Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧನಾತ್ಮಕ ಪತ್ರಿಕೋದ್ಯಮದಿಂದ ಆರೋಗ್ಯಪೂರ್ಣ...

ಧನಾತ್ಮಕ ಪತ್ರಿಕೋದ್ಯಮದಿಂದ ಆರೋಗ್ಯಪೂರ್ಣ ಸಮಾಜ: ಪ್ರಕಾಶ್ ಇಳಂತಿಲ

ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ23 July 2019 11:31 PM IST
share
ಧನಾತ್ಮಕ ಪತ್ರಿಕೋದ್ಯಮದಿಂದ ಆರೋಗ್ಯಪೂರ್ಣ ಸಮಾಜ: ಪ್ರಕಾಶ್ ಇಳಂತಿಲ

ಸುಳ್ಯ: ಧನಾತ್ಮಕ ದೃಷ್ಟಿಕೋನದ ಪತ್ರಿಕೋದ್ಯಮದಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ಕಟ್ಟಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಹೇಳಿದ್ದಾರೆ.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ 'ಮಾಧ್ಯಮ ಮತ್ತು ಪ್ರಚಲಿತ ವಿದ್ಯಮಾನ' ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.

ನಮ್ಮ ಸಂಸ್ಕೃತಿ, ಪರಂಪರೆಯ ‌ನೆಲೆಗಟ್ಟನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಮಾಧ್ಯಮಗಳು ಸೇತುವೆಯಾಗಿ ಕಾರ್ಯ ನಿರ್ವಹಿಸುತಿವೆ. ಸ್ವಾತಂತ್ರ್ಯವನ್ನೂ ಪ್ರಜಾಪ್ರಭುತ್ವವನ್ನೂ ಜನರು ಸರಿಯಾಗಿ ಉಪಯೋಗಿಸದಿದ್ದರೆ ವ್ಯವಸ್ಥೆಗೆ ತುಕ್ಕು ಹಿಡಿಯಬಹುದು ಎಂದ ಅವರು ನಮ್ಮ ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸಗಳನ್ನು ಮಾಧ್ಯಮಗಳು ಮಾಡುತ್ತಿವೆ. ಆದರೆ ಇಂದು ಮಾಧ್ಯಮಗಳು ಸ್ವಯಂ ಅವಲೋಕನ ಮಾಡುವುದರ ಜೊತೆಗೆ ಧನಾತ್ಮಕ ಸುದ್ದಿಗಳನ್ನು ಹುಡುಕಬೇಕಾದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

'ಮಾದಕ ವಸ್ತು ತಡೆ ಜಾಗೃತಿಯಲ್ಲಿ ಸಮಾಜದ ಪಾತ್ರ' ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಮ್ಮ ಹಿರಿಯರು ಬದುಕಿದಂತೆ ಇಂದಿನ ಯುವಜನತೆಗೆ ಯಾಕೆ ಬದುಕಲು ಸಾಧ್ಯವಾಗುತ್ತಿಲ್ಲ ಎಂಬ ದೊಡ್ಡ ಪ್ರಶ್ನೆ ನಮ್ಮ ಮುಂದಿದೆ. ಶೆ.56 ರಷ್ಟು ಯುವ ಜನತೆಯನ್ನು ಹೊಂದಿದ ನಮ್ಮ  ದೇಶಕ್ಕೆ ಯುವಜನರ ಮೇಲೆ ದೊಡ್ಡ ನಿರೀಕ್ಷೆ ಇದೆ‌. ಮಾದಕ ವಸ್ತುಗಳ ಜಾಲಕ್ಕೆ ಯುವ ಜನತೆ ಬಲಿಯಾಗುತ್ತಿರುವ ದುರಂತ ಇಂದು ವ್ಯಾಪಕವಾಗುತಿದೆ. ಯುವ ಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗ ದಂತೆ ತಡೆಯಲು ಸಮಾಜದ ಜೊತೆಗೆ ಪೋಷಕರ ಪಾತ್ರ ಬಲು ಮುಖ್ಯ. ಮಕ್ಕಳನ್ನು ಸಾಂಪ್ರದಾಯಿಕವಾಗಿ ಬೆಳೆಸಲು ಪೋಷಕರು ಪ್ರಯತ್ನ ನಡೆಸಬೇಕು ಎಂದರು.

ಸಮಾರಂಭವನ್ನು ಉದ್ಘಾಟಿಸಿ, ಸನ್ಮಾನ ನೆರವೇರಿಸಿ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಅಧ್ಯಕ್ಷ  ಪಿ.ಸಿ.ಜಯರಾಮ  ಪತ್ರಿಕೋದ್ಯಮ ಇಂದು ಅಗಾಧವಾಗಿ ಬೆಳೆದಿದೆ ಜೊತೆಗೆ ಸವಾಲುಗಳು ಹೆಚ್ಚಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಪತ್ರಿಕಾರಂಗ ಇನ್ನಷ್ಟು ಕ್ರಿಯಾಶೀಲರಾಗಬೇಕು ಎಂದರು.

ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ಅವರನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ ಉಪಸ್ಥಿತರಿದ್ದರು.

ಪತ್ರಕರ್ತರಾದ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕರೆ ಪ್ರಸ್ತಾವನೆಗೈದರು. ಲೋಕೇಶ್ ಪೆರ್ಲಂಪಾಡಿ ಅಭಿನಂದನಾ ಭಾಷಣ ಮಾಡಿದರು. ಮಹೇಶ್ ಪುಚ್ಚಪ್ಪಾಡಿ, ಕಿರಣ್ ಪ್ರಸಾದ್ ಕುಂಡಡ್ಕ ಅತಿಥಿಗಳ ಪರಿಚಯ ಮಾಡಿದರು. ದಯಾನಂದ ಕೊರತ್ತೋಡಿ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಸಂಘದ ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ವಂದಿಸಿದರು. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X