ಜು. 27: ಬ್ಯಾರಿ ವ್ಯಾಕರಣ ಗ್ರಂಥ ಬಿಡುಗಡೆ
ಮಂಗಳೂರು, ಜು.25: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹೊರತಂದ ಬ್ಯಾರಿ ವ್ಯಾಕರಣ ಗ್ರಂಥದ ಬಿಡುಗಡೆ ಕಾರ್ಯಕ್ರಮವು ಜು.27ರಂದು ಅಪರಾಹ್ನ 3 ಗಂಟೆಗೆ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಕರಂಬಾರ್ ತಿಳಿಸಿದ್ದಾರೆ.
ನಗರದ ಖಾಸಗಿ ಹೊಟೇಲಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಜಿ.ಎ.ಬಾವ ಗ್ರಂಥವನ್ನು ಬಿಡುಗಡೆ ಮಾಡಲಿದ್ದು, ಹಂಪಿ ವಿವಿಯ ನಿವೃತ್ತ ಪ್ರಾಧ್ಯಾಪಕ ಮತ್ತು ಡೀನ್ ಪ್ರೊ ಎ.ವಿ. ನಾವಡ ಬ್ಯಾರಿ ವ್ಯಾಕರಣ ಗ್ರಂಥವನ್ನು ಪರಿಚಯಿಸಲಿದ್ದಾರೆ.
ಅತಿಥಿಗಳಾಗಿ ತುಳು ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ವಿವಿ ಕುಲಸಚಿವ ಪ್ರೊ.ಎ.ಎಂ.ಖಾನ್, ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್ ಎಂ.ಎ.,ಮಂಗಳೂರು ವಿವಿ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಪ್ರೊ. ಅರಬಿ ಯು. ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಯಾರಿ ವ್ಯಾಕರಣ ಗ್ರಂಥದ ಸಂಪಾದಕರಾದ ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಮತ್ತು ಅಬ್ದುಲ್ ರಝಾಕ್ ಅನಂತಾಡಿ ಉಪಸ್ಥಿತರಿದ್ದರು.







