Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 27ಕ್ಕೆ ರಾಜ್ಯ ವಿಶೇಷ ಶಾಲೆಗಳ...

ಉಡುಪಿ: 27ಕ್ಕೆ ರಾಜ್ಯ ವಿಶೇಷ ಶಾಲೆಗಳ ಮುಖ್ಯಸ್ಥರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ24 July 2019 9:12 PM IST
share

 ಉಡುಪಿ, ಜು.24: ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ರಾಜ್ಯದ ಎಲ್ಲಾ ವಿಶೇಷ ಶಾಲೆಗಳ ಮುಖ್ಯಸ್ಥರ ಸಮಾವೇಶವೊಂದು ಅ.27ರ ಶನಿವಾರ ಬೆಳಗ್ಗೆ 10:30ಕ್ಕೆ ಅಂಬಲಪಾಡಿಯ ಶ್ಯಾಮಿಲಿ ಸಭಾಭವನದಲ್ಲಿ ನಡೆಯಲಿದೆ ಎಂದು ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ವಸಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾವೇಶವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದು, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್, ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಕರ್ನಾಟಕ ರಾಜ್ಯ ವಿಶೇಷ ಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಎಚ್.ವಿ.ಗೋಪಾಲಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

 ಸಭೆಯಲ್ಲಿ ರಾಜ್ಯದ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಂಕಷ್ಟ, ಅಲ್ಲಿನ ಶಿಕ್ಷಕರ ಕುರಿತಂತೆ ಸರಕಾರಗಳು ತೋರಿಸುತ್ತಿರುವ ಮಲತಾಯಿ ಧೋರಣೆ, ಶಾಲೆಗಳಿಗೆ ಸಿಗದ ಮೂಲಭೂತ ಸೌಕರ್ಯ ಹಾಗೂ ಅನುದಾನಗಳ ಕುರಿತು ವಿಶೇಷ ಚರ್ಚೆಗಳು ನಡೆಯಲಿವೆ.ಇದರೊಂದಿಗೆ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಸಮನ್ವಯ ಶಿಕ್ಷಣ ಸಮಿತಿಗಳು ತಮ್ಮ ಶಾಲೆಗಳ ಮೇಲೆ ಹೇರುತ್ತಿರುವ ಅನಗತ್ಯ ಒತ್ತಡವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಡಾ.ಶೆಟ್ಟಿ ತಿಳಿಸಿದರು.

ರಾಜ್ಯದಲ್ಲಿ 500ಕ್ಕೂ ಅಧಿಕ ವಿಶೇಷ ಶಾಲೆಗಳಿವೆ. ಇವುಗಳಲ್ಲಿ ಕೆಲವು ಶಾಲೆಗಳು ಮಾತ್ರ ಸರಕಾರದ ಅನುದಾನದಿಂದ ನಡೆಯುತ್ತಿವೆ. ಕರ್ನಾಟಕ ರಾಜ್ಯದಲ್ಲಿ 1982ರ ಅನುದಾನ ನೀತಿ ಸಂಹಿತೆಯಡಿಯಲ್ಲಿ 38 ವಿಶೇಷ ಶಾಲೆಗಳು ಅನುದಾನ ಪಡೆಯುತ್ತಿವೆ. ಇಲ್ಲಿ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ವೇತನವನ್ನು ಮಾತ್ರ ಸರಕಾರ ಭರಿಸುತಿದ್ದು, ಇನ್ಯಾವುದೇ ಅನುದಾನ ಈ ಶಾಲೆಗಳಿಗೆ ಲಭಿಸುತ್ತಿಲ್ಲ. ನಿವೃತ್ತರಾದ ಯಾರಿಗೂ ನಿವೃತ್ತಿ ವೇತನ ಸಿುತ್ತಿಲ್ಲ ಎಂದು ಅವರು ವಿವರಿಸಿದರು.

