Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಡೆಂಗ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ...

'ಡೆಂಗ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ'

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 July 2019 8:56 PM IST
share
ಡೆಂಗ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ

ಮಂಗಳೂರು, ಜು.23: ದ.ಕ. ಜಿಲ್ಲೆಯಲ್ಲಿ ಕಂಡು ಬಂದಿರುವ ಡೆಂಗ್ ರೋಗ ನಿಯಂತ್ರಣಕ್ಕೆ ಅಗತ್ಯ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎಚ್. ಅನಿಲ್‌ ಕುಮಾರ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಈಗಾಗಲೇ ನಡೆಸುತ್ತಿರುವ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಇದರಲ್ಲಿ ಯಾವುದೇ ಲೋಪವನ್ನು ಸಹಿಸಲಾಗದು. ಆರೋಗ್ಯ ಇಲಾಖೆಯು ಮತ್ತು ನಗರಪಾಲಿಕೆ ಸಮರೋಪಾದಿಯಲ್ಲಿ ತೊಡಗಿಕೊಳ್ಳುವಂತೆ ಅವರು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಡೆಂಗ್ ನಿಯಂತ್ರಣದಲ್ಲಿ ಜಿಲ್ಲಾಡಳಿತವನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಲಾಗಿದೆ. ಡೆಂಗ್ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾ ಇಡಲು ನಿರ್ಲಕ್ಷ್ಯ ತೋರಿದ್ದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ಸರಕಾರಿ ಯೋಜನಾ ಕಾರ್ಯಗಳ ಬಗ್ಗೆ ಎಲ್ಲ ತಾಲೂಕುಗಳ ತಹಶೀಲ್ದಾರ್‌ರು ನಿಗಾ ವಹಿಸಿ ಕಾರ್ಯ ನಿರ್ವಹಿಸಿಬೇಕು. ಯಾವುದೇ ಸರಕಾರಿ ಯೋಜನೆಗಳನ್ನು ವಿಳಂಬ ಮಾಡದೇ ಸಕಾಲದಲ್ಲಿ ನಿರ್ವಹಿಸಿಬೇಕು. ಇದರಿಂದ ಯಾವುದೇ ಕೆಲಸ ಕಾರ್ಯಗಳಿಗೂ ಅಡಚಣೆಯಾಗುವುದಿಲ್ಲ ಸಾರ್ವಜನಿಕರಿಗೆ ಸರಿಯಾದ ಸಮಯದಲ್ಲಿ ಸ್ಪಂದನೆ ದೊರಕುತ್ತದೆ ಎಂದು ತಿಳಿಸಿದರು.

ದರ್ಖಾಸು ಪೋಡಿಗಳ ಸಮಸ್ಯೆಗಳ ನಿವಾರಣೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕಂದಾಯ ಇಲಾಖೆ ಮತ್ತು ಸರ್ವೇ ಇಲಾಖೆಗೆ ಸೂಚಿಸಿದ ಅವರು, ಪಡಿತರ ಚೀಟಿ ತ್ವರಿತ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಎಸೆಸೆಲ್ಸಿ ಫಲಿತಾಂಶವನ್ನು ಇನ್ನಷ್ಟು ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಲ್ಲಿ ಜಿಲ್ಲೆಯಲ್ಲಿ 32 ಗ್ರಾಮಗಳಿಗೆ ಅನುಮೋದನೆ ದೊರಕಿದ್ದು, ಪ್ರತೀ ಗ್ರಾಮಗಳಿಗೆ ತಲಾ ಒಂದು ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳು ತಿಳಿಸಿದರು.

ಸೇತುವೆಗಳ ಪರಿಶೀಲನೆ: ಜಿಲ್ಲೆಯಲ್ಲಿರುವ ಎಲ್ಲ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಗ್ರಾಮೀಣ ರಸ್ತೆಗಳಲ್ಲಿರುವ ಸೇತುವೆಗಳ ಗುಣಮಟ್ಟಗಳನ್ನು ಕಾಲಕಾಲಕ್ಕೆ ತಪಾಸಣೆ ನಡೆಸಿ ಪರಿಶೀಲನೆ ನಡೆಸಲು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಶ್ಚಿಮವಾಹಿನಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 265 ಕೋಟಿ ರೂ. ವೆಚ್ಚದಲ್ಲಿ 11 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗುರುಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಮುಂದಿನ ವರ್ಷ ಮಾರ್ಚ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಪಂ ಉಪಕಾರ್ಯದರ್ಶಿ ಮಹೇಶ್, ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X