Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ & ಸಂಸ್ಕೃತಿ ಇಲಾಖೆಯಿಂದ...

ಕನ್ನಡ & ಸಂಸ್ಕೃತಿ ಇಲಾಖೆಯಿಂದ ಸಂಘ-ಸಂಸ್ಥೆಗಳಿಗೆ ವಾರ್ಷಿಕ ಅನುದಾನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 July 2019 10:53 PM IST
share

ಬೆಂಗಳೂರು, ಜು.24: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018-19 ನೆ ಸಾಲಿನಲ್ಲಿ ಧನಸಹಾಯಕ್ಕೆ ಆಯ್ಕೆಯಾಗಿದ್ದ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ನೀಡುವ ಸಹಾಯಧನವನ್ನು ಬಿಡುಗಡೆ ಮಾಡಿದೆ.

ಹಿಂದಿನ ವರ್ಷ ಧನಸಹಾಯ ಪ್ರಕ್ರಿಯೆ ಅಂತಿಮವಾಗುವ ವೇಳೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ವಿಳಂಬವಾಗಿತ್ತು. ಹೀಗಾಗಿ, ಧನಸಹಾಯ ಪ್ರಕ್ರಿಯೆ ಸ್ಥಗಿತ ಮಾಡಿದ್ದರು. ಈ ಯೋಜನೆಯ ಅನುದಾನವನ್ನು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಪ್ರತ್ಯೇಕವಾಗಿಡಲಾಗಿತ್ತು. ಇದೀಗ ವಿವಿಧ ಸಂಘ-ಸಂಸ್ಥೆಗಳಿಗೆ, ವಾದ್ಯ ಪರಿಕರಗಳ ಖರೀದಿಗೆ ಹಾಗೂ ಚಿತ್ರಕಲೆಗೆ ಸುಮಾರು 11.60 ಕೋಟಿ ರೂ.ಗಳಷ್ಟು ಹಂಚಿಕೆ ಮಾಡಲಾಗಿದೆ.

ರಾಜ್ಯದ 593 ಸಂಘ-ಸಂಸ್ಥೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದ್ದು, ಚಿತ್ರಕಲೆ, ಶಿಲ್ಪಕಲೆ ಪ್ರದರ್ಶನಕ್ಕೆ 193 ಮಂದಿ ಕಲಾವಿದರಿಗೆ ಅನುದಾನ ನೀಡಲಾಗಿದೆ. ಅದೇ ರೀತಿಯಲ್ಲಿ ವಾದ್ಯ ಪರಿಕರ ಹಾಗೂ ವೇಷಭೂಷಣ ವಿಭಾಗದಲ್ಲಿ 363 ಮಂದಿ ಅನುದಾನ ಪಡೆದುಕೊಂಡಿದ್ದಾರೆ.

ಧಾರವಾಡ ಜಿಲ್ಲೆಯ ಸಾಹಿತ್ಯ ಸಂಭ್ರಮ ಟ್ರಸ್ಟ್, ಬೆಂಗಳೂರು ನಗರದ ರಂಗ ನಿರಂತರ ಸಾಂಸ್ಕೃತಿಕ ಸಂಘ, ಇಂದಿರಾನಗರದ ಸಂಗೀತ ನಭಾ ಅತಿ ಹೆಚ್ಚು ಅನುದಾನ (ತಲಾ 15 ಲಕ್ಷ ರೂ.ಗಳು) ಪಡೆದಿವೆ. ಇನ್ನುಳಿದಂತೆ ಸಹಾಯಧನ ಪಟ್ಟಿ ಬಿಡುಗಡೆಯಾದ ಕೂಡಲೇ ಕೆಲವು ಸಂಘ-ಸಂಸ್ಥೆಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಯ್ಕೆ ಸಲಹಾ ಸಮಿತಿಯು ಪರಿಶೀಲಿಸಿ, ಸೂಚಿಸಿದ ಕೆಲ ಸಂಘ-ಸಂಸ್ಥೆಗಳನ್ನು ಸರಕಾರ ಕೈ ಬಿಟ್ಟಿದೆ. ಅಲ್ಲದೆ, ಕೆಲ ಸಂಘ-ಸಂಸ್ಥೆಗಳಿಗೆ ಅನುದಾನವನ್ನು ಕಡಿಮೆ ಮಾಡಲಾಗಿದೆ. ಸಾಣೇಹಳ್ಳಿ ರಂಗಶಿಕ್ಷಣ ಕೇಂದ್ರಕ್ಕೆ ಪ್ರತಿಬಾರಿಯೂ 50 ಲಕ್ಷದಷ್ಟು ಅನುದಾನ ನೀಡುತ್ತಿದ್ದರು. ಆದರೆ, ಈ ಬಾರಿ ಕೇವಲ 10 ಲಕ್ಷ ನೀಡಲಾಗಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಹಾಗೂ ಧನ ಸಹಾಯ ಆಯ್ಕೆ ಸಮಿತಿ ಸದಸ್ಯ ಜೆ.ಲೋಕೇಶ್ ಅಸಮಾಧಾನ ಹೊರಹಾಕಿದ್ದಾರೆ.

ಅಗತ್ಯ ದಾಖಲೆಗಳನ್ನು ಸಲ್ಲಿಸದ ಸಂಘ-ಸಂಸ್ಥೆಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಅನುದಾನ ನೀಡಲಾಗಿದೆ. ಕನಿಷ್ಠ 50 ಸಾವಿರದಿಂದ ಗರಿಷ್ಠ 15 ಲಕ್ಷದವರೆಗೂ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೊಸ ನೀತಿ ಜಾರಿ: 2019-20 ನೆ ಸಾಲಿನಲ್ಲಿ ಸಂಘ-ಸಂಸ್ಥೆಗಳಿಗೆ ಅನುದಾನ ಹಂಚಿಕೆ ಸಂಬಂಧ ಹೊಸ ನೀತಿ ಜಾರಿಗೆ ತರುವ ಚಿಂತನೆಯಿದೆ. ಇದರಿಂದ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X