Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೋಕಸಭೆ ಚುನಾವಣೆ ಪ್ರಕ್ರಿಯೆ: 189 ಕೋಟಿ...

ಲೋಕಸಭೆ ಚುನಾವಣೆ ಪ್ರಕ್ರಿಯೆ: 189 ಕೋಟಿ ರೂ. ಅಕ್ರಮ ನಗದು ಪತ್ತೆ- ಐಟಿ

ವಾರ್ತಾಭಾರತಿವಾರ್ತಾಭಾರತಿ24 July 2019 9:42 PM IST
share
ಲೋಕಸಭೆ ಚುನಾವಣೆ ಪ್ರಕ್ರಿಯೆ: 189 ಕೋಟಿ ರೂ. ಅಕ್ರಮ ನಗದು ಪತ್ತೆ- ಐಟಿ

ಬೆಂಗಳೂರು, ಜು.24: ಲೋಕಸಭಾ ಚುನಾವಣೆ ಪ್ರಕ್ರಿಯೆ ಸಂಬಂಧ ಅಕ್ರಮ ಹಣ ಪತ್ತೆಗಾಗಿ ಕರ್ನಾಟಕ ಹಾಗೂ ಗೋವಾ ವಲಯದಲ್ಲಿ 158 ತಂಡ ರಚಿಸಿ, 189 ಕೋಟಿ ರೂ.ನಗದು ಅಕ್ರಮ ಹಣ ಪತ್ತೆಹಚ್ಚಲಾಗಿದೆ ಎಂದು ತೆರಿಗೆ ಇಲಾಖೆ ಪ್ರಧಾನ ಮುಖ್ಯ ಆಯುಕ್ತ (ಕರ್ನಾಟಕ-ಗೋವಾ ವಲಯ) ಬಿ.ಆರ್.ಬಾಲಕೃಷ್ಣನ್ ಹೇಳಿದ್ದಾರೆ.

ಬುಧವಾರ ನಗರದ ಆದಾಯ ತೆರಿಗೆ ಕಚೇರಿಯಲ್ಲಿ ಇಲಾಖೆಯ 159ನೆ ವರ್ಷಾಚರಣೆ ಹಾಗೂ ಆದಾಯ ತೆರಿಗೆ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಒಟ್ಟು 7563 ಕೋಟಿ ರೂ.ನಷ್ಟು ಆದಾಯ ಮರೆಮಾಚಿದ ಪ್ರಕರಣಗಳನ್ನು ಪತ್ತೆ ಹಚ್ಚಿದೆ. ತೆರಿಗೆ ವಂಚಕರ ವಿರುದ್ಧ 335 ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಅದೇ ರೀತಿ, 2019ರಲ್ಲಿ 87 ಪ್ರಕರಣಗಳಲ್ಲಿ 573 ಕೋಟಿ ಬೇನಾಮಿ ಆಸ್ತಿ ಪತ್ತೆಯನ್ನು ಪತ್ತೆಹಚ್ಚಲಾಗಿದ್ದು, ತೆರಿಗೆಗಳ್ಳರ ವಿರುದ್ಧ 2016ರ ಬೇನಾಮಿ ಆಸ್ತಿ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ ಎಂದರು.

3ನೇ ಸ್ಥಾನ: ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ-ಗೋವಾ ವಲಯ ಮೂರನೇ ಸ್ಥಾನದಲ್ಲಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ವಲಯದಿಂದ 1.51 ಲಕ್ಷ ಕೋಟಿ ರೂ. ಆದಾಯ ತೆರಿಗೆ ಸಂಗ್ರಹದ ಗುರಿ ಹೊಂದಿದೆ ಎಂದು ಹೇಳಿದರು.

ಕರ್ನಾಟಕ-ಗೋವಾ ವಲಯದಲ್ಲಿ ಕಳೆದ ಹತ್ತು ವರ್ಷದ ತೆರಿಗೆ ಸಂಗ್ರಹದಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ. 2008-09ರಲ್ಲಿ ತೆರಿಗೆ ಸಂಗ್ರಹ ಮೊತ್ತ ಕೇವಲ 30 ಸಾವಿರ ಕೋಟಿ ರೂ.ನಷ್ಟಿತ್ತು. ಕಳೆದ ವರ್ಷ ನಮ್ಮ ವಲಯದಿಂದ 1.21 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು.

ಪ್ರಸಕ್ತ ವರ್ಷ 1.51 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹೊಂದಿದ್ದೇವೆ. 2013-14ರಲ್ಲಿ 12.73 ಲಕ್ಷದಷ್ಟಿದ್ದ ಆದಾಯ ತೆರಿಗೆ ಹಿಂಪಡೆಯುವವರ ಸಂಖ್ಯೆ 2018-19ರಲ್ಲಿ 41.26 ಲಕ್ಷಕ್ಕೆ ಹೆಚ್ಚಾಗಿದೆ. ವಲಯದಲ್ಲಿ ಆದಾಯ ತೆರಿಗೆ ಸೋರಿಕೆ ತಡೆಗೆ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಾಲಕೃಷ್ಣನ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ಬೆಂಗಳೂರು ವಲಯದ ಕೇಂದ್ರ ತೆರಿಗೆ ಪ್ರಧಾನ ಆಯುಕ್ತ ಡಿ.ಪಿ.ನಾಗೇಂದ್ರ ಕುಮಾರ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X