಸೀತಾ ಶೆಟ್ಟಿ ಎಂಬವರ ಮನೆ ಮೇಲೆ ತೆಂಗಿನ ಮರ ಬಿದ್ದು 50,000ರೂ. ಹಾನಿ. ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಲಕ್ಷ್ಮೀ ಎಂಬವರ ಮನೆ ಕುಸಿದು 10,000ರೂ. ನಷ್ಟ ಸಂಭವಿಸಿದೆ.

ಹಾನಿಗೊಂಡ ಮನೆಗೆ ಡಿಸಿ ಭೇಟಿ: ಇಂದು ಬೆಳಗ್ಗೆ 7:30ರ ಸುಮಾರಿಗೆ ಕೋಟತಟ್ಟು ಗ್ರಾಮದ ಗೋಪಿ ಪೂಜಾರ್ತಿ ಎಂಬವರ ಮನೆಯ ಮಾಡು, ಹೆಂಚುಗಳು ಭಾರೀ ಗಾಳಿಮಳೆಯಿಂದ ಹಾರಿಹೋಗಿ, ಗೋಡೆ ಬಿರುಕು ಬಿಟ್ಟಿದ್ದು, ಈ ಮನೆಗೆ ಅಪರಾಹ್ನ 12 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಜಿಪಂ ಸಿಇಓ ಸಿಂಧು ಬಿ.ರೂಪೇಶ್ ಅರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಮನೆಗೆ 17,500ರೂ. ನಷ್ಟ ಸಂಭವಿಸಿರುವ ಬಗ್ಗೆ ತಾತ್ಕಾಲಿಕವಾಗಿ ಅಂದಾಜಿಸಲಾಗಿದ್ದು, ಕೂಡಲೇ ತಾತ್ಕಾಲಿಕ ಪರಿಹಾರ ಮೊತ್ತವನ್ನು ವಿತರಿಸುವಂತೆ ಜಿಲ್ಲಾಧಿಕಾರಿಗಳು, ಗ್ರಾಮಕರಣಿಕರಿಗೆ ಸೂಚಿಸಿದರು. ನಾಳೆ 5,200ರೂ. ತಾತ್ಕಾಲಿಕ ಪರಿಹಾರದ ಚೆಕ್‌ನ್ನು ವಿತರಿಸುವುದಾಗಿ ಕೋಟತಟ್ಟು ಗ್ರಾಪಂ ವಿಎ ಸೆಲ್ವರಾಜ್ ತಿಳಿಸಿದ್ದಾರೆ.

ಮಳೆಗೆ ಎರಡು ಬಲಿ: ಭಾರೀ ಮಳೆಯ ಕಾರಣ ಕಳೆದ ಒಂದು ವಾರದಿಂದ ಇಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ. ಬೈಂದೂರು ತಾಲೂಕು ನಂದನವನ ಗ್ರಾಮದ ಬಸನವಜೆಡ್ಡು ಎಂಬಲ್ಲಿ ಸುಬ್ಬು (53) ಎಂಬವರು ಪೇಟೆಗೆಂದು ತೆರಳಿದವರು ಮನೆಗೆ ಮರಳುವ ಹಾದಿಯಲ್ಲಿ ತುಂಬಿದ ತೋಡಿಗೆ ಅಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದು ಅವರ ಮೃತದೇಹ ರವಿವಾರ ಸಂಜೆ ಅದೇ ತೋಡಿನಲ್ಲಿ ಪತ್ತೆಯಾಗಿತ್ತು.

ಅದೇ ರೀತಿ ಬ್ರಹ್ಮಾವರ ತಾಲೂಕು ನಡೂರು ಗ್ರಾಮದ ಲಕ್ಷ್ಮೀ ಎಂಬವರು ನಟ್ಟಿ ಕೆಲಸಕ್ಕೆಂದು ಹೋಗುತ್ತಿರುವಾಗ ದಾರಿಪಕ್ಕದ ಆವರಣವಿಲ್ಲದ ತುಂಬಿದ ಬಾವಿಗೆ ಅಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದರು.

ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

 ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಾನಿಗೊಳಗಾದ ಅನೇಕ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಪಂ ಸಿಇಓ ಸಿಂಧೂ ಬಿ.ರೂಪೇಶ್ ಅವರೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಯ ಹೊಂಬಾಡಿ-ಮುಂಡಾಡಿ, ಗೋಪಾಡಿ, ಕೋಟತಟ್ಟು, ಬೆಳ್ಳಂಪಳ್ಳಿ ಪ್ರದೇಶದಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಹಾನಿಯನ್ನು ಪರಿಶೀಲಿಸಿ, ಹಾನಿಗೊಳಗಾದ ಸಂತ್ರಸ್ಥರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಭಾರತೀಯ ಹವಾಮಾನ ಇಲಾಖೆಯ ಸೂಚನೆಯಂತೆ, ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ, ಈಗಾಗಲೇ ಜು.24ರವರೆಗೆ ರೆಡ್ ಅಲರ್ಟ್ ಘೋಷಿಸ ಲಾಗಿದೆ. ಈ ಸಂದರ್ಭದಲ್ಲಿ ಸುಮಾರು 200 ಮಿ.ಮೀಗೂ ಅಧಿಕ ಮಳೆಯಾ ಗುವ ಸಂಭವವಿದ್ದು, ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದವರು ತಿಳಿಸಿದರು.

ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಸೂಚಿಸಲಾಗಿದ್ದು, ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಪ್ ಮಾಡದಂತೆ ಮತ್ತು ಹಾನಿ ಕುರಿತು ವರದಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೆಪ್ಸಿಬಾ ತಿಳಿಸಿದ್ದಾರೆ.

ತಗ್ಗು ಪ್ರದೇಶದಲ್ಲಿರುವ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಸಂಖ್ಯೆ 1077 ತುರ್ತು ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಜು.2 4ರಂದು ರಜೆಯನ್ನು ಘೋಷಿಸಿದ್ದಾರೆ.

ಮಳೆಯ ಕಾರಣ ಮಂಗಳವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X