2010-11ರಲ್ಲಿ ಜಾರಿಗೆ ಬಂದ ಶಿಶು ಕೇಂದ್ರೀಕೃತ ಸಹಾಯಧನ ಯೋಜನೆ ಯಲ್ಲಿ ಸುಮಾರು 136 ಸಂಸ್ಥೆಗಳು ಅನುದಾನವನ್ನು ಪಡೆಯುತಿದ್ದು, ಇಲ್ಲಿ ವಿಶೇಷ ಮಕ್ಕಳ ತಲೆ ಎಣಿಕೆ ಆಧಾರದಲ್ಲಿ ಅನುದಾನ ನೀಡಲಾಗುತ್ತಿದೆ. ಆದರೆ ಭಾರತೀಯ ಪುನರ್ವಸತಿ ಸಂಸ್ಥೆ (ಆರ್‌ಸಿಐ) ಮಾನ್ಯತೆ ಹೊಂದಿದ ತರಬೇತಿ ಶಿಕ್ಷಣವನ್ನು ಪಡೆದ ವಿಶೇಷ ಶಿಕ್ಷಕರು ಮಾತ್ರ ಇಲ್ಲಿ ಕಲಿಸಬೇಕು. ಬಳಿಕ ಆರ್‌ಸಿಐನಲ್ಲಿ ಹೆಸರು ನೊಂದಾಯಿಸಬೇಕು. ಅನಂತರವೂ ಅದನ್ನು ಪುನರ್ ನವೀಕರಣಗೊಳಿಸಬೇಕು ಎಂಬ ನಿಯಮಗಳನ್ನು ಅಂಗವಿಕಲರ ಸಬಲೀಕರಣ ಇಲಾಖೆ ವಿಧಿಸುತ್ತಿರುವುದು ದುರದೃಷ್ಟಕರ ಎಂದು ಅವರು ನುಡಿದರು.

25 ವರ್ಷದಾಟಿದ ವಿಶೇಷ ಚೇತನರಿಗೆ ಯಾವುದೇ ವೃತ್ತಿ ತರಬೇತಿ ಯಾಗಲೀ, ಪುನರ್ವಸತಿ ವ್ಯವಸ್ಥೆಯಾಗಲಿ ರಾಜ್ಯದಲ್ಲಿ ಇರುವುದಿಲ್ಲ. ಅಲ್ಲದೇ ಶಿಶುಕೇಂದ್ರಿತ ಸಹಾಯಧನ ಯೋಜನೆಯಲ್ಲಿ ವಿಶೇಷ ಶಿಕ್ಷಕರಿಗೆ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗೆ ಕನಿಷ್ಠ ವೇತನವೂ ಸಿಗುತ್ತಿಲ್ಲ. ಹೀಗಾಗಿ ಇಲ್ಲಿ ಕಲಿಸುವ ಶಿಕ್ಷಕರಿಗೆ ಯಾವುದೇ ರೀತಿಯ ಆರ್ಥಿಕ ಸೌಲಭ್ಯಗಳಾಗಲಿ, ಸೇವಾ ಭದ್ರತೆಯಾಗಲಿ ಇಲ್ಲ ಎಂದವರು ವಿಷಾಧಿಸಿದರು.

ರಾಜ್ಯದಲ್ಲಿ ಬುದ್ಧಿಮಾಂದ್ಯತೆ ಹೊಂದಿದ ಮಕ್ಕಳಿಗೆ ಹಾಗೂ ವಯಸ್ಕರಿಗೆ ಕೇವಲ ಸರಕಾರೇತರ ಸಂಸ್ಥೆಗಳು ಮಾತ್ರ ತರಬೇತಿ ಹಾಗೂ ವಿಶೇಷ ಶಿಕ್ಷಣವನ್ನು ನೀಡುತ್ತಿವೆ. ರಾಜ್ಯ ಸರಕಾರ ಈವರೆಗೆ ಇವರಿಗೆ ಯಾವುದೇ ವಿಶೇಷ ಶಾಲೆಗಳನ್ನಾಗಲಿ, ಪುನರ್ವಸತಿ ಕೇಂದ್ರಗಳನ್ನಾಗಲಿ ತೆರೆದಿಲ್ಲ. ಈ ನಿಟ್ಟಿನಲ್ಲಿ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೇರ್ಪಡಿಸಿ ಪ್ರತ್ಯೇಕ ಸ್ವತಂತ್ರ ಇಲಾಖೆಯಾಗಿ ಘೋಷಿಸಬೇಕೆಂಬುದು ಸಂಘದ ಆಗ್ರಹವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಂಘದ ಅಧ್ಯಕ್ಷೆ ಆಗ್ನೇಸ್ ಕುಂದರ್, ಜಿಲ್ಲಾ ಘಟಕದ ಅಧ್ಯಕ್ಷೆ ಡಾ.ಕಾಂತಿ ಹರೀಶ್, ಸ್ಪಂದನಾ ಸಂಸ್ಥೆಯ ಜನಾರ್ದನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